
ಗದಗ (ಡಿ2): ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವು ಸ್ಥಳೀಯರಲ್ಲಿ ತೀವ್ರ ಗೊಂದಲ ಮೂಡಿಸಿದ್ದು, ಒಂದೆಡೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಚಿರತೆ ದಾಳಿಯಿಂದ ಕರು ಸಾವಿಗೀಡಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಎಪಿಎಂಸಿ ಜಾನುವಾರು ಮಾರುಕಟ್ಟೆ ಬಳಿಯೇ ಈ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ಎರಡು ಬಗೆಯ ಚರ್ಚೆಗೆ ಕಾರಣವಾಗಿದೆ. ಅನಾಮಿಕ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕರುವಿನ ತಲೆ ಕತ್ತರಿಸಿ ಗೋಹತ್ಯೆ ಮಾಡಿ, ದೇಹವನ್ನು ಇಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ. ಕರುವಿನ ತಲೆಯನ್ನು ಚೀಲದಲ್ಲಿ ತುಂಬಿಕೊಂಡು ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಮತ್ತೊಂದು ವಾದದ ಪ್ರಕಾರ, ಇತ್ತೀಚೆಗೆ ಅವಳಿ ನಗರದ ಸುತ್ತಮುತ್ತ ಕಾಣಿಸಿಕೊಂಡಿದ್ದ ಚಿರತೆಯೇ ಈ ಕೃತ್ಯ ಎಸಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಚಿರತೆಯು ಕೊಂದ ನಂತರ ದೇಹವನ್ನು ಎಳೆದು ತಂದಿರಬಹುದು ಎಂದು ಊಹಿಸಲಾಗಿದೆ.
ಕರುವಿನ ದೇಹ ಪತ್ತೆಯಾದ ಕೂಡಲೇ ಸುದ್ದಿ ತಿಳಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ