
ಬೆಂಗಳೂರು (ಮೇ.16): ಅಂತಾರಾಷ್ಟ್ರೀಯ ಬಿಕಟ್ಟಿನ ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದು, ಅದಕ್ಕಾಗಿ ದೇಶಕ್ಕೆ ಬೆಲೆ ಏರಿಕೆ ಕೊಡುಗೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಅವರು ಬೇರೆ ರಾಷ್ಟ್ರಗಳ ಜತೆ ಉತ್ತಮ ಸಂಬಂಧ ಉಳಿಸಿಕೊಂಡಿಲ್ಲ. ಅಂತಾರಾಷ್ಟ್ರೀಯ ಬಿಕ್ಕಟ್ಟಿನ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕಾಗಿ ವಿದ್ಯುತ್ ಉಳಿಸಿ, ಪೆಟ್ರೋಲ್ ವಾಹನ ಬಳಸಬೇಡಿ ಎಂದು ಹೇಳುತ್ತಿದ್ದಾರೆ. ಇಂಧನ ಬಳಸದೇ ನಿತ್ಯ ಜೀವನ ಮಾಡುವುದು ಹೇಗೆ? ಅನೇಕರು ತಮ್ಮ ಬೆಂಗಾವಲು ಪಡೆ ವಾಹನಗಳನ್ನು ಕಡಿತಗೊಳಿಸಿದ್ದಾರೆ. ಆದರೆ, ಜನ ಸಾಮಾನ್ಯರು ಓಡಾಟ ಮಾಡದೇ ಇರಲಾಗುತ್ತದೆ. ಬದುಕಿಗಾಗಿ ಪ್ರಯಾಣ ಮಾಡಬೇಕಲ್ಲವೇ? ಚಿನ್ನ ಖರೀದಿ ಮಾಡಬೇಡಿ ಎಂದಿದ್ದಾರೆ. ಅದು ಹೇಗೆ ಸಾಧ್ಯ? ವಿವಾಹಿತ ಮಹಿಳೆಯರಿಗೆ ಮಾಂಗಲ್ಯ ಸರಬೇಕು. ಹೀಗಿದ್ದಾಗ ಚಿನ್ನಕೊಳ್ಳಬೇಡಿ ಎಂಬುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಎಸ್‌ಐಆರ್ ಕುರಿತು ಎಲ್ಲಾ ಪಕ್ಷದ ನಾಯಕರೂ ಜಾಗೃತರಾಗಬೇಕು. ಎಸ್‌ಐಆರ್ ಬಗ್ಗೆ ನಾವೂ ಜಾಗೃತಿ ಮೂಡಿಸುತ್ತಿದ್ದೇವೆ. ಯಾವುದೇ ಪಕ್ಷದವರಾದರೂ ತಮ್ಮ ಪರವಾದ ಮತಗಳನ್ನು ರಕ್ಷಿಸಿಕೊಳ್ಳಬೇಕು. ಎಸ್‌ಐಆರ್ ಉದ್ದೇಶ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಮತಗಳನ್ನು ಕಡಿತಗೊಳಿಸುವುದಾಗಿದೆ. ಆ ಮತಗಳನ್ನು ನಾವು ಕಾಪಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ