Auto Rickshaw Rolls Down Slope: ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಇಳಿಜಾರಿನಲ್ಲಿ ಚಲಿಸಲು ಬಿಟ್ಟ ಯುವಕ! ಮುಂದೇನಾಯ್ತು ನೋಡಿ!

Kannadaprabha News   | Kannada Prabha
Published : Jun 09, 2025, 04:39 AM ISTUpdated : Jun 09, 2025, 11:40 AM IST
hassan crime news

ಸಾರಾಂಶ

ಬೇಲೂರಿನಲ್ಲಿ ಯುವಕನೊಬ್ಬ ಆಟೋವನ್ನು ನ್ಯೂಟ್ರಲ್ ಮಾಡಿ ಹಿಮ್ಮುಖವಾಗಿ ಚಲಿಸಲು ಬಿಟ್ಟಿದ್ದರಿಂದ ಮಕ್ಕಳ ಪ್ರಾಣಕ್ಕೆ ಅಪಾಯವೊಡ್ಡಿದ ಘಟನೆ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದಲ್ಲಿ ಯುವಕನ ಕೃತ್ಯ ಬೆಳಕಿಗೆ ಬಂದಿದ್ದು, ಪೊಲೀಸರು ಆತನನ್ನು ಎಚ್ಚರಿಸಿ ಕಳುಹಿಸಿದ್ದಾರೆ.

ಬೇಲೂರು(ಜೂ.9): ಪಟ್ಟಣದ ನೆಹರೂ ನಗರದಲ್ಲಿ ಯುವಕನೊಬ್ಬ ತನ್ನ ಬೈಕ್ ರಸ್ತೆ ಕಡೆಗೆ ತಿರುಗಿಸಲು ಅಡ್ಡವಾಗಿ ಆಟೋ ನಿಂತಿದ್ದ ಕಾರಣ ಪ್ರಯಾಣಿಕರ ಸೀಟಿನಲ್ಲಿ ಮೂರ್ನಾಲ್ಕು ಮಕ್ಕಳು ಕುಳಿತಿದ್ದ ಆಟೋವನ್ನು ನ್ಯೂಟ್ರಲ್ ಮಾಡಿ ಹಿಮ್ಮುಖವಾಗಿ ಇಳಿಜಾರಿನಲ್ಲಿ ಚಲಿಸಲು ಬಿಟ್ಟು ಮಕ್ಕಳ ಪ್ರಾಣವನ್ನು ಅಪಾಯಕ್ಕೆ ಒಡ್ಡಿದ ಆಘಾತಕಾರಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹಾಸನ ಮೂಲದ ವ್ಯಕ್ತಿಯೊಬ್ಬರು ತಮ್ಮ ಆಟೋವನ್ನು ಅಂಗಡಿಯ ಮುಂದೆ ನಿಲ್ಲಿಸಿ ಒಳಗೆ ತೆರಳಿದ್ದ ವೇಳೆ, ತನ್ನ ಬೈಕ್ ತೆಗೆದುಕೊಂಡು ಹೋಗಲು ಬಂದ ಯುವಕನಿಗೆ ಆಟೋ ಅಡ್ಡಿಯಾಗಿತ್ತು. ಕೆಲ ನಿಮಿಷ ಕಾದ ಬಳಿಕ, ಯುವಕ ಆಟೋವನ್ನು ನ್ಯೂಟ್ರಲ್‌ಗೆ ಹಾಕಿ ಬಿಟ್ಟಿದ್ದಾನೆ. ಇದರಿಂದ ಆಟೋ ಹಿಮ್ಮುಖವಾಗಿ ಚಲಿಸತೊಡಗಿದೆ. ಇದರಿಂದ ಆಟೋದೊಳಗೆ ಕುಳಿತಿದ್ದ ಪುಟ್ಟ ಮಕ್ಕಳ ಜೀವಕ್ಕೆ ತೊಂದರೆಯಾಗುವ ಸ್ಥಿತಿ ನಿರ್ಮಾಣವಾಗಿತ್ತು.ಆಟೋ ಚಲಿಸುವುದನ್ನು ಗಮನಿಸಿದ ಚಾಲಕ ಹಾಗೂ ಸ್ಥಳದಲ್ಲಿದ್ದವರು ಓಡಿಹೋಗಿ ಆಟೋವನ್ನು ನಿಲ್ಲಿಸಿದ್ದಾರೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಮಕ್ಕಳು ಅಪಾಯದಿಂದ ಪಾರಾಗಿವೆ. ಆದರೆ, ಯುವಕ ತನ್ನ ಬೈಕ್‌ನಲ್ಲಿ ತನ್ನ ಪಾಡಿಗೆ ತಾನು ತೆರಳಿದ್ದಾನೆ. ಈ ಘಟನೆಯ ದೃಶ್ಯ ಸ್ಥಳದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೇಲೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಈ ಕೃತ್ಯ ಎಸಗಿದ ಐರವಳ್ಳಿ ಗ್ರಾಮದ ಯುವಕ ಕೀರ್ತಿ ಎಂದು ತಿಳಿದು ಬಂದಿದ್ದು, ಆತನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಿಡಿಗೇಡಿ ಕೃತ್ಯಗಳ ಬಗ್ಗೆ ಜನರು ಎಚ್ಚರವಹಿಸಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ