
ಪೋಂಡಾ(ನ.19): ರಾಷ್ಟ್ರೀಯ ಹೆದ್ದಾರಿ ನವೀಕರಣದ ಹಿನ್ನೆಲೆಯಲ್ಲಿ ಬೆಳಗಾವಿ-ಗೋವಾ ರಸ್ತೆ ಮಾರ್ಗವನ್ನು ಮುಚ್ಚಲಾಗಿದೆ. ಇಲ್ಲಿನ ಅನಮೋದ್ ಘಾಟ್ ಮತ್ತು ರಾಮನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ನವೀಕರಣ ಕಾಯರ್ಯ ಇಂದಿನಿಂದ ಆರಂಭವಾಗುತ್ತಿದ್ದು, ಬೆಳಗಾವಿ-ಗೋವಾ ರಸ್ತೆ ಮಾರ್ಗವನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾನಾಪುರದ ಮೇಲೆ ಹಾದು ಹೋಗುವ ನಂ.4A ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 84 ಕಿ.ಮೀ. ರಸ್ತೆಯನ್ನು ನವೀಕರಣ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾಗರ್ಗ ಅನುಸರಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಲಘು ವಾಹನಗಳು ಬೆಳಗಾವಿ-ಚಂದಗಡ್-ಅಂಬೋಲಿ-ಸಾವಂತವಾಡಿ-ಗೋವಾ ಮಾರ್ಗವನ್ನು ಬಳಸಬಹುದಾಗಿದ್ದು, ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ನಂ. 54 ಮತ್ತು ಜಾಂಬೋಟಿ-ಚೋರ್ಲಾ ರಾಜ್ಯ ಹೆದ್ದಾರಿ ನಂ. 31 ನ್ನು ಕೂಡ ಬಳಸಬಹುದಾಗಿದೆ. ಆದರೆ ಭಾರೀ ವಾಹನಗಳು ಕಡ್ಡಾಯವಾಗಿ ಬೆಳಗಾವಿ-ಚಂದಗಡ್-ಅಂಬೋಲಿ-ಸಾವಂತವಾಡಿ-ಗೋವಾ ಮಾರ್ಗವನ್ನೇ ಬಳಸಬೇಕೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ