ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತೆಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಬೆಂಬಲಿಸಿದ ಸಚಿವ ಎಂ.ಬಿ. ಪಾಟೀಲ್!

Published : Jan 08, 2024, 04:40 PM IST
ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತೆಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಬೆಂಬಲಿಸಿದ ಸಚಿವ ಎಂ.ಬಿ. ಪಾಟೀಲ್!

ಸಾರಾಂಶ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಳಗಾವಿ ಸ್ವಾತಂತ್ರ್ಯಕ್ಕೂ ಮುನ್ನ ಮುಂಬೈ ಪ್ರಾಂತ್ಯಕ್ಕೆ ಸೇರಿತ್ತು ಎಂಬ ಹೇಳಿಕೆ ಐತಿಹಾಸಿಕ ಸತ್ಯವಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಬೆಂಬಲಿಸಿದ್ದಾರೆ..

ಬೆಂಗಳೂರು (ಜ.08): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಸ್ವಾತಂತ್ರ್ಯಕ್ಕೂ ಮುನ್ನ ಮುಂಬೈ ಪ್ರಾಂತ್ಯಕ್ಕೆ ಸೇರಿತ್ತು ಎಂದು ಹೇಳಿರುವುದು ಐತಿಹಾಸಿಕ ಸತ್ಯವಾಗಿದೆ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಬೆಂಬಲ ವ್ಯಕ್ತಪಡಿಸಿದ್ದಾರೆ..

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು 'ಬೆಳಗಾವಿ ಮುಂಚೆ ಮಹಾರಾಷ್ಟ್ರಕ್ಕೆ ಸೇರಿತ್ತು' ಎಂಬ ಹೇಳಿಕೆ ನೀಡಿರುವುದರ ಬಗ್ಗೆ ಕೇಳಿದಾಗ, 'ಹೌದು, ಅವರು ಹೇಳಿರುವುದು ಐತಿಹಾಸಿಕ ಸತ್ಯ. ಅದು ಎಲ್ಲರಿಗೂ ಗೊತ್ತಿರುವಂತದ್ದೇ. ಅದನ್ನು ಹೇಳುವುದು ತಪ್ಪೇನೂ ಅಲ್ಲ.   ಆದರೆ, ಮುಂಚೆ ಮುಂಬೈ, ಹೈದರಾಬಾದ್, ಮದರಾಸ್ ಪ್ರಾಂತ್ಯಕ್ಕೆ ಒಳಪಟ್ಟ ಪ್ರದೇಶಗಳು ಪುನರ್ ವಿಂಗಡಣೆ ನಂತರ ಸಮಗ್ರ ಕರ್ನಾಟಕದ ಭಾಗವಾಗಿವೆ. ಅಂತಹ ಎಲ್ಲಾ ಪ್ರದೇಶಗಳು ಈಗ ಸಮಗ್ರ ಕರ್ನಾಟಕದಲ್ಲೇ ಇವೆ ಎಂದರು.

ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯಗೇ ಆಹ್ವಾನ ಸಿಗದಿದ್ದರೂ, ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿಕ್ಕಿದ್ಹೇಗೆ?

ಕಾಂತರಾಜ ವರದಿಗೆ ವಿರೋಧವಿಲ್ಲ, ಸರಿಪಡಿಸಲಷ್ಟೇ ಕೋರಿಕೆ:  ಕಾಂತರಾಜ ವರದಿಗೆ ನಮ್ಮ ವಿರೋಧವೇನೂ ಇಲ್ಲ. ಆದರೆ, ಅದನ್ನು ಸ್ವಲ್ಪಮಟ್ಟಿಗೆ ಸರಿಪಡಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಕೇಳಿಕೊಂಡಿದ್ದೇವೆ ಎಂದು ಕಾಂಗ್ರೆಸ್ ಮುಖಂಡರೂ ಆದ ಸಚಿವ ಎಂಬಿ ಪಾಟೀಲ ಮಂಗಳವಾರ ಸ್ಪಷ್ಟಪಡಿಸಿದರು. ಹಿಂದುಳಿದ ವರ್ಗಗಳ ಸ್ವಾಮೀಜಿಗಳ ತಂಡವೊಂದು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸಲು ಆಗ್ರಹಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಈಗಿನ ನಿಯಮಗಳ ಪ್ರಕಾರ, ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡಗಳ ಹೆಸರನ್ನು ನಮೂದಿಸಿದರೆ ಸಮುದಾಯದ ಉಪಪಂಗಡಗಳಿಗೆ ಸೇರಿದವರಿಗೆ ಮೀಸಲಾತಿ ಸಿಗುವುದಿಲ್ಲ. ಆದ್ದರಿಂದ, ಸಮುದಾಯಕ್ಕೆ ಸೇರಿದವರು ಜಾತಿ ನಮೂದಿಸುವಾಗ ಲಿಂಗಾಯತ ಉಪಪಂಗಡದ ಹೆಸರು ಹಾಕುತ್ತಿಲ್ಲ. ಇದನ್ನು ಸರಿಪಡಿಸಿದರೆ, ಜಾತಿ ನಮೂದಿಸುವಾಗ  ಲಿಂಗಾಯತ ಉಪಪಂಗಡಗಳ ಹೆಸರು ನಮೂದಿಸಲು ಸಾಧ್ಯವಾಗುತ್ತದೆ. ಹೀಗಾದಾಗ, ಸಹಜವಾಗಿಯೇ ಲಿಂಗಾಯತ ಸಮುದಾಯದ ಜನಸಂಖ್ಯೆ ಶೇ.22ರವರೆಗೆ ಹೆಚ್ಚಾಗುವ ಸಂಭವವಿದೆ ಎಂದು ವಿವರಿಸಿದರು.

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 18 ವರ್ಷದ ಯುವತಿ ಬಲಿ: 2024ರಲ್ಲಿ ಮೊದಲ ಸಾವು

ಸರ್ಕಾರದಲ್ಲಿ ಇನ್ನೂ ಮೂವರು ಡಿಸಿಎಂ ಗಳ ನೇಮಕಾತಿ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದಾಗ, 'ಇದಕ್ಕೆ ಸಂಬಂಧಿಸಿದಂತೆ ನನ್ನ ನಿಲುವಿನಲ್ಲಿ ಯಾವ ಬದಲಾವಣೆಯೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಅಭಿಪ್ರಾಯ ಕೇಳಿದರೆ, ಅದನ್ನು ನಾಯಕರ ಮುಂದೆ ನಾಲ್ಕು ಗೋಡೆಗಳ ಮಧ್ಯೆ ತಿಳಿಸುತ್ತೇನೆ. ಅದನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ' ಎಂದು ಪುನರುಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್