Bengaluru: ಶಿವರಾತ್ರಿ ಹಬ್ಬ ಹಿನ್ನೆಲೆ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ!

By Sathish Kumar KHFirst Published Mar 7, 2024, 4:45 PM IST
Highlights

ಮಹಿಳಾ ದಿನಾಚರಣೆ ದಿನವೇ ಇಡೀ ಬೆಂಗಳೂರು ನಗರದಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಬೆಂಗಳೂರು (ಮಾ.07): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಾಂಕ ಮಾ.8ರ ಮಹಿಳಾ ದಿನಾಚರಣೆಯಂದು ಶಿವರಾತ್ರಿ ಹಬ್ಬ ಆಗಮಿಸಿರುವ ಹಿನ್ನೆಲೆಯಲ್ಲಿ ಒಂದು ದಿನದ ಮಟ್ಟಿಗೆ ಸಂಪೂರ್ಣವಾಗಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಿಷೇಧಿಸಲಾಗಿದೆ.

ಮಾ.8ರ ಶುಕ್ರವಾರ 'ಮಹಾ ಶಿವರಾತ್ರಿ' ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜೊತೆಗೆ, ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಮಾಂಸ ಮಾರಾಟ ಮಳಿಗೆಗಳಲ್ಲಿ ಸಂಪೂರ್ಣವಾಗಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬಿಎಂಟಿಸಿ ಬಸ್‌ ಸಿಸಿಟಿವಿ ಕ್ಯಾಮರಾದಲ್ಲಿ ಅಚಾನಕ್ ಸೆರೆಸಿಕ್ಕ ರಾಮೇಶ್ವರಂ ಕೆಫೆ ಬಾಂಬರ್!

click me!