
ವಿಶ್ವಸಂಸ್ಥೆ: ಆಂತರಿಕ ಸಂಘರ್ಷ ಪೀಡಿತ ಆಫ್ರಿಕಾ ದೇಶವಾದ ದಕ್ಷಿಣ ಸುಡಾನ್‌ನಲ್ಲಿ ನಿಯೋಜಿಸಲಾಗಿರುವ ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಗಳಲ್ಲಿ ಸಲ್ಲಿಸಿದ ಉತ್ತಮ ಸೇವೆ ಪರಿಗಣಿಸಿ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ ಲಭಿಸಿದೆ.
ಸದ್ಯ ದಕ್ಷಿಣ ಸುಡಾನ್‌ನಲ್ಲಿ ಸ್ವಾತಿ ಶಾಂತಕುಮಾರ್ ಸೇವೆ ಸಲ್ಲಿಸುತ್ತಿದ್ದು, ಅವರಿಗೆ ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ ಗುಟೆರೆಸ್ ಅವರು ಈ ಪ್ರಶಸ್ತಿ ಘೋಷಿಸಿದ್ದಾರೆ.
‘ಸಮಾನ ಪಾಲುದಾರರು, ಶಾಶ್ವತ ಶಾಂತಿ’ ಎಂಬ ವಿಭಾಗದಲ್ಲಿ ಸ್ವಾತಿ ಈ ಗೌರವ ಪಡೆದಿದ್ದಾರೆ. ವಿಶ್ವದ ಎಲ್ಲ ವಿಶ್ವಸಂಸ್ಥೆ ಶಾಂತಿಪಾಲನಾ ಮಿಷನ್‌ಗಳು ಮತ್ತು ಏಜೆನ್ಸಿಗಳಿಂದ ಬಂದ ನಾಮನಿರ್ದೇಶನಗಳ ಪೈಕಿ ಅಂತಿಮವಾಗಿ 4
ತಂಡಗಳು ಆಯ್ಕೆಯಾಗಿದ್ದವು. ಈ ತಂಡಗಳ ಪೈಕಿ ಸ್ವಾತಿ ನೇತೃತ್ವದ ಭಾರತೀಯ ತಂಡ ಅತಿ ಹೆಚ್ಚು ಮತಗಳನ್ನು ಪಡೆದು ವಿಜೇತವಾಗಿದೆ.
ಮೇಜರ್ ಸ್ವಾತಿ ಅವರ ನೇತೃತ್ವದಲ್ಲಿ ಭಾರತೀಯ ತಂಡವು ಗ್ರಾಮೀಣ ಮಟ್ಟದಲ್ಲಿ ಶಾಂತಿ ಸ್ಥಾಪನೆಗೆ ಅಪಾರ ಕೊಡುಗೆ ನೀಡಿದೆ. ಅತ್ಯಂತ ದುರ್ಗಮ ಪ್ರದೇಶ ಹಾಗೂ ಕುಗ್ರಾಮಗಳಲ್ಲೂ ವಿವಿಧ ಗಸ್ತುಗಳನ್ನು ಯಶಸ್ವಿಯಾಗಿ ನಿಭಾಯಿಸಿದೆ. ಸಂಘರ್ಷ ಪೀಡಿತ ದೇಶದಲ್ಲಿ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತೆ ಒದಗಿಸಿದೆ. ಇದರಿಂದ ಮಹಿಳೆಯರ ಸಮುದಾಯದಲ್ಲಿ ಭಾಗವಹಿಸುವಿಕೆ ಹೆಚ್ಚಾಗಿದೆ ನಂಬಿಕೆ ಮತ್ತು ಸಂವಹನ ಬಲಗೊಂಡಿದೆ ಎಂದು ವಿಶ್ವಸಂಸ್ಥೆ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ