
ಬೆಂಗಳೂರು (ಸೆ.25): ತೃತೀಯಲಿಂಗಿ ವ್ಯಕ್ತಿಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಿರುಕುಳ, ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು, ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೆಲ ಮಾರ್ಗ ಸೂಚಿಗಳನ್ನು ಹೊರಡಿಸಿದ್ದಾರೆ.
ನಗರದಲ್ಲಿ ಕೆಲವರು ತೃತೀಯಲಿಂಗಿ ವ್ಯಕ್ತಿಗಳು ತಮ್ಮ ಸ್ವಹಿತಾಸಕ್ತಿಗಾಗಿ ಸಾರ್ವಜನಿಕರಿಗೆ ಕಿರುಕುಳ ನೀಡುವುದು, ಸಂಚಾರಕ್ಕೆ ಅಡ್ಡಿಪಡಿಸುವುದು, ಸಮಾರಂಭದ ಸ್ಥಳಗಳಲ್ಲಿ ಬಲವಂತವಾಗಿ ಸುಲಿಗೆ ಮಾಡುವುದು ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಕುರಿತು ವ್ಯಾಪಕ ದೂರುಗಳು ಕೆಳ ಬಂದಿದೆ. ಈ ಬಗ್ಗೆ ಮಾಧ್ಯಮಗಳಲ್ಲಿಯೂ ಸಹ ಈ ಸುದ್ದಿಗಳು ಪ್ರಕಟವಾಗಿರುತ್ತದೆ. ಈ ವಿಷಯವನ್ನು ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ.
ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬೆಂಗಳೂರು ನಗರದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿ/ಸಿಬ್ಬಂದಿಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ. ಇಂತಹ ಘಟನೆಗಳ ಕುರಿತು ಸಾರ್ವಜನಿಕರು ಆತಂಕಗೊಳ್ಳದೆ ಕೂಡಲೇ ನಮ್ಮ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿಸುವುದು ಹಾಗೂ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುಗಮ ಸಂಚಾರವನ್ನು ಖಚಿತ ಪಡಿಸುವುದರ ಜತೆಗೆ ತೃತೀಯಲಿಂಗಿ ವ್ಯಕ್ತಿಗಳ ಕಾನೂನುಬದ್ದ ಹಕ್ಕುಗಳು, ಗೌರವ ಮತ್ತು ಘನತೆಯನ್ನು ಸಂರಕ್ಷಿಸುವುದು ಹಾಗೂ ಪೊಲೀಸ್ ಸಿಬ್ಬಂದಿ ತೃತೀಯಲಿಂಗಿ ವ್ಯಕ್ತಿಗಳೊಂದಿಗೆ ಅವಹೇಳನಕಾರಿ ಅಥವಾ ಸಾಮೂಹಿಕ ನಿಂದನಾತ್ಮಕ ಪದಗಳನ್ನು ಬಳಸದೆ ಗೌರವಯುತ ಮತ್ತು ತಾರತಮ್ಯ ರಹಿತ ಭಾಷೆ ಬಳಸುವುದರೊಂದಿಗೆ ಕಾನೂನುಬದ್ಧ ಹಕ್ಕುಗಳು ಮತ್ತು ಘನತೆಗೆ ಧಕ್ಕೆಯಾಗದಂತೆ ಎಚ್ಚರಿಕೆಯಿಂದ ಕ್ರಮವಹಿಸುವುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ