ಕೊರೋನಾ ಎರಡನೇ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ.
ಬೆಂಗಳೂರು, (ಡಿ.15): ಕೊರೋನಾ 2ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯ ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು ಉಲ್ಲಂಘಿಸಿದರೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 , ವಿಪತ್ತು ನಿರ್ವಹಣೆ ಕಾಯ್ದೆ 2005ರ ಅಡಿಯಲ್ಲಿ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.
undefined
ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಚಿಂತನೆ ಇಲ್ಲ: ಸಿಎಂ
ಎಂ.ಜಿ.ರೋಡ್, ಚರ್ಚ್‍ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬಾರ್, ರೆಸ್ಟೋರೆಂಟ್, ಹೋಟೆಲ್‍ಗಳಲ್ಲಿ ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾಧಾರಣವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬಹುದು. 200 ಜನರಿಗೆ ಮಾತ್ರ ಅವಕಾಶ ಕಲ್ಪಿಸಬಹುದು. ಸಾಧಾರಣ ಆಚರಣೆಗೂ ಮುಂಚಿತವಾಗಿ ಆನ್‍ಲೈನ್‍ನಲ್ಲಿ ಪಾಸ್ ಪಡೆಯಬೇಕು. ಈ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು ಆರೋಗ್ಯ ಸೇತು ಆಯಪ್ ಕಡ್ಡಾಯ.
ಪಬ್ ಮತ್ತು ಕ್ಲಬ್‍ಗಳಲ್ಲಿ ಶೇ.50ರಷ್ಟು ಜನರು ಮಾತ್ರ ಸೇರಬೇಕು. ಪಬ್‍ಗಳಲ್ಲಿ ಡ್ಯಾನ್ಸ್ ಮತ್ತು ಡಿಜೆ ಸೌಂಡ್ಸ್ ನಿಷೇಧ ಮಾಡಲಾಗಿದೆ. ಕೊರೋನಾ ನಿಯಮಗಳ ಪಾಲನೆ, ಸಾಮಾಜಿಕ ಅಂತರ, ಸ್ಯಾನಿಟೈಸರ್, ಥರ್ಮಲ್‍ಸ್ಕ್ರೀನಿಂಗ್, ನಿಗದಿತ ಸ್ಥಳಗಳಲ್ಲಿ ಹೆಚ್ಚು ಜನರು ಸೇರದಂತೆ ಸಂಘಟಕರು ಹೆಚ್ಚು ನಿಗಾ ವಹಿಸುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಸರ್ಕಾರ ರೂಪಿಸಿದೆ.