
ಬೆಂಗಳೂರು (ಏ.23) ಮಾಜಿ ಸೈನಿಕ ಹಾಗೂ ಅವರ ಪತ್ನಿ, ಮುಸ್ಲಿಂ ಯುವಕನೊಬ್ಬನಿಗೆ, ನೀನು ಮುಸ್ಲಿಂ, ನೀನು ಪಾಕಿಸ್ತಾನ್, ನೀನು ಟೆರರಿಸ್ಟ್ ಎಂದು ಹೇಳಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಕೆಲ ಮುಸ್ಲಿಂ ಯುವಕರು ದಂಪತಿ ಮನೆ ಮುಂದೆ ಬಂದು ವಾಗ್ವಾದ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆಯು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ನಡೆದಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಸ್ಲಿಂ ಯುವಕ ಮತ್ತು ದಂಪತಿ ಅಬ್ಬಿಗೆರೆಯ ಅಪಾರ್ಟ್‌ವೊಂದರ ಅಕ್ಕ ಪಕ್ಕದ ನಿವಾಸಿಗಳಾಗಿದ್ದಾರೆ. ಈ ಮಧ್ಯೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಮಾಜಿ ಸೈನಿಕನ ಪತ್ನಿ ಪಕ್ಕದ ಮನೆಯ ಮುಸ್ಲಿಂ ನಿವಾಸಿಯಾದ ಯುವಕನಿಗೆ ನೀನು ಮುಸ್ಲಿಂ, ನೀನು ಪಾಕಿಸ್ತಾನ್, ನೀನು ಟೆರರಿಸ್ಟ್ ಎಂದು ಕರೆದಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಯುವಕ ತನ್ನ ಸಮುದಾಯದ ಕೆಲ ಯುವಕರೊಂದಿಗೆ ಆಗಮಿಸಿ ದಂಪತಿ ಜತೆ ವಾಗ್ವಾದ ನಡೆಸಿದ್ದಾರೆ. ಬಳಿಕ ದಂಪತಿ ಕ್ಷಮೆ ಕೋರಿದ ನಂತರ ಯುವಕರು ಸ್ಥಳದಿಂದ ತೆರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ