ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿ ಅರೆಸ್ಟ್ ಮಾಡಿ, ಎತ್ಹಾಕೊಂಡು ಹೋದ ಪೊಲೀಸರು!

By Sathish Kumar KH  |  First Published Dec 19, 2024, 7:05 PM IST

ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ  ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 


ಬೆಳಗಾವಿ (ಡಿ.19):  ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ  ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಕ್ಷೇಪಾರ್ಹ (ವೇ*) ಪದ ಬಳಕೆ ಮಾಡಿದ ಬೆನ್ನಲ್ಲಿಯೇ ಹಿರೇಬಾಗೇವಾಡಿಯಲ್ಲಿ ದೂರು ದಾಖಲಿಸಲಾಗಿತ್ತು. ಇದರ ಬೆನ್ನಲ್ಲಿಯೇ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಸುವರ್ಣ ಸೌಧದಲ್ಲಿದ್ದ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ.

Tap to resize

Latest Videos

undefined

ಬೆಳಗಾವಿ ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲು ಆಗಿತ್ತು. BNS 75 ಮತ್ತು 79ರಡಿ ಕೇಸ್ ದಾಖಲು ಆಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ ದೂರಿನ್ವಯ ಮಹಿಳೆಯರು ವಿರುದ್ಧ ಅವಾಚ್ಚ ಶಬ್ದ ಬಳಕೆ ಆರೋಪದಡಿ ಕೇಸ್ ದಾಖಲಿಸಲಾಗಿತ್ತು. ಇದೀಗ ಸುವರ್ಣ ಸೌಧದಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸ್ಥಳದಿಂದ ಸಿ.ಟಿ. ರವಿ ಅವರನ್ನು ಪೊಲೀಸರು ಅರೆಸ್ಟ್ ಮಾಡಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಸುವರ್ಣ ಸೌಧದೊಳಗೆ ನುಗ್ಗಿ ಸಿ.ಟಿ. ರವಿಗೆ ಕಾಲಿಂದ ಒದ್ದು, ಹಲ್ಲೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು!

ಬೆಳಗಾವಿಯ ಹೊರೇಬಾಗೇವಾಡಿಯ ಪೊಲೀಸರು ಸಿ.ಟಿ. ರವಿ ಅವರನ್ನು ಬಂಧನ ಮಾಡಲು ಬರುತ್ತಿದ್ದಂತೆಯೇ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಸುವರ್ಣ ಸೌಧದ ಮೆಟ್ಟಿಲ ಮೇಲೆ ದೊಡ್ಡ ಹೈಡ್ರಾಮ ನಡೆಯಿತು. ಈ ವೇಳೆ ಸಿ.ಟಿ. ರವಿ ಅವರನ್ನು ಮುಲಾಜಿಲ್ಲದೇ ಮೇಲೆತ್ತಿಕೊಂಡ ಪೊಲೀಸರು ಬಿಗಿ ಭದ್ರತೆ ನಡುಗೆ ಪೊಲೀಸ್ ವಾಹನಕ್ಕೆ ತುಂಬಿಕೊಂಡು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಹಾಗೂ ಸಿ.ಟಿ. ರವಿ ಅವರು ಜೈಭೀಮ್ ಘೋಷಣೆ ಹಾಗೂ ಅಂಬೇಡ್ಕರ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬಿಜೆಪಿ ನಾಯಕರಿಗೆ ರಕ್ಷಣೆ ನೀಡದ ಸರ್ಕಾರ ಎಂದು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ, ಬಿಜೆಪಿ ನಾಯಕರು ಪೊಲೀಸರ ವಾಹನಕ್ಕೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಇದಾದ ನಂತರ ಪೊಲೀಸರು ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ತಳ್ಳಿ ಸಿ.ಟಿ. ರವಿ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಘಟನೆಯ ಹಿನ್ನೆಲೆಯೇನು?
ಬೆಳಗಾವಿಯ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಬಂದಿದ್ದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರಿಬ್ಬರೂ ಕೇಂದ್ರದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಬಾವಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಕೂಡ ಅವರ ಕಾಂಗ್ರೆಸ್ ವಿರುದ್ಧವೇ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರು ಅಲ್ಲಿಯೇ ಇದ್ದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣೀರಿಡುತ್ತಾ ಪರಿಷತ್ ಸಭೆಯಿಂದ ಹೊರಗೆ ಹೋಗಿದ್ದು, ಸಭಾಪತಿಗೆ ದೂರು ನೀಡಿದ್ದರು. ಇದರ ನಂತರ ಹಿರೇ ಬಾಗೇವಾಡಿ ಪೊಲೀಸ್ ಠಾಣೆಗೂ ದೂರು ನೀಡಿದ್ದು, ಇದೀಗ ಸಿ.ಟಿ. ರವಿ ಪೊಲೀಸರ ಅತಿಥಿಯಾಗಿದ್ದಾರೆ.

ಇದನ್ನೂ ಓದಿ: ಲಕ್ಷ್ಮೀಗೆ ವೇ* ಎಂದ ಸಿ.ಟಿ. ರವಿಗೆ ಪರಿಷತ್ ಹೊರಗೆ ಹಲ್ಲೆ, ಒಳಗಡೆ ತಾಯಿ, ಮಗಳು, ಹೆಂಡ್ತಿ ಬಗ್ಗೆ ಬೈಗುಳ!

click me!