
ಬೆಂಗಳೂರು, (ಆ.22): ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಸಜಾಬಂಧಿ ಕೈದಿಗಳು ಉತ್ತಮ ಪ್ರದರ್ಶನ ತೋರಿ ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದ್ದಾರೆ.
ಹೌದು...75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿ ಸಜಾಬಂಧಿ ಕೈದಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಚಿತ್ರಕಲೆ, ಗಾಯನ ಸೇರಿದಂತೆ ಹಲವಾರು ಬಗೆಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಇದರಲ್ಲಿ ಜೈಲುಹಕ್ಕಿಗಳು ಉತ್ಸಾಹದಿಂದ ಕೆಲವರು ಚಿತ್ರ ಬಿಡಿಸಿದರೆ, ಇನ್ನು ಕೆಲವರು ಹಾಡಿದರು.
ಆಫ್ರಿಕನ್ನನ ಹೊಟ್ಟೆಯಲ್ಲಿತ್ತು 11 ಕೋಟಿ ರು. ಮೌಲ್ಯದ ಡ್ರಗ್ಸ್
ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿದ್ದು, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನೂ ಘೋಷಿಸಲಾಯಿತು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಕೈದಿಗಳು ಬಿಡಿಸಿದ ವಿಭಿನ್ನ ಚಿತ್ರಗಳು ಜೈಲಿನ ಅಧಿಕಾರಿಗಳನ್ನೂ ಅಚ್ಚರಿಗೊಳಿಸಿತು.
ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ನೈಜೇರಿಯಾ ದೇಶದ ಪ್ರಜೆಗಳೂ ಕೂಡ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದರು. ಇತರ ಸಜಾಬಂಧಿ ಕೈದಿಗಳ ಜತೆ ಜೈಲುವಾಸ ಅನುಭವಿಸುತ್ತಿರುವ ನೈಜೀರಿಯನ್ ಪ್ರಜೆಗಳೂ ಕೂಡ ಸಹಜವಾಗಿಯೇ ಭಾಗಿಯಾಗಿದ್ದರು. ವಿವಿಧ ಪ್ರಕರಣಗಳಲ್ಲಿ ಕಾರಾಗೃಹ ಸೇರಿರುವ ಕೈದಿಗಳು ತಮಗಾಗಿಯೇ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ