
ಬೆಂಗಳೂರು, (ಆಗಸ್ಟ್.06): ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಅಂತ್ಯವಾಗಿದೆ. ಈದ್ಗಾ ಮೈದಾನ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯೆಂದು ಆದೇಶಿಸಲಾಗಿದೆ.
ಚಾಮರಾಜಪೇಟೆ ಆಟದ ಮೈದಾನವನ್ನ ವರ್ಕ್ಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾ ಮಾಡಿದೆ. ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ ಆಸ್ತಿಯಂದು ನಮೂದಿಸಲು ಸೂಚಿಸಿ ಜಂಟಿ ಆಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದಾರೆ. ಇದರಿಂದ ವಕ್ಫ್ ಬೋರ್ಡ್‌ಗೆ ಹಿನ್ನಡೆಯಾಗಿದೆ.
ಚಾಮರಾಜಪೇಟೆ ಮೈದಾನ ಬಿಬಿಎಂಪಿ ಆಸ್ತಿ ಎಂಬ ದಾಖಲೆ ಪತ್ತೆ?
ಚಾಮರಾಜಪೇಟೆ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಆಗಸ್ಟ್ 3ರ ಒಳಗಾಗಿ ವಕ್ಫ್ ಬೋರ್ಡ್ ಅಥವಾ ಯಾರೇ ಮೈದಾನದ ದಾಖಲೆ ನೀಡಲು ಕಾಲಾವಕಾಶ ನೀಡಿತ್ತು. ಆದ್ರೆ, ಯಾರು ಸಹ ದಾಖಲೆಗಳನ್ನ ನೀಡಿಲ್ಲ.
ವಕ್ಫ್ ಬೋರ್ಡ್ ಈವರೆಗೆ ಸುಪ್ರೀಂ ಕೋರ್ಟ್ ತೀರ್ಪಿನ ಪ್ರತಿ ಹಾಗೂ ಹಲವು ವರ್ಷಗಳ ಹಿಂದಿನ ತೆರಿಗೆ ಕಟ್ಟಿರುವ ಬಿಲ್ ಮಾತ್ರ ಹಾಜರುಪಡಿಸಿದೆ. ಇದರ ಹೊರತಾಗಿ ಬೇರೆ ಯಾವುದೇ ದಾಖಲೆ ವಕ್ಫ್ ಬೋರ್ಡ್ ನಿಂದ ಸಲ್ಲಿಕೆಯಾಗಿಲ್ಲ. ಈ ವಿಚಾರ ಬಿಬಿಎಂಪಿ ಇನ್ ಹೌಸ್ ಪ್ರೊಸೀಡಿಂಗ್ಸ್ ಕೂಡ ನಡೀತಿದ್ದು ಸಮರ್ಪಕ ದಾಖಲೆ ಸಲ್ಲಿಕೆಯಾಗಿಲ್ಲ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನ ಕಂದಾಯ ಇಲಾಖೆಯದ್ದೇ ಎಂದು ಬಿಬಿಎಂಪಿ ಆದೇಶಿಸಿದೆ.
ವಕ್ಫ್ ಬೋರ್ಡ್‌ಗೆ ನೀಡಿದ್ದ ಕಾಲವಾಕಾಶ ಅಂತ್ಯ: ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಣೆ?
ಈದ್ಗಾ ಮೈದಾನ ವಿವಾದ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡು ಚಾಮರಾಜಪೇಟೆ ನಾಗರೀಕರು ಬಂದ್ ಆಚರಣೆ ಮಾಡುವ ಮಟ್ಟಕ್ಕೆ ಬೆಳೆದಿತ್ತು. ಅಲ್ಲದೆ ಸ್ಥಳೀಯ ಶಾಸಕರು, ಸಂಸದರೇ ಈ ಪ್ರಕರಣದಲ್ಲಿ ಮುಖಾಮುಖಿಯಾಗಿ ವಾಗ್ವಾದಕ್ಕೆ ಇಳಿದಿದ್ರು. ಇದೀಗ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಅಂತ್ಯವಾದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ