
ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್ ಮಂಗಳೂರು
ಬೆಳ್ತಂಗಡಿ (ಆ.14): ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ, ಇಂದು ಬೆಳಿಗ್ಗೆ ಬೆಳ್ತಂಗಡಿ ಮಾರಿಗುಡಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ.
'ಒಂದು ರೂಪಾಯಿಯನ್ನೂ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಒಂದು ವೇಳೆ ತಪ್ಪುಮಾಡಿದ್ದರೆ, ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ' ಎಂದು ಪ್ರಮಾಣ ಮಾಡಿದ್ದಾರೆ. ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶಾಸಕ ಪೂಂಜಾ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡಿದ್ದರು. ಬೆಳ್ತಂಗಡಿ ಪ್ರವಾಸಿ ಬಂಗಲೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆಂದು ಹಾಗೂ 3 ಕೋಟಿ ರೂ. ಕಮಿಷನ್ ಪಡೆದು ಅಕ್ರಮಗಳನ್ನು ಎಸಗಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಶಿವರಾಂ ಮಾಡಿದ್ದರು. ಆರೋಪಗಳಿಗೆ ಪ್ರತಿಯಾಗಿ, ಹರೀಶ್ ಪೂಂಜಾ ಮಾರಿಗುಡಿಯ ಮಹಾದೇವಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ, ತೆಂಗಿನಕಾಯಿ ಒಡೆಯುವ ಮೂಲಕ ಭ್ರಷ್ಟಾಚಾರ ನಡೆಸಿಲ್ಲ ಎಂಬುದಾಗಿ ಪ್ರಮಾಣ ಮಾಡಿದ್ದಾರೆ. 'ನಾನು ಯಾವುದೇ ಅಕ್ರಮ ಎಸಗಿಲ್ಲ' ಎಂದು ಪೂಂಜಾ ಹೇಳಿದ್ದರು. ಆರೋಪಗಳನ್ನು ಮಾಡುತ್ತಿರುವ ರಕ್ಷಿತ್ ಶಿವರಾಂ ಸೇರಿದಂತೆ ಎಲ್ಲರಿಗೂ ತಕ್ಕ ಶಿಕ್ಷೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಈ ಸಂದರ್ಭ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಧರ್ಮಸ್ಥಳದ ಕೆಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
Love Failure: ಆಳ್ವಾಸ್ ಕಾಲೇಜಿನ ಕ್ಲಾಸ್ ರೂಮ್‌ಗೆ ನುಗ್ಗಿ ಯುವತಿಗೆ ಕತ್ತರಿಯಲ್ಲಿ ಇರಿದ ಪಾಗಲ್ ಪ್ರೇಮಿ!
ಪ್ರಕರಣದ ಹಿನ್ನೆಲೆ ಏನು?
ಹರೀಶ್ ಪೂಂಜಾ ವಿರುದ್ಧದ ಭ್ರಷ್ಟಾಚಾರ ಆರೋಪಗಳು ಬೆಳ್ತಂಗಡಿ ಪ್ರವಾಸಿ ಮಂದಿರ ನಿರ್ಮಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾಮಗಾರಿಗೆ ಸಂಬಂಧಿಸಿದ್ದಾಗಿದೆ. ಶಿವರಾಂ ಅವರ ಪ್ರಕಾರ, 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಪ್ರವಾಸಿ ಮಂದಿರದ ಕಾಮಗಾರಿ ಪೂರ್ಣಗೊಂಡ ನಂತರ ವರ್ಕ್ ಆರ್ಡರ್ ನೀಡಲಾಗಿದೆ ಮತ್ತು ಅನುದಾನವನ್ನು ಚುನಾವಣೆ ಪ್ರಚಾರಕ್ಕೆ ದುರುಪಯೋಗ ಮಾಡಲಾಗಿದೆ ಎಂದು ಶಿವರಾಂ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಮನವಿ ಮಾಡಿರುವುದಾಗಿ ಹಾಗೂ ಎಸ್‌ಐಟಿ ತನಿಖೆಗೂ ಸಹ ರಕ್ಷಿತ್ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ