ಬೆಂಗಳೂರು ಮನೆ ಮಾಲೀಕರಿಗೆ ಕಮಿಷನರ್ ಎಚ್ಚರಿಕೆ, ವಿದೇಶಿಗರಿಗೆ ಬಾಡಿಗೆ ನೀಡುವ ಮುನ್ನ ಈ ನಿಯಮ ಪಾಲಿಸದಿದ್ರೆ ಕೈಕೋಳ ಗ್ಯಾರಂಟಿ!

Published : Mar 05, 2025, 06:24 AM ISTUpdated : Mar 05, 2025, 07:12 AM IST
ಬೆಂಗಳೂರು ಮನೆ ಮಾಲೀಕರಿಗೆ ಕಮಿಷನರ್ ಎಚ್ಚರಿಕೆ, ವಿದೇಶಿಗರಿಗೆ ಬಾಡಿಗೆ ನೀಡುವ ಮುನ್ನ ಈ ನಿಯಮ ಪಾಲಿಸದಿದ್ರೆ ಕೈಕೋಳ ಗ್ಯಾರಂಟಿ!

ಸಾರಾಂಶ

ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಪೊಲೀಸ್ ಆಯುಕ್ತರ ಎಚ್ಚರಿಕೆ. ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿಗರನ್ನು ಬಂಧಿಸಲಾಗಿದೆ.

ಬೆಂಗಳೂರು (ಮಾ.5):  ನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶಿಯರ ಕಾಯ್ದೆ ಪ್ರಕಾರ ವಿದೇಶಿ ಪ್ರಜೆಗಳಿಗೆ ತನ್ನ ಮನೆ ಬಾಡಿಗೆ ನೀಡಿದ 24 ತಾಸಿನೊಳಗೆ ವಿದೇಶಿಯರ ನೋಂದಣಿ ಇಲಾಖೆಯ ಆನ್‌ಲೈನ್‌ ಪೋರ್ಟಲ್‌ನಲ್ಲಿ ಫಾರಂ-ಸಿ ಅನ್ನು ಅಧಿಕಾರಿಗಳಿಗೆ ಸಲ್ಲಿಸಬೇಕಿದೆ ಎಂದರು.

ಇದನ್ನೂ ಓದಿ: ಬಾಳ ಸಂಗಾತಿ ಹುಡುಕುತ್ತಿದ್ದವನಿಗೆ ಮ್ಯಾಟ್ರಿಮೋನಿಯಲ್ಲಿ ಸಿಕ್ಕಿದ್ದು ಕಳ್ಳಿ! ಹೂಡಿಕೆ ನೆಪದಲ್ಲಿ ₹5 ಲಕ್ಷ ಉಂಡೇನಾಮ!

ಎಫ್‌ಆರ್‌ಓಓ ಅಧಿಕಾರಿಗಳು ಅನುಮೋದಿಸಿದ ಮನೆಯ ಮಾಲೀಕ/ನಿರ್ವಹಕಾರ ವಿದೇಶಿ ವ್ಯಕ್ತಿ ವಾಸ್ತವ್ಯಕ್ಕೆ ಬಂದ 24 ತಾಸಿನಲ್ಲೇ ನಮೂನೆ-ಸಿ ರ ಮುದ್ರಿತ ಪ್ರತಿಗಳನ್ನು ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಮನೆ ಮಾಲೀಕರು ಪಾಲಿಸುತ್ತಿಲ್ಲ. ಕಳೆದ ಐದು ವರ್ಷಗಳಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬಾಹಿರವಾಗಿ ಮನೆಗಳನ್ನು ಬಾಡಿಗೆ ನೀಡಿದವರ ವಿರುದ್ಧ 70 ಪ್ರಕಣಣಗಳು ದಾಖಲಾಗಿವೆ ಎಂದು ಹೇಳಿದರು.

ಇನ್ನು ಮುಂದೆ ಯಾವುದೇ ವಿದೇಶಿ ಪ್ರಜೆಗಳಿಗೆ ಬಾಡಿಗೆ/ಆಶ್ರಯ ನೀಡುವ ಮುನ್ನ ಅವರ ಪೂರ್ವಾಪರ ವಿವರಗಳನ್ನು ಮನೆ ಮಾಲೀಕರು ಸಂಗ್ರಹಿಸಬೇಕು. ಆನಂತರ ಈ ಮಾಹಿತಿಯನ್ನು ನಿಯಮಾನುಸಾರ ಸಂಬಂಧಪಟ್ಟ ಪ್ರಾಧಿಕಾರಕ್ಕೆ ನೀಡಬೇಕಿದೆ. ಈ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಇದು ಸೈಬರ್ ವಂಚಕರ ತಂತ್ರ; ಉದ್ಯೋಗಾಕಾಂಕ್ಷಿಗಳೇ ಎಚ್ಚರ, ಲಿಂಕ್ಡ್‌ಇನ್‌ನಲ್ಲಿ ಹೇಗೆ ವಂಚಿಸುತ್ತಾರೆ ಗೊತ್ತಾ?

ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿಗರ ಸೆರೆ

ಹೆಬ್ಬಾಳ ಸಮೀಪದ ಆನಂದ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳು ವೀಸಾ ಅವಧಿ ಮುಗಿದಿದ್ದರೂ ನೆಲೆಸಿದ್ದರು. ಬ್ಯುಸಿನೆಸ್ ವೀಸಾದಡಿ ಅವರು ಬಂದಿದ್ದರು. ಈ ವಿದೇಶಿ ಪ್ರಜೆಗಳಿಗೆ ಸ್ಥಳೀಯ ವ್ಯಕ್ತಿ ನೆರವು ನೀಡಿದ್ದರು. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಇಬ್ಬರು ವಿದೇಶಿಗರು, ಮನೆಯ ಮಾಲೀಕ ಮತ್ತು ಭಾರತ ದೇಶಕ್ಕೆ ವಿದೇಶಿ ಪ್ರಜೆಗಳನ್ನು ಕರೆಸಿಕೊಂಡವರ ವಿರುದ್ಧ ಹೆಬ್ಬಾಳ ಠಾಣೆಯಲ್ಲಿ ವಿದೇಶಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ