ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅಲ್ಲದೇ ನೂತನ ಕಮಿಷನರ್‌ನನ್ನು ಸಹ ನೇಮಕಗೊಳಿಸಿದೆ.
ಬೆಂಗಳೂರು, (ಜುಲೈ.18): ನಗರದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಇಂದು (ಶನಿವಾರ) ಎತ್ತಂಗಡಿ ಮಾಡಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಬಿಬಿಎಎಂಪಿ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಮಂಜುನಾಥ್ ಪ್ರಸಾದ್ ಅವರು ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದರು.
ಕೊರೋನಾ ನಿಯಂತ್ರಿಸಲು ಸಂಪೂರ್ಣ ವಿಫಲ: ಬಿಬಿಎಂಪಿಗೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ
ಅನಿಲ್ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯನ್ನು ವಹಿಸಿಕೊಂಡಿದ್ದ ವಿ. ರಶ್ಮಿ ಮಹೇಶ್ ಅವರನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರಿಯಾದ ಕೆಲಸ ಮಾಡುತ್ತಿಲ್ಲ ಎನ್ನುವ ದೂರುಗಳು ಬಂದಿದೆ. ಈ ನಿಟ್ಟಿನಲ್ಲಿ ಬಿ.ಹೆಚ್ ಅನಿಲ್ ಕುಮಾರ್ ಅವರ ವರ್ಗಾವಣೆ ಮಾಡಲಾಗಿದೆ. ಅಲ್ಲದೇ ಕೊರೋನದ ಸಮಯದಲ್ಲಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದು, ಇವರ ವಿರುದ್ದ ಕೋಟ್ಯಾಂತರ ರೂಪಾಯಿ ಹಗರಣದ ಆರೋಪ ಕೂಡ ಕೇಳಿಬಂದಿದೆ.