ಬೆಂಗಳೂರು-ಮೈಸೂರು ಬೆನ್ನಲ್ಲಿಯೇ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್‌ ನಿಷೇಧ!

Published : Mar 04, 2025, 05:01 PM ISTUpdated : Mar 04, 2025, 05:35 PM IST
ಬೆಂಗಳೂರು-ಮೈಸೂರು ಬೆನ್ನಲ್ಲಿಯೇ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ಬೈಕ್‌ ನಿಷೇಧ!

ಸಾರಾಂಶ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ಎನ್‌ಎಚ್‌ಎಐ ನಿಷೇಧಿಸಿದೆ. ಕೋಲಾರದಲ್ಲಿ ಸಂಭವಿಸಿದ ಅಪಘಾತದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್‌ಗಳ ಬಳಕೆಯನ್ನು ನಿಷೇಧಿಸಲು ಸೈನ್‌ಬೋರ್ಡ್‌ಗಳನ್ನು ಅಳವಡಿಸಲಾಗುವುದು.

ಬೆಂಗಳೂರು (ಮಾ.04): ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿಷೇಧಿಸಿದೆ . ಭಾನುವಾರ ರಾತ್ರಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಈ ಮಾರ್ಗದಲ್ಲಿ ಸಂಭವಿಸಿದ ಮೊದಲ ಪ್ರಮುಖ ಅಪಘಾತದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ಇದೀಗ ಪ್ರವೇಶ ಮತ್ತು ನಿರ್ಗಮನ ದ್ವಾರಗಳ ಬಳಿ ಬೈಕ್‌ಗಳ ಪ್ರವೇಶವನ್ನು ನಿಷೇಧಿಸಲು ಗಸ್ತು ವಾಹನಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್‌ಗಳ ಬಳಕೆಯನ್ನು ನಿಷೇಧಿಸಲು ಸೈನ್‌ಬೋರ್ಡ್‌ಗಳನ್ನು ಅಳವಡಿಸಲಾಗುವುದು ಎಂದು ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೈವೇಗೆ ಬೈಕ್ ತಪ್ಪಾದ ಕಡೆಯಿಂದ ಪ್ರವೇಶಿಸಿ ನಾಲ್ಕು ಚಕ್ರದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ, ಬೈಕ್ ಸವಾರನ ತಪ್ಪಿನಿಂದಲೇ ಈ ಕೃತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ದೇಶದ ಯಾವುದೇ ಎಕ್ಸ್‌ಪ್ರೆಸ್‌ವೇಗಳಲ್ಲಿ ಬೈಕ್‌ ಪ್ರವೇಶವನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನ ಸವಾರರು ಈ ಎಕ್ಸ್‌ಪ್ರೆಸ್‌ವೇ ಬಳಸದಂತೆ ನಾವು ಒತ್ತಾಯಿಸುತ್ತೇವೆ. ಎಕ್ಸ್‌ಪ್ರೆಸ್‌ವೇಗಳನ್ನು ಗರಿಷ್ಠ 120 ಕಿ.ಮೀ ವೇಗದಲ್ಲಿ ಚಾಲನೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಇತರ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸುವಾಗ ಬೈಕ್‌ ಸವಾರರು ಈ ಮಾರ್ಗವನ್ನು ಬಳಸುವುದು ಸುರಕ್ಷಿತವಲ್ಲ. ಬೈಕ್ ಸವಾರರು ತಮ್ಮ ಜೀವ ಮತ್ತು ಇತರ ವಾಹನ ಸವಾರರನ್ನೂ ಅಪಾಯಕ್ಕೆ ಸಿಲುಕಿಸುತ್ತಾರೆ. ಈ ರಸ್ತೆಯಲ್ಲಿ ಪೂರ್ಣಗೊಂಡ ಭಾಗದಲ್ಲಿ ವಾಹನ ಚಾಲಕರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಾಗ, ಅನೇಕ ಬೈಕ್‌ ಸವಾರರು ಹೊಸ ಅನುಭವಕ್ಕಾಗಿ ಈ ಹೈವೇಗೆ ಬಂದಿದ್ದಾರೆ. ಆದರೆ, ಜೀವಗಳು ಅಮೂಲ್ಯ. ಬೈಕ್‌ ಸವಾರರು ಈ ರಸ್ತೆಯಲ್ಲಿ ಸಂಚಾರ ಮಾಡಬಾರದು ಎಂದು ಎನ್‌ಎಚ್‌ಐಎ ಅಧಿಕಾರಿ ಹೇಳಿದರು.

ಇದನ್ನೂ ಓದಿ: ಭಾರತದ ಶ್ರೀಮಂತ ಇತಿಹಾಸ, ಅದ್ಭುತ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾದ ಹೆಮ್ಮೆಯ ಕೋಟೆ ಬಗ್ಗೆ ಗೊತ್ತೇ?

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ 68 ಕಿ.ಮೀ. ಮಾರ್ಗವನ್ನು ಕಳೆದ ತಿಂಗಳು ತಾತ್ಕಾಲಿಕವಾಗಿ ವಾಹನ ಸಂಚಾರಕ್ಕಾಗಿ ತೆರೆಯಲಾಯಿತು. ಕರ್ನಾಟಕದಲ್ಲಿ 71 ಕಿ.ಮೀ. ಎಕ್ಸ್‌ಪ್ರೆಸ್‌ವೇ ಮಾರ್ಗದ ನಿರ್ಮಾಣವನ್ನು ಎನ್‌ಎಚ್‌ಎಐ ಪೂರ್ಣಗೊಳಿಸಿದೆ. ಹೊಸಕೋಟೆಯಿಂದ ಚೆನ್ನೈ ಬಳಿಯ ಶ್ರೀಪೆರಂಬುದೂರಿನವರೆಗಿನ 260 ಕಿ.ಮೀ. ವ್ಯಾಪ್ತಿಯ ಉಳಿದ ಭಾಗವು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ವ್ಯಾಪ್ತಿಗೆ ಬರುತ್ತದೆ. ಅದು ಈ ವರ್ಷಾಂತ್ಯದ ವೇಳೆಗೆ ತೆರೆಯುವ ಸಾಧ್ಯತೆಯಿದೆ. ಕರ್ನಾಟಕದ ಮಿತಿಯೊಳಗೆ, ಈ ಎಕ್ಸ್‌ಪ್ರೆಸ್‌ವೇ ಜನರು ಹೊಸಕೋಟೆ, ಮಾಲೂರು, ಕೆಜಿಎಫ್ ಮತ್ತು ಇತರ ಸ್ಥಳಗಳನ್ನು ತಲುಪಲು ಸಹಾಯ ಮಾಡುತ್ತದೆ.

ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಪದೇ ಪದೇ ಮಾರಕ ಅಪಘಾತಗಳು ಸಂಭವಿಸಿದ ನಂತರ, ಹೆದ್ದಾರಿಯ ಮುಖ್ಯ ಮಾರ್ಗಗಳಲ್ಲಿ ಬೈಕ್‌ಗಳು ಮತ್ತು ಆಟೋರಿಕ್ಷಾಗಳ ಪ್ರವೇಶವನ್ನು NHAI ನಿಷೇಧಿಸಿತು. ಇದರ ಜೊತೆಗೆ, ಕಾರು ಚಾಲಕರು ಮತ್ತು ರಸ್ತೆ ಬಳಸುವ ಇತರ ವಾಹನಗಳ ವೇಗ ತಗ್ಗಿಸಲು ಕ್ರಮ ಕೈಗೊಂಡಿದ್ದೇವೆ. ಕೆಲವು ವಾಹನ ಸವಾರರು ಖಾಲಿ ರಸ್ತೆಯನ್ನು ನೋಡಿದ ನಂತರ ಹೆಚ್ಚು ವೇಗದಲ್ಲಿ ಹೋಗುತ್ತಾರೆ. ಇದು ಗಂಭೀರ ಅಪಘಾತಗಳಿಗೆ ಕಾರಣವಾಗುತ್ತದೆ. ಹೀಗಾಗಿ, ಆಯಾ ಜಿಲ್ಲೆಗಳ ಅಧಿಕಾರಿಗಳಿಗೆ ಈ ಬಗ್ಗೆ ಸಹಕಾರ ನೀಡುವಂತೆ ಹೆದ್ದಾರಿ ಪ್ರಾಧಿಕಾರದಿಂದ ಪತ್ರ ಬರೆಯಲಾಗುತ್ತದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಹೇಳಿದರು.

ಇದನ್ನೂ ಓದಿ: ಮೈಸೂರಿನ ಸಿಐಐಎಲ್ ಡೈರೆಕ್ಟರ್ ನೇಮಕಾತಿ 2025: ₹2.18 ಲಕ್ಷ ವೇತನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌