
ಬೆಳಗಾವಿ: ಜಿಲ್ಲೆಯ ಪ್ರಭಾವಿ ವಕೀಲರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ನಿನ್ನೆ ರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಗುಂಡಿನ ದಾಳಿ ನಡೆದಿದೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ದಾಳಿ ನಡೆದಿದ್ದು, ಈ ವೇಳೆ ಅವರ ಮನೆಯ ಮೊದಲ ಮಹಡಿಯಲ್ಲಿ ಅವರ ಮಗಳು ಸಂಸ್ಕೃತಿ ಓದುವುದರಲ್ಲಿ ಮಗ್ನರಾಗಿದ್ದರು ಎಂದು ತಿಳಿದು ಬಂದಿದೆ.
ವಕೀಲೆ ಪೂಜಾ ಕಾಕತಕರ್ ಅವರ ಮನೆ ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ಇದ್ದು, ಗುಂಡಿನ ದಾಳಿಯಿಂದಾಗಿ ಮೊದಲ ಮಹಡಿಯ ಗಾಜು ಒಡೆದು ಹೋಗಿದೆ. ಮನೆಯ ಕಿಟಕಿ ಗಾಜಿನ ಮೇಲೆ ಫೈರಿಂಗ್ ಆದ ಗುರುತು ಇದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗುಂಡು ತಗುಲಿರೋ ಕಿಟಕಿ ಗಾಜನ್ನು ಪರಿಶೀಲನೆಗಾಗಿ ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಪೂಜಾ ಕಾಕತಕರ್ ಅವರು ಕಳೆದ 18 ವರ್ಷಗಳಿಂದ ವಕೀಲಿ ವೃತ್ತಿ ಮಾಡುತ್ತಿದ್ದಾರೆ.
ಗುಂಡಿನ ದಾಳಿ ಹಿನ್ನೆಲೆ ಈಗಾಗಲೇ ಪೊಲೀಸರು ವಕೀಲರಿಗೆ ರಕ್ಷಣೆ ನೀಡುವ ಭರವಸೆ ನೀಡಿದ್ದು, ಈ ಬಗ್ಗೆ ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಪೂಜಾ ಅವರು ಹೈ ಪ್ರೊಫೈಲ್ ಪ್ರಕರಣವೊಂದರಲ್ಲಿ ವಾದ ಮಾಡುತ್ತಿರುವ ಹಿನ್ನೆಲೆ ಈ ಗುಂಡಿನ ದಾಳಿ ನಡೆದಿರಬಹುದೇ ಎಂಬ ಶಂಕೆ ಇದೆ.
ಇದನ್ನೂ ಓದಿ: ದೆಹಲಿಯಲ್ಲಿ ಟೇಕಾಫ್ ವೇಳೆ ವಿಮಾನದಲ್ಲಿ ಬೆಂಕಿ: ಆರು ಪ್ರಯಾಣಿಕರಿಗೆ ಗಾಯ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ