ಇನ್ಸ್‌ಪೆಕ್ಟರ್ ವರ್ಗಾವಣೆ ಆದೇಶಕ್ಕೆ ಸರ್ಕಾರ ಅಧೀನ ಕಾರ್ಯದರ್ಶಿ ಸಹಿ!

Published : May 13, 2025, 10:47 AM IST
ಇನ್ಸ್‌ಪೆಕ್ಟರ್ ವರ್ಗಾವಣೆ ಆದೇಶಕ್ಕೆ ಸರ್ಕಾರ ಅಧೀನ ಕಾರ್ಯದರ್ಶಿ ಸಹಿ!

ಸಾರಾಂಶ

ಸಿವಿಲ್ ವ್ಯಾಜ್ಯ ಪ್ರಕರಣ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಹಿ ಮಾಡಿರುವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು (ಮೇ.13): ಸಿವಿಲ್ ವ್ಯಾಜ್ಯ ಪ್ರಕರಣ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್‌ಪೆಕ್ಟರ್ ಎ.ವಿ. ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಹಿ ಮಾಡಿರುವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.

ಸಾಮಾನ್ಯವಾಗಿ ಡಿವೈಎಸ್ಪಿ ಮೇಲ್ಮಟ್ಟದ ಅಧಿಕಾರಿಗಳ ವರ್ಗಾವಣೆಯನ್ನು ಸರ್ಕಾರ ಹಾಗೂ ಇನ್ಸ್‌ಪೆಕ್ಟರ್‌ ಹುದ್ದೆಯಿಂದ ಕೆಳಮಟ್ಟದ ಅಧಿಕಾರಿಗಳ ವರ್ಗಾವಣೆಯನ್ನು ಪೊಲೀಸ್ ಇಲಾಖೆ ನಡೆಸಲಿದೆ. ಹೀಗಾಗಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಆದೇಶಕ್ಕೆ ರಾಜ್ಯ ಪೊಲೀಸ್ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕರ (ಆಡಳಿತ) ಸಹಿ ಇರುತ್ತದೆ. ಆದರೆ ಮೇ 7 ರಂದು ಹೊರಡಿಸಲಾದ ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ಎಡಿಜಿಪಿ ಬದಲಿಗೆ ರಾಜ್ಯ ಸರ್ಕಾರ ಅಧೀನ ಕಾರ್ಯದರ್ಶಿ (ಒಳಾಡಳಿತ) ಧನಂಜಯ್ ರವರು ಮಾಡಿರುವುದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: ಡ್ರೈವರ್‌ನ ಲಾಡ್ಜ್‌ನಲ್ಲಿ ಕೂಡಾಕಿ ಟ್ಯಾಕ್ಸಿ ಸಮೇತ ಖತರ್ನಾಕ್ ಲೇಡಿ ಪರಾರಿ!

ಕೆಲ ದಿನಗಳ ಹಿಂದೆ ಸಿವಿಲ್ ವ್ಯಾಜ್ಯ ಪ್ರಕರಣದಲ್ಲಿ ಪಿಐ ಕುಮಾರ್ ಅವರು ಡೀಲ್‌ ನಡೆಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಬಳಿಕ ಪಿಐ ಕುಮಾರ್ ಹಾಗೂ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಸೇರಿದಂತೆ ಐವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣದ ಬಳಿಕ ಕುಮಾರ್ ಅವರನ್ನು ತಾತ್ಕಾಲಿಕವಾಗಿ ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಬಿಡುಗಡೆಗೊಳಿಸಿ ನಗರ ಶಾಖೆಗೆ ಆಯುಕ್ತ ಬಿ. ದಯಾನಂದ್ ನಿಯೋಜಿಸಿದ್ದರು.

ಕೊನೆಗೆ ಅವರನ್ನು ವರ್ಗಾವಣೆ ಮಾಡಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್‌ ಲತೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ. ಆದರೆ ವರ್ಗಾವಣೆ ಆದೇಶವು ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಅ‍ವರಿಂದ ಹೊರಡಿಸಲಾಗಿದೆ.

ಅವಧಿ ಪೂರ್ವ ವರ್ಗಾವಣೆ?

ಪ್ರಸುತ್ತ ರಾಜ್ಯ ಪೊಲೀಸ್ ಇಲಾಖೆಯ ವರ್ಗಾವಣೆ ಕಾಯ್ದೆ ಅನುಸಾರ ಒಂದೇ ಕಾರ್ಯಸ್ಥಾನದಲ್ಲಿ ಪೊಲೀಸರಿಗೆ ಎರಡು ವರ್ಷಗಳು ಸೇವಾವಧಿ ಇರುತ್ತದೆ. ಅಂತೆಯೇ ಕುಮಾರ್ ಅವರಿಗೆ ಅನ್ನಪೂರ್ಣೇಶ್ವರಿ ಠಾಣೆಯಿಂದ ವರ್ಗಾವಣೆಗೆ ಇನ್ನು ನಾಲ್ಕು ತಿಂಗಳ ಸಮಯವಿತ್ತು. ಹೀಗಾಗಿ ಅವಧಿ ಪೂರ್ವ ವರ್ಗಾವಣೆ ಕಾರಣಕ್ಕೆ ಪೊಲೀಸ್ ಇಲಾಖೆಯ ಬದಲಿಗೆ ಸರ್ಕಾರವೇ ನೇರವಾಗಿ ವರ್ಗಾವಣೆಗೊಳಿಸಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!