
ಬೆಂಗಳೂರು (ಸೆ.15): ಚಲಿಸುತ್ತಿದ್ದ BMTC ಬಸ್‌ನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಇಂದು ಬೆಳಗಿನ ಜಾವ 5:15ರ ಸುಮಾರಿಗೆ HAL ಮೇನ್ ಗೇಟ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಹೊತ್ತಿದ್ದು ಹೇಗೆ?
ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿದ್ದ ಈ ಬಸ್‌ನಲ್ಲಿ ಸುಮಾರು 75 ಪ್ರಯಾಣಿಕರಿದ್ದರು. ಬಸ್ (ವಾಹನ ಸಂಖ್ಯೆ: KA57 F 4568, ಘಟಕ 51) HAL ಬಸ್ ಸ್ಟಾಪ್ ಬಳಿಯ ಮಾರ್ಗ KBS-1K/3(N/O)ದಲ್ಲಿ ಚಲಿಸುತ್ತಿರುವಾಗ ಇಂಜಿನ್‌ನಿಂದ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಜಯಚಂದ್ರ (Tn_19558) ಮತ್ತು ನಿರ್ವಾಹಕ ಚೌಡಪ್ಪ (Tn_6910) ಅವರ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರನ್ನು ತಕ್ಷಣವೇ ಸುರಕ್ಷಿತವಾಗಿ ಬಸ್‌ನಿಂದ ಇಳಿಸಲಾಯಿತು.
ನೋಡುತ್ತಿದ್ದಂತೆ ಬಸ್ ಸುಟ್ಟು ಭಸ್ಮ:
ಪ್ರಯಾಣಿಕರನ್ನ ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಳಗಿಳಿದ ಪ್ರಯಾಣಿಕರು ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗಳು ಬಸ್‌ನ ಇಂಜಿನ್‌ನಿಂದ ಹರಡಿ, ವಾಹನವನ್ನು ಸಂಪೂರ್ಣವಾಗಿ ಭಸ್ಮವಾಗಿಸಿತು. HAL ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು.
BMTCಯಿಂದ ಪತ್ರಿಕಾ ಪ್ರಕಟಣೆ:
BMTCಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಇಂದು ಮುಂಜಾನೆ 5:10ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಚಾಲಕ ಮತ್ತು ನಿರ್ವಾಹಕರ ತ್ವರಿತ ಕ್ರಮದಿಂದಾಗಿ ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಆದರೆ, ವಾಹನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.ಈ ಘಟನೆಯಿಂದ ಸಾರಿಗೆ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲವಾದರೂ, HAL ಮಾರ್ಗದಲ್ಲಿ ಪ್ರಯಾಣಿಕರು ಎಚ್ಚರಿಕೆಯಿಂದ ಇರಬೇಕೆಂದು BMTC ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ