ರಾಮನಗರ, ಕನಕಪುರ ಮೆಡಿಕಲ್ ಕಾಲೇಜು ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರಿಗೇನು ಕೆಲಸ?

By Sathish Kumar KH  |  First Published Nov 30, 2023, 9:14 PM IST

ರಾಮನಗರ ಹಾಗೂ ಕನಕಪುರ ವೈದ್ಯಕೀಯ ಕಾಲೇಜು ನಿರ್ಮಾಣ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯಕ್ತರದ್ದೇನು ಕೆಲಸ? ಎಂದು ವಿಪಕ್ಷ ನಾಯಕರಿಂದ ಪ್ರಶ್ನೆ ಶುರುವಾಗಿದೆ.


ಬೆಂಗಳೂರು (ನ.30): ರಾಮನಗರ ಹಾಗೂ ಕನಕಪುರ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರ ಪಾತ್ರವೇನಿತ್ತು ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕಳೆದ ಹದಿನಾರು ವರ್ಷಗಳಿಂದ ರಾಮನಗರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರವಾಗಿ ಸ್ಥಳ ಆಯ್ಕೆಗೆ ರಾಮನಗರ ಅಥವಾ ಕನಕಪುರ ಸೂಕ್ತವೂ ಎಂಬ ವಿಚಾರದಿಂದ ಭಾರಿ ಗೊಂದಲ ನಡೆಯುತ್ತಿತ್ತು. ರಾಜ್ಯದಲ್ಲಿ ಒಂದೂವರೆ ದಶಕದಿಂದ ರಾಜಕೀಯ ಕಾದಾಟಕ್ಕೆ ವೇದಿಕೆ ಕಲ್ಪಿಸಿಕೊಟ್ಟಿತ್ತು. ರಾಮನಗರ ಜಿಲ್ಲೆಗೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಎಲ್ಲಿ ನಿರ್ಮಾಣ ಮಾಡಬೇಕು ಎಂಬುದರ ಸ್ಥಳ ಆಯ್ಕೆಯು ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ, ಸಂಸದ ಡಿ.ಕೆ. ಸುರೇಶ್ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರತಿಷ್ಠೆಯಾಗಿತ್ತು. ಹೀಗಾಗಿ, 4 ಬಾರಿ ಗುದ್ದಲಿ ಪೂಜೆ ನೆರವೇರಿಸಲಾಗಿದ್ದರೂ ಕಾಮಗಾರಿ ಆರಂಭ ಆಗಿರಲಿಲ್ಲ.

Latest Videos

undefined

ಬೆಂಗಳೂರು ನೈಸ್ ರಸ್ತೆಯಲ್ಲಿ ಬೈಕ್‌ಗೆ ಗುದ್ದಿದ ಗೂಡ್ಸ್ ವಾಹನ: ದಂಪತಿ ಸ್ಥಳದಲ್ಲಿಯೇ ಸಾವು

ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಮನಗರ ಮತ್ತು ಕನಕಪುರ ಎರಡೂ ಸ್ಥಳಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವುದಕ್ಕೆ ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ  ನ.24ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್‌) ಸಿಂಡಿಕೇಟ್ ಸಭೆ ಅನುಮೋದನೆ ನೀಡಿದೆ. ಈ ಮೂಲಕ ರಾಮನಗರದ ವಿಶ್ವವಿದ್ಯಾಲಯದ ಆವರಣದಲ್ಲಿ ಹಾಗೂ ಕನಕಪುರದಲ್ಲಿ ಮತ್ತೊಂದು ಸೇರಿ ರಾಮನಗರ ಜಿಲ್ಲೆಯೊಂದರಲ್ಲಿಯೇ 2 ಸರ್ಕಾರಿ ವೈದ್ಯಕೀಯ ಕಾಲೇಜುಗಳು ನಿರ್ಮಾಣಕ್ಕೆ ಮುಂದಡಿಯಿಡಲಾಗಿದೆ. ಈ ಕುರಿತ ಸಭೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಆರೋಗ್ಯ ಇಲಾಖೆಯೊಂದಿಗೆ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರ ಪಾತ್ರವೇನು ಎಂದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಮೆಡಿಕಲ್ ಕಾಲೇಜು ಚರ್ಚೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರ ಹಾಜರಾತಿ:  ಮೆಡಿಕಲ್ ಕಾಲೇಜು ನಿರ್ಮಾಣ ಕುರಿತಾದ ಚರ್ಚೆ ಮಾಡಿದ ಬಗ್ಗೆ ಸಂಸದ ಡಿ.ಕೆ. ಸುರೇಶ್ ಅವರು ತಮ್ಮ ಸಾಮಾಜಿಕ ಜಾಲತಾಣದ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದರಲ್ಲಿ ರಾಮನಗರ ಮತ್ತು ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದೆನು‌. ಸಭೆಯಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಜಿಲ್ಲಾ ಅರೋಗ್ಯಧಿಕಾರಿ ನಿರಂಜನ್, ವೈದ್ಯಕೀಯ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಕಿಮ್ಸ್ ಸರ್ಜರಿ ವಿಭಾಗದ ಮುಖ್ಯಸ್ಥರಾದ ಡಾ ಭಗವಾನ್, ರಾಜೀವ್ ಗಾಂಧಿ ಆರೋಗ್ಯ ವಿವಿ ಅಧಿಕಾರಿಗಳು, ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು' ಎಂದಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಇನ್ಫೋಸಿಸ್ ನಾರಾಯಣಮೂರ್ತಿಯ ಕಾಂಗ್ರೆಸ್‌ ಗ್ಯಾರಂಟಿ ಕುರಿತ ಹೇಳಿಕೆ ಬೆಂಬಲಿಸಿದ ಸಚಿವ ಪ್ರಿಯಾಂಕ ಖರ್ಗೆ!

ಮೆಡಿಕಲ್ ಕಾಲೇಜು ಸ್ಥಳಾಂತರ ಗೊಂದಲಕ್ಕೆ ತೆರೆ: ರಾಮನಗರ ಜಿಲ್ಲೆಯು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿನಿಧಿಸುವ ಜಿಲ್ಲೆಯಾಗಿದೆ. ಈ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕಳೆದ ಐದಾರು ವರ್ಷಗಳ ಹಿಂದೆಯೇ ಅನುಮತಿ ನೀಡಲಾಗಿದೆ. ಆದರೆ, ಕಾಲೇಜು ನಿರ್ಮಾಣದ ಬಗ್ಗೆ ಸರ್ಕಾರಗಳು ಬದಲಾದಂತೆ ಸ್ಥಳದ ಬದಲಾವಣೆಯೂ ಆಗುತ್ತಿತ್ತು. ಕುಮಾರಸ್ವಾಮಿ ಅವರು ರಾಮನಗರ ಎಂದು ಹೇಳಿದರೆ, ಡಿ.ಕೆ. ಶಿವಕುಮಾರ್ ಅವರು ಕನಕಪುರ ಎಂದು ಹೇಳುತ್ತಿದ್ದರು. ಆದರೆ, ಈಗ ರಾಮನಗರ ಮತ್ತು ಕನಕಪುರ ಎರಡೂ ಸ್ಥಳಗಳಲ್ಲಿ ಪ್ರತ್ಯೇಕ ವೈದ್ಯಕೀಯ ಕಾಲೇಜುಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಮೂಲಕ ಮೆಡಿಕಲ್ ಕಾಲೇಜು ಸ್ಥಳಾಂತರ ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ರಾಮನಗರ ಮತ್ತು ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದೆನು‌.1/3 pic.twitter.com/CmVqPpbRsM

— DK Suresh (@DKSureshINC)
click me!