ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರು: ಜೈಲಿಂದ ಬಿಟ್ಟುಬಿಡಿ ಎಂದ ಕಾಂಗ್ರೆಸ್ ಶಾಸಕ ಶ್ರೀನಿವಾಸ್

By Sathish Kumar KHFirst Published Jan 6, 2024, 1:46 PM IST
Highlights

ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಯಲ್ಲಿ ಅಮಾಯಕರನ್ನು ಬಂಧಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕಾಂಗ್ರೆಸ್‌ ಶಾಸಕ ಶ್ರೀನಿವಾಸ್ ಮನವಿ ಮಾಡಿದ್ದಾರೆ.

ಬೆಂಗಳೂರು (ಜ.06): ಬೆಂಗಳೂರಿನ ಪುಲಿಕೇಶಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರಾಗಿದ್ದಾರೆ. ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ಶಾಸಕ ಎ.ಸಿ. ಶ್ರೀನಿವಾಸ್ ಬ್ಯಾಟಿಂಗ್ ಮಾಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆಯೇ ಎಂಬುದು ಹಲವು ಹೇಳಿಕೆಗಳಿಂದ ಸಾಬೀತಾಗುತ್ತಿದೆ. ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ತನ್ವೀರ್ ಸೇಠ್ ಅವರು ಪುಲಿಕೇಶಿ ವಿಧಾನಸಭಾ ಕ್ಷೇತ್ರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರನ್ನು ಅಮಾಯಕರು ಎಂದು ಓಲೈಕೆ ರಾಜಕಾರಣವನ್ನು ಮಾಡಿದ್ದರು. ಇದೀಗ ಪುಲಿಕೇಶಿ ನಗರ ಕಾಂಗ್ರೆಸ್‌ ಶಾಸಕ ಶ್ರೀನಿವಾಸ್‌ ಅವರು ಕೂಡ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯಲ್ಲಿ ಅಮಾಯಕರಿದ್ದಾರೆ. ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

Latest Videos

ಮೂವರು ಡಿಸಿಎಂ ನೇಮಕ ಗಾಳಿ ಸುದ್ದಿಯಷ್ಟೇ.., ಗೃಹ ಸಚಿವ ಡಾ.ಜಿ.ಪರಮೇಶ್ವರ

ಇನ್ನು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಉಸ್ತಾವರಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಮನೆ ಬಾಗಿಲಿಗೆ ಸರ್ಕಾರ, ಇರಲಿ ನಿಮ್ಮ ಸಹಕಾರ ಕಾರ್ಯಕ್ರಮದಡಿ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯಕ್ರಮದಲ್ಲಿ ಸುಮಾರು ಹಲವು ಮುಸ್ಲಿಂ ಮಹಿಳೆಯರು ಗುಂಪಾಗಿ ನಿಂತು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಕೋರರು ಅಮಾಯಕರು, ಅವರನ್ನು ಬಿಡುಗಡೆ ಮಾಡಬೇಕು ಎಂದು ಡಿಸಿಎಂ ಶಿವಕುಮಾರ್‌ಗೆ ಮನವಿ ಸಲ್ಲಿಕೆ ಮಾಡಿದ್ದಾರೆ. 

ಈ ಕುರಿತು ಮಾತನಾಡಿದ ಮಹಿಳೆಯೊಬ್ಬರು ಗಲಭೆಯ ವೇಳೆ ನಮ್ಮ ಸಹೋದರ ಮತ್ತು ಮನೆಯವರು ಘಟನೆಯನ್ನು ನಿಂತು ನೋಡುತ್ತಿದ್ದರು. ಆದರೆ, ಸುಮ್ಮನೆ ನಿಂತು ನೋಡುತ್ಇದ್ದವರನ್ನೂ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಮನೆಯಲ್ಲಿ ದುಡಿಮೆಗೆ ಆಸರೆಯಾಗಿದ್ದವರನ್ನೇ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಇದರಿಂದ ಮನೆಯ ಆರ್ಥಿಕ ಸ್ಥಿತಿ ಸಂಪೂರ್ಣವಾಗಿ ದಿವಾಳಿಯಾಗಿದೆ. ಗಲಭೆಯ ವೇಳೆ ನಿಂತಿದ್ದ ಅಮಾಯಕರನ್ನು ಬಿಡುಗಡೆ ಮಾಡಿ ನಮ್ಮ ಕುಟುಂಬದ ನೆಮ್ಮದಿಯ ಜೀವನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಭಾರತವನ್ನು ಹಿಂದುರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಮೋದ್‌ ಮುತಾಲಿಕ್

ಲೋಕಸಭೆ ಚುನಾವಣೆಗೆ ಅಲ್ಪ ಸಂಖ್ಯಾತರ ಓಲೈಕೆ: ಕಾಂಗ್ರೆಸ್‌ ಸರ್ಕಾರ ವಿರುದ್ಧ ಈಗಾಗಲೇ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಆರೋಪ ಕೇಳಿ ಬರುತ್ತಲೇ ಇದೆ.  ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಿಡುಗಡೆ ಮಾಡಬೇಕು ಎಂದು ಹಲವು ಶಾಸಕರು ಒತ್ತಾಯ ಹೇರಿದ್ದರು. ಡಿ.ಕೆ. ಶಿವಕುಮಾರ್ ಅವರು ಕೂಡ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನೀವೆಲ್ಲಾ ನಮ್ಮ ಬ್ರದರ್ಸ್‌ ಇದ್ದಹಾಗೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ನಿಮ್ಮನ್ನು ಬಿಡುಗಡೆ ಮಾಡಲಾಗುವುದು. ನೀವು ನಮ್ಮ ಬೆಂಬಲಕ್ಕೆ ನಿಲ್ಲಬೇಕು ಎಂದು ಹೇಳಿದ್ದರು. ಈಗ ಲೋಕಸಭಾ ಚುನಾವಣೆಗೂ ಮುನ್ನವೇ ಸರ್ಕಾರ ಕೊಟ್ಟ ಭರವಸೆಯನ್ನು ಈಡೇರಿಸುವ ಮೂಲಕ ಮತ್ತೊಮ್ಮೆ ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡಲು ಮುಂದಾಗಿದೆಯೇ ಎಂದು ಹೇಳುತ್ತಿದ್ದಾರೆ.

click me!