
ಬೆಂಗಳೂರು(ಮೇ.29): ಹೊರ ರಾಜ್ಯಗಳಿಂದ ಚೆಕ್‌ಪೋಸ್ಟ್‌ಗಳ ತಪಾಸಣಾ ಸಿಬ್ಬಂದಿಯ ಕಣ್ತಪ್ಪಿಸಿ ನಗರಕ್ಕೆ ನುಸುಳಿದ 80 ಮಂದಿಯನ್ನು ಸಾರ್ವಜನಿಕರ ಸಹಕಾರದಿಂದ ಪತ್ತೆ ಮಾಡಿ ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದಿಂದ ಚಕ್ ಪೋಸ್ಟ್‌ಗಳ ತಪಾಸಣಾ ಸಿಬ್ಬಂದಿ ಕಣ್ತಪ್ಪಿಸಿ ನಗರಕ್ಕೆ ನುಸುಳಿದವರ ಬಗ್ಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿತ್ತು. ಈವರೆಗೆ 80 ಅನಧಿಕೃತ ಪ್ರಯಾಣಿಕ ಬಗ್ಗೆ ದೂರುಗಳು ಬಂದಿದ್ದು, ಅವರಿಂದ ಪ್ರಯಾಣ ಇತಿಹಾಸ ಮಾಹಿತಿ ಪಡೆದು ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ ಎಂದರು.
ವಿಮಾನ ಏರಿದ್ಮೇಲೆ ಒಂದು, ಇಳಿದ್ಮೇಲೆ ಇನ್ನೊಂದು: ಮಹಿಳೆಯ ಕಿರಿಕ್
ಸೋಂಕಿನ ಲಕ್ಷಣ ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವಂತೆ ತಿಳಿಸಿದೆ. ಒಂದು ವೇಳೆ ಕ್ವಾರಂಟೈನ್ ಬಿಟ್ಟು ಹೊರಗೆ ಸಂಚರಿಸಿದಲ್ಲಿ, ಅವರ ಮೇಲೆ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ