
ಬೆಳಗಾವಿ(ಜುಲೈ 22): ಮಧ್ಯಾಹ್ನ ಬಿಸಿಯೂಟ ಸೇವಿಸಿದ 30ಕ್ಕೂ ಅಧಿಕ ಮಕ್ಕಳು ತೀವ್ರ ಅಸ್ವಸ್ಥರಾಗಿರುವ ಆಘಾತಕಾರಿ ಘಟನೆ ಬೆಳಗಾವಿ ತಾಲೂಕಿನ ಮಾರ್ಕಂಡೇಯ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದೇ ಮಕ್ಕಳ ಆರೋಗ್ಯದಲ್ಲಿ ಏರುಪೇರಿಗೆ ಕಾರಣ ಎಂದು ಶಂಕಿಸಲಾಗಿಗದೆ. ಇಂದು ಮಧ್ಯಾಹ್ನ ಒಟ್ಟಿಗೆ ಬಿಸಿಯೂಟ ಸೇವಿಸಿದ್ದ ಮಕ್ಕಳು. ಊಟದ ಬಳಿಕ ಹೊಟ್ಟೆ ನೋವು, ವಾಂತಿ, ಮತ್ತು ತಲೆಸುತ್ತಿನಂತಹ ಲಕ್ಷಣಗಳು ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 24 ಮಕ್ಕಳಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಈಶ್ವರ ಗಡಾದಿ ಮತ್ತು ಡಿಡಿಪಿಐ ಲೀಲಾವತಿ ಹಿರೇಮಠ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 'ಮಕ್ಕಳ ಆರೋಗ್ಯ ಸ್ಥಿರವಾಗಿದೆ, ಯಾವುದೇ ಗಂಭೀರ ಸಮಸ್ಯೆ ಇಲ್ಲ. ಚಿಕಿತ್ಸೆಯಿಂದ ಎಲ್ಲರೂ ಗುಣಮುಖರಾಗುತ್ತಿದ್ದಾರೆ' ಎಂದು ಡಿಡಿಪಿಐ ಲೀಲಾವತಿ ಹಿರೇಮಠ ಹೇಳಿದ್ದಾರೆ.
ಗ್ರಾಮೀಣ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಸಿಯೂಟದ ಗುಣಮಟ್ಟ, ಆಹಾರ ಸುರಕ್ಷತೆ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ಈ ಘಟನೆಯಿಂದ ಶಾಲಾ ಆಡಳಿತ ಮತ್ತು ಪೋಷಕರಲ್ಲಿ ಆತಂಕ ಮೂಡಿದ್ದು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ