ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

By Kannadaprabha News  |  First Published Dec 18, 2023, 12:32 PM IST

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಗಹಲ್ಲೆ ನಡೆಸಿದ್ದರು. ಡಿ.10ರ ಮಧ್ಯರಾತ್ರಿ ನಡೆದಿದ್ದ ಈ ಅಮಾನವೀಯ ಘಟನೆಗೆ ರಾಜ್ಯ ಸರ್ಕಾರ ಮಾತ್ರವಲ್ಲದೆ ಇಡೀ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು.


ಬೆಳಗಾವಿ (ಡಿ.18): ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಪ್ರೇಮಿಗಳು ಮನೆಬಿಟ್ಟು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಯುವಕನ ಮನೆಗೆ ದಾಳಿ ನಡೆಸಿದ್ದ ಯುವತಿಯ ಕಡೆಯವರು, ಆತನ ತಾಯಿಯನ್ನು ವಿವಸ್ತ್ರಗೊಳಿಸಿ ಗಹಲ್ಲೆ ನಡೆಸಿದ್ದರು. ಡಿ.10ರ ಮಧ್ಯರಾತ್ರಿ ನಡೆದಿದ್ದ ಈ ಅಮಾನವೀಯ ಘಟನೆಗೆ ರಾಜ್ಯ ಸರ್ಕಾರ ಮಾತ್ರವಲ್ಲದೆ ಇಡೀ ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು 11 ಮಂದಿಯನ್ನು ಬಂಧನಕ್ಕೊಳಪಡಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

Tap to resize

Latest Videos

ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆ ಎಡವಟ್ಟು; ಜಗತ್ತಿಗೆ ಬರುವ ಮುಂಚೆಯೇ ಕಣ್ಣು ಮುಚ್ಚಿದ ಕಂದಮ್ಮ!

ಪ್ರತಿಪಕ್ಷ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿ ಕಿಡಿಕಾರಿದೆ. ಕೇಂದ್ರ ಮಹಿಳಾ ಆಯೋಗ, ಎಸ್ಟಿ ರಾಷ್ಟ್ರೀಯ ನಿಯೋಗ ಹಾಗೂ ಬಿಜೆಪಿ ಸತ್ಯಶೋಧನಾ ಸಮಿತಿ ಕೂಡ ಭಾನುವಾರ ಬೆಳಗಾವಿಗೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದೆ. ಈ ಮಧ್ಯೆ ಹೈಕೋರ್ಟ್ ಕೂಡ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಈ ಎಲ್ಲಾ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ಅಧಇಕಾರಿಗಳಿಗೆ ಕಡತಗಳನ್ನು ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ. ಸಿಐಡಿ ಡಿಐಡಿ ಸುನೀಲ್ ಕುಮಾರ್ ಮೀನಾ ಶೀಘ್ರದಲ್ಲೇ ಬೆಳಗಾವಿಗೆ ಭೇಟಿ ನೀಡಲಿದ್ದು, ಈಗಾಗಲೇ ತನಿಖಾಧಿಕಾರಿ ಎಸಿಪಿ ಗಿರೀಶ್ ಅವರನ್ನು ಕರೆಸಿಕೊಂಡು ಸಂಪೂರ್ಣ ವಿವರ ಪಡೆದಿದ್ದಾರೆ.

 

ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡ್ತೇವೆ: ಗೃಹಸಚಿವ

ಬೆಳಗಾವಿಯ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳನ್ನು ಪಟ್ಟಿಮಾಡಿದ್ದಾರೆಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
 

click me!