ಬೆಂಗಳೂರಿನ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವುಗೊಳಿಸಿ; ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ

Published : Mar 16, 2024, 03:49 PM IST
ಬೆಂಗಳೂರಿನ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವುಗೊಳಿಸಿ; ಬಿಬಿಎಂಪಿ ಮುಖ್ಯ ಆಯುಕ್ತರ ಆದೇಶ

ಸಾರಾಂಶ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ  ಎಲ್ಲ ಬೆಂಗಳೂರಿನ ಜನಪ್ರತಿನಿಧಿಗಳ ಹೆಸರು ಮತ್ತು ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಬೆಂಗಳೂರು (ಮಾ.16): ಸಾರ್ವತ್ರಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕೂಡಲೆ, ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆರವುಗೊಳಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು. ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಿ ಎಲ್ಲಿಯೂ ಉಲ್ಲಂಘನೆಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರಿ ನೌಕರರ ಮೂಗಿಗೆ 7ನೇ ವೇತನ ಆಯೋಗದ ತುಪ್ಪ ಸವರಿದ ಸರ್ಕಾರ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಯಾರಾದರು ಪೋಸ್ಟರ್, ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಇರುವಂತಿಲ್ಲ. ಇದ್ದರೆ ಕೂಡಲೆ ಅದನ್ನು ತೆಗೆಯುವುದು ಅಥವಾ ಬಟ್ಟೆಯ ಮೂಲಕ ಕಾಣದಂತೆ ಮುಚ್ಚಬೇಕು ಎಂದು ತಿಳಿಸಿದರು.

ರಸ್ತೆ ಬದಿಯಿರುವ ನಾಮಫಲಕಗಳಲ್ಲಿರುವ ಜನಪ್ರತಿನಿಧಿಗಳ ಹೆಸರುಗಳನ್ನು ತೆಗೆಯಬೇಕು. ಎಲ್ಲೂ ಜನಪ್ರತಿನಿಧಿಗಳ ಹೆಸರಾಗಲಿ, ಸಂಪರ್ಕ ಸಂಖ್ಯೆಯಾಗಲಿ ಇರುವಂತಿಲ್ಲ. ಪಾಲಿಕೆಯ ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದಾದರು ಕಾರ್ಯಕ್ರಮ ಆಯೋಜಿಸಿದ್ದಲ್ಲಿ ತತ್‌ಕ್ಷಣ ಅದನ್ನು ರದ್ದುಪಡಿಸಬೇಕು. ಚುನಾವಣೆ ಮುಗಿಯುವವರೆಗೆ ಯಾವುದೇ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಮುಂದಿನ 24 ಗಂಟೆಗಳ ಒಳಗೆ ಸರ್ಕಾರಿ ಅಧಿಕೃತ ವೆಬ್‌ಸೈಟ್‌ ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಛಾಯಾಚಿತ್ರಗಳನ್ನು ತೆಗೆಯಬೇಕು ಎಂದು ತಿಳಿಸಿದರು.

ಖರ್ಗೆ ಸಂಸತ್ತಿನಲ್ಲೇ ಅಬ್‌ ಕೀ ಬಾರ್‌ 400 ಪಾರ್‌ ಎಂದಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ನಿಯಂತ್ರಣ ಕೊಠಡಿ ಸ್ಥಾಪನೆ: ಲೋಕ ಸಭಾ ಚುನಾವಣೆ ಹಿನ್ನೆಲೆ  ಚುನಾವಣಾಧಿಕಾರಿ(RO), ಮತದಾರ ನೋಂದಣಾಧಿಕಾರಿ(ARO) ರವರ ಕಚೇರಿಗಳಲ್ಲಿ 24 ಗಂಟೆಯೊಳಗಾಗಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ‌ ಮೇಲೆ‌ ನಿಗಾವಹಿಸಲು ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗನ್ನು ಸಕ್ರಿಯಗೊಳಿಸಬೇಕು. ಜೊತೆಗೆ, ಪ್ರಮುಖ ಸ್ಥಳಗಳಲ್ಲಿ ಕೂಡಲೆ ಚೆಕ್ ಪೂಸ್ಟ್ ಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಎಂಸಿಸಿ ನೋಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ ಹರೀಶ್ ಕುಮಾರ್, ಡಾ. ಕೆ ದಯಾನಂದ್, ವಿನೋತ್ ಪ್ರಿಯಾ, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಂಧ್ರಪ್ರದೇಶದ X MLA Gummadi Narsaiah ಮನೆಗೆ ಹೋದಾಗ ನನ್ನ ತಂದೆ ಬಳಿಗೆ ಹೋದಂತಾಯ್ತು - Shiva Rajkumar