ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಭರ್ಜರಿ ಆಫರ್: ಡೆಂಘೀ ಬಗ್ಗೆ ರೀಲ್ಸ್ ಮಾಡಿ ಲಕ್ಷ ಬಹುಮಾನ ಗೆಲ್ಲಿ!

Published : Jul 20, 2024, 10:16 AM ISTUpdated : Jul 20, 2024, 11:32 AM IST
ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಭರ್ಜರಿ ಆಫರ್: ಡೆಂಘೀ ಬಗ್ಗೆ ರೀಲ್ಸ್ ಮಾಡಿ ಲಕ್ಷ ಬಹುಮಾನ ಗೆಲ್ಲಿ!

ಸಾರಾಂಶ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿವೆ. ಡೆಂಘೀಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ ಇದರ ಜೊತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಮುಂದಾಗಿದೆ. 

ಬೆಂಗಳೂರು (ಜು.20): ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿವೆ. ಡೆಂಘೀಗೆ ಕಡಿವಾಣ ಹಾಕಲು ಮನೆ ಮನೆ ಸರ್ವೇ ಮಾಡುತ್ತೇವೆ ಎಂದು ಹೊರಟಿದ್ದ ಬಿಬಿಎಂಪಿ, ಇದೀಗ ಇದರ ಜೊತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಮುಂದಾಗಿದೆ. ಹೌದು! ರೀಲ್ಸ್ ಪ್ರಿಯರಿಗೆ ಬಿಬಿಎಂಪಿ ಭರ್ಜರಿ ಆಫರ್‌ ನೀಡಿದ್ದು, ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂದು ಬಿಬಿಎಂಪಿ ಆರೋಗ್ಯ ಇಲಾಖೆ ಆಹ್ವಾನಿಸಿಸಿದೆ. 

ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡೆಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ.  ಸೋಷಿಯಲ್ ಮೀಡಿಯಾದಲ್ಲಿ ಡೆಂಘೀ ಕುರಿತ ರೀಲ್ಸ್ ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್‌ಗಳಿಗೆ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದೆ. ವಿಶೇಷವಾಗಿ ಶಾಲಾ ಮಕ್ಕಳಿಗೂ ಬಿಬಿಎಂಪಿ ಬಂಪರ್ ಆಫರ್ ಕೊಟ್ಟಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 

ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಕೊಟ್ಟಿದೆ. ಡೆಂಘೀ ಜಾಗೃತಿ ಸಂಬಂಧ ರೀಲ್ಸ್ ಮಾಡಿದ ನಂತರ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆ  ಫೇಸ್ ಬುಕ್ ಹಾಗೂ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಬೇಕು. ಯಾವ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆ. ಹೆಚ್ಚು ಮಾಹಿತಿಗಳನ್ನು ಒಳಗೊಂಡಿದೆಯೋ ಅದನ್ನು ಆಧರಿಸಿ ಬಹುಮಾನ ಬಿಬಿಎಂಪಿ ಬಹುಮಾನ ನೀಡಲಿದೆ. 

ತೆಲಂಗಾಣ ಎಲೆಕ್ಷನ್‌ಗೆ ವಾಲ್ಮೀಕಿ ದುಡ್ಡು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಗಂಭೀರ ಆರೋಪ

ಈ ರೀಲ್ಸ್ ಸ್ಪರ್ಧೆಗೆ ಸೋಷಿಯಲ್ ಮೀಡಿಯಾ ಬಳಸಿಕೊಳ್ಳುತ್ತಿರುವ ಪಾಲಿಕೆಯ ಆರೋಗ್ಯ ವಿಭಾಗ, ರೀಲ್ಸ್ ಹಂಚಿಕೊಂಡ ಪ್ರತಿಯೊಬ್ಬರಿಗೂ ಡೆಂಘೀ ವಾರಿಯರ್ ಎಂಬ ಪಟ್ಟ ನೀಡುತ್ತದೆ. ಇನ್ನು ಇತ್ತ ಬಿಬಿಎಂಪಿಯ ಈ ರೀಲ್ಸ್ ಕಾಂಪಿಟೇಷನ್‌ಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಪಾಲಿಕೆ ಡೆಂಘೀ ಬಗ್ಗೆ ಅರಿವು ಮೂಡಿಸಲು ಹೊರಟಿರುವುದು ಸರಿ. ಆದರೆ ನಗರದಲ್ಲಿ ಸರಿಯಾಗಿ ಸ್ವಚ್ಛತೆಯನ್ನು ಕಾಪಾಡಬೇಕು, ಜೊತೆಗೆ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮವನ್ನು ಕೈಗೊಳ್ಳಬೇಕು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್