
ಬೆಂಗಳೂರು(ಜು.25): ಕಳೆದ 9 ತಿಂಗಳಿಂದ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ಬಿಬಿಎಂಪಿ ಕಾಂಪ್ಯಾಕ್ಟರ್ ವಾಹನ ಚಾಲಕರು ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ಮುಂದಿನ 24 ತಾಸಿನೊಳಗೆ ವೇತನ ಪಾವತಿಸದಿದ್ದರೆ, ಕಚೇರಿ ಎದರು ಕಸ ಸುರಿದು ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.
ಕಸ ಸಾಗಣೆ ಮಾಡುವ ಬಿಬಿಎಂಪಿ ಕಾಂಪ್ಯಾಕ್ಟರ್‌ಗಳ ವಾಹನ ಚಾಲಕರು ಶುಕ್ರವಾರ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕಳೆದ 9 ತಿಂಗಳಿಂದ ವೇತನ ನೀಡದ ಕಾರಣ ಸಂಷ್ಟಕ್ಕೆ ಸಿಲುಕಿದ್ದೇವೆ. ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಗುತ್ತಿಗೆದಾರರನ್ನು ಕೇಳಿದರೆ ಬಿಬಿಎಂಪಿ ಅಧಿಕಾರಿಗಳತ್ತ ಬೆರಳು ತೋರಿಸುತ್ತಾರೆ ಎಂದು ದೂರಿದ್ದಾರೆ.
ಕೊರೋನಾ ಸೋಂಕಿತಳ ಮೃತದೇಹ ನೀಡಲು 9 ಲಕ್ಷ ಕೇಳಿದರು!
ಅಧಿಕಾರಿಗಳು ಮೇಲಾಧಿಕಾರಿಗಳನ್ನು ಕೇಳುವಂತೆ ಹೇಳುತ್ತಾರೆ. ಇದರಿಂದ ಅಲೆದು ಅಲೆದು ಸಾಕಾಗಿದೆ. ಒಂದೆರಡು ತಿಂಗಳ ವೇತನವಾದರೆ ಅನುಸರಿಸಿಕೊಂಡು ಹೋಗಬಹುದು. ಆದರೆ, 9 ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಚಾಲಕರು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ