ಕಾರಿನ ಜೊತೆಯೇ ಸುಟ್ಟು ಭಸ್ಮವಾದ ಉದ್ಯಮಿ: ಕಾರಣ ಇನ್ನೂ ನಿಗೂಢ

Published : Oct 03, 2024, 10:32 AM IST
ಕಾರಿನ ಜೊತೆಯೇ ಸುಟ್ಟು ಭಸ್ಮವಾದ ಉದ್ಯಮಿ: ಕಾರಣ ಇನ್ನೂ ನಿಗೂಢ

ಸಾರಾಂಶ

ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ.  

ಬೆಳಗಾವಿ (ಅ.03): ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ. ಚಿಕ್ಕೋಡಿಯ ಖ್ಯಾತ ಗ್ರಾನೈಟ್ ಉದ್ಯಮಿ ಮುಲ್ಲಾ ಪ್ಲಾಟ್ ನಿವಾಸಿ ಫೈರೋಜ್ ಬಡಗಾವಿ (40) ಎಂಬುವರು ಮೃತಪಟ್ಟವರು. ಅವರ ದೇಹವು ಬುಧವಾರ ಸಂಪೂರ್ಣವಾಗಿರುವ ಸುಟ್ಟು ಭಸ್ಮವಾದ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಚಾಲಕನ ಸೀಟಿನಲ್ಲಿ ಇದ್ದ ಫೈರೋಜ್ ಬೆಂದು ಹೋಗಿದ್ದಾರೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಕಾರಿಗೆ ಬೆಂಕಿ ಹೊತ್ತಿರುವ ಯಾರೊಬ್ಬರ ಗಮನಕ್ಕೂ ಬಂದಿರಲಿಲ್ಲವೇ ಎಂಬ ಅನುಮಾನ ಕೂಡ ಈಗ ವ್ಯಕ್ತವಾಗಿದ್ದು, ಸಾವಿನ ಕುರಿತು ಹಲವು ವದಂತಿಗಳಿಗೆ ಕಾರಣವಾಗಿದೆ‌. ಬುಧವಾರ ಮಧ್ಯಾಹ್ನ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು ಬೆಂಕಿಗೆ ಆಹುತಿಯಾದಂತೆ ಕಾಣುತ್ತಿದ್ದರೂ ಆತನ ಕುಟುಂಬದವರು ನೀಡಿರುವ ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಭ್ರಮದ ದಸರಾ ಹಬ್ಬಕ್ಕೆ ಸಜ್ಜಾದ ಮೈಸೂರು: ಹಂಪ ನಾಗರಾಜಯ್ಯರಿಂದ ಉದ್ಘಾಟನೆ

ಅಪಘಾತ ಓರ್ವ ಸಾವು: ಅಫಜಲ್ಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ಕಾರು ಮತ್ತು ಎರಡು ಬೈಕ್‌ಗಳ ನಡುವೆ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು ಇಬ್ಬರು ಶಿಕ್ಷಕರು ಸೇರಿ ಮೂರು ಜನರಿಗೆ ಗಂಭೀರ ಗಾಯಗಳಾದ ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದೆ. ಅಫಜಲ್ಪುರ ತಾಲೂಕಿನಿಂದ ಕರ್ಜಗಿ ಮಾರ್ಗವಾಗಿ ಕಲ್ಪೇಶ ಪೂನಮಚಂದ ಸಕಾರಿಯಾ ಎಂಬಾತ ಮಾರುತಿ ವೇಗನ್‌ ಆರ್ ಕಾರನ್ನು ಅತಿ ವೇಗ ಮತ್ತು ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ್ದರ ಪರಿಣಾಮ ಎರಡು ಬೈಕ್‌ಗಳಿಗೆ ಢಿಕ್ಕಿ ಮಾಡಿದ್ದಾರೆ. 

ಘಟನೆಯಲ್ಲಿ ಇಂಡಿ ತಾಲೂಕಿನ ಸಾತಲಗಾಂವ ಗ್ರಾಮದ ಭವಾನಿ ತುಕ್ಕಪ್ಪ ಬಜಂತ್ರಿ (26) ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಅವನ ಹಿಂಬದಿ ಸವಾರ ಚಾಂದಸಾಬ ಮಸಳಿ(28) ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೊಂದು ಬೈಕ್‌ನಲ್ಲಿದ್ದ ಶಿಕ್ಷಕರಾದ ಶಿವಶರಣಪ್ಪ ಜಿಡ್ಡಗಿ ಹಾಗೂ ಶರಣಪ್ಪ ತಡಲಗಿ ಎಂಬುವವರಿಗೂ ಕೂಡ ಗಂಭೀರ ಸ್ವರೂಪದ ಗಾಯಗಳಾಗಿವೆ. ಘಟನೆ ಕುರಿತು ಅಫಜಲ್ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!