ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಸರ್ಕಾರಕ್ಕೆ ಸಭಾಪತಿ ಪತ್ರ ಬರೆದು ತಿಳಿಸಿದ್ದಾರೆ. ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಮಾ.25): ರಾಜ್ಯದ ಪಶುಸಂಗೋಪನೆ ಇಲಾಖೆಯಲ್ಲಿ ಎಂಟು ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿರುವ 1200 ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದು ಶ್ಲಾಘನೀಯ. ಆದರೆ, ಈ ಪ್ರಕ್ರಿಯೆಯಿಂದ ಪಶು ಸಂಗೋಪನಾ ಇಲಾಖೆಯ ಅಭಿವೃದ್ಧಿ ಮೇಲೆ ಪರಿಣಾಮ ಬೀರುವುದಲ್ಲದೆ, ಸಿಬ್ಬಂದಿಗಳ ಕೊರತೆಯೂ ಎದ್ದು ಕಾಣುವಂತಿದೆ ಎಂದು ಅವರು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರಿಗೆ ಬರೆದಿರುವ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.
undefined
ಖಾಸಗಿ ಶಾಲೆಗಳಿಗೆ ನೆರವು ನೀಡಲು ಸರ್ಕಾರಕ್ಕೆ ಪತ್ರ ಬರೆದ ಹೊರಟ್ಟಿ
ಈ ಹಿನ್ನೆಲೆಯಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಹಾಗೂ ಪಶು ಇಲಾಖೆಯಲ್ಲಿ ನೇಮಕಗೊಂಡು ಬೇರೆ ಇಲಾಖೆಗೆ ನಿಯೋಜನೆಗೊಂಡ ಸಿಬ್ಬಂದಿಗಳ ಸೇವೆಯನ್ನು ಮಾತೃ ಇಲಾಖೆಗೆ ಹಿಂಪಡೆಯುವುದು ಅವಶ್ಯಕವಾಗಿದೆ. ಈ ಬಗ್ಗೆ ತುರ್ತು ಕ್ರಮ ಕೈಗೊಂಡು, ಕೃಷಿ ಪ್ರಧಾನವಾದ ನಮ್ಮ ರಾಜ್ಯದಲ್ಲಿ ಎಲ್ಲ ರಾಜ್ಯಗಳ ಯೋಗಕ್ಷೇಮಕ್ಕೆ ರೈತಾಪಿ ವರ್ಗದವರಿಗೆ ಅನುಕೂಲ ಕಲ್ಪಿಸಿಕೊಡಬೇಕು.
ಕೃಷಿ ಪ್ರಧಾನವಾದ ನಮ್ಮ ರಾಜ್ಯದಲ್ಲಿ ರಾಸುಗಳ ಅಭಿವೃದ್ಧಿ, ಕಾಳಜಿ ಹಾಗೂ ಆರೈಕೆ ನಮ್ಮೆಲ್ಲರ ಹೊಣೆಯೇ ಸರಿ. ಪ್ರಸ್ತುತ ಪಶು ಸಂಗೋಪನೆ ಇಲಾಖೆಯಲ್ಲಿ ಸುಮಾರು 8000 ಹುದ್ದೆಗಳು ಖಾಲಿ ಇರುವುದಲ್ಲದೆ, ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಗೊಂಡ ಸುಮಾರು 1200 ಸಿಬ್ಬಂದಿ ವರ್ಗದವರು ಬೇರೆ ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕರ್ತವ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದಿದ್ದಾರೆ.