ಬೆಂಗಳೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ, ನಿಯಂತ್ರಣಕ್ಕೆ ಬಾರದ ಬೆಂಕಿ

Published : Jun 28, 2026, 06:49 PM IST
Massive Fire Breaks Out at Chemical Factory

ಸಾರಾಂಶ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕೆಮಿಕಲ್ ಕಂಪನಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಭಾನುವಾರವಾದರೂ ಸುಮಾರು 20 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು (ಜೂ.28) ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು (ಜೂ.28) ಸಂಜೆ 5.10ರ ಸುಮಾರಿಗೆ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದೆ. ಇಡೀ ಫ್ಯಾಕ್ಟರಿಗೆ ಆವರಿಸಿಕೊಂಡಿದೆ. ಆಸಿಡ್‌, ಟಿನ್ನರ್ ಸೇರಿದಂತೆ ಕೆಮಿಕಲ್ ತಯಾರಿಕಾ ಘಟಕವಾಗಿರುವ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ. ಭಾನುವಾರ ರಜಾ ದಿನವಾಗಿರು ಕಾರಣ ಕೇವಲ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಂಡ ಎಲ್ಲಾ ಕಾರ್ಮಿಕರು ಹೊರಗಿದ್ದ ಕಾರಣ ಅದೃಷ್ಠವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿರುವ ದಿವ್ಯ ಇಂಪೋಟರ್ಸ್ ಕಂಪನಿಗೆ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರಿನ ಬಿಟಿಎಮ್ ಲೇಔಟ್ನ ಹರಿನಾಥ್ ಎಂಬುವಬರಿಗೆ ಸೇರಿದ ಕಂಪನಿ ಇದಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಭಾರಿ ಪ್ರಮಾಣದಲ್ಲಿ ಕೆಮಿಕಲ್ ಇರುವ ಕಾರಣ ಬೆಂಕಿ ನಿಯಂತ್ರಣಕ್ಕೆ ಬರದೆ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಗ್ಯಾಸ್ ಲೇನ್ ಆಫ್ ಮಾಡಲು ಸಿಬ್ಬಂದಿ ಹರಸಾಹಸ

ಕೆಮಿಕಲ್ ಫ್ಯಾಕ್ಟರಿಯ ಬೆಂಕಿ ತೀವ್ರಗೊಳ್ಳುತ್ತಿದೆ. ಕಂಪನಿ ಒಳಗಡೆ ಗ್ಯಾಸ್ ಲೇನ್ ಇರುವ ಕಾರಣ ಆತಂಕ ಹೆಚ್ಚಾಗಿದೆ. ಗ್ಯಾಸ್ ಲೇನ್‌ಗೆ ಬೆಂಕಿ ತಗುಲಿದರೆ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಸಿಬ್ಬಂದಿಗಳು ಗ್ಯಾಸ್ ಲೈನ್ ಆಫ್ ಮಾಡಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ತೀವ್ರತೆ ಹೆಚ್ಚಾಗುತ್ತಿರುವ ಕಾರಣ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯಾಸ ಪಡುತ್ತಿದ್ದಾರೆ.

ಹೆಚ್ಚುವರಿ ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಕೈಗಾರಿಕೆ ಸುತ್ತ ಮುತ್ತ ಇದೀಗ ಆತಂಕ ಎದುರಾಗಿದೆ. ಗ್ಯಾಸ್ ಲೇನ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡರೆ ಭಾರಿ ಪ್ರಮಾಣದಲ್ಲಿ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಅಗ್ನಿಶಾಮಕ ದಳ ಹಾಗೂ ಕಂಪನಿ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಿನಲ್ಲಿ ಬಂದು ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಿಂದ ಶೂ ಕಳ್ಳತನ, ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಇ-ಕೆವೈಸಿ, ಆಧಾರ ಲಿಂಕ್ ಮಾಡಿಸದ 6 ಲಕ್ಷ ರೈತರಿಗೆ ಬಂದಿಲ್ಲ ‘ಕಿಸಾನ್‌ ಸಮ್ಮಾನ್‌’ ಹಣ! ನಿಮಗೂ ಬಂದಿಲ್ವ? ಮೊದಲು ಈ ಕೆಲಸ ಮಾಡಿ