Bengaluru: ಆ.4ರಿಂದ ಫಲಪುಷ್ಪ ಪ್ರದರ್ಶನ-2023: ಕೆಂಗಲ್‌ ಹನುಮಂತಯ್ಯ, ವಿಧಾನಸೌಧದ ಪರಿಕಲ್ಪನೆ

Published : Aug 01, 2023, 04:47 PM IST
Bengaluru: ಆ.4ರಿಂದ ಫಲಪುಷ್ಪ ಪ್ರದರ್ಶನ-2023: ಕೆಂಗಲ್‌ ಹನುಮಂತಯ್ಯ, ವಿಧಾನಸೌಧದ ಪರಿಕಲ್ಪನೆ

ಸಾರಾಂಶ

ಬೆಂಗಳೂರಿನ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆಗಸ್ಟ್ 4 ರಿಂದ ಕೆಂಗಲ್‌ ಹನುಮಂತಯ್ಯ ಹಾಗೂ ವಿಧಾನಸೌಧ ಥೀಮ್‌ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ. 

ಬೆಂಗಳೂರು (ಆ.01): ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಫಲಪುಷ್ಪ ಪ್ರದರ್ಶನ -2023ಕ್ಕೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.4ರಿಂದ ಚಾಲನೆ ನೀಡಲಾಗುತ್ತದೆ. ಈ ಬಾರಿ ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಹಾಗೂ ವಿಧಾನಸೌಧ ಪರಿಕಲ್ಪನೆ ಒಳಗೊಂಡ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಾಗಿದೆ ಎಂದು ತೋಟಗಾರಿಕಾ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ತೋಟಗಾರಿಕಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 4 ರಿಂದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಇದು 214ನೇ ಫಲಪುಷ್ಪ ಪ್ರದರ್ಶನವಾಗಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ರವರ ಪರಿಕಲ್ಪನೆ ಆಧಾರದಲ್ಲಿ ಪ್ರದರ್ಶನ ಆಯೋಜಿಸಲಾಗುದೆ. ಆಗಸ್ಟ್ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಫ್ಲವರ್ ಶೋ ಗೆ ಚಾಲನೆ ನೀಡಲಿದ್ದಾರೆ. ಆಗಸ್ಟ್ 4 ರಿಂದ 15 ವರೆಗೆ ಒಟ್ಟು 12 ದಿನಗಳ ಕಾಲ ನಡೆಯಲಿರುವ ಫ್ಲವರ್ ಶೋ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕೆಆರ್‌ಎಸ್‌ ಡ್ಯಾಂ 35 ಟಿಎಂಸಿ ಭರ್ತಿ: ಬೆಂಗಳೂರಿಗೆ ಕಾವೇರಿ ಕುಡಿಯುವ ನೀರಿನ ಆತಂಕ ದೂರ

ಲಾಲ್‌ಬಾಗ್ 4 ಗೇಟ್‌ಗಳಲ್ಲಿಯೂ ಪ್ರವೇಶ: ಈ ಬಾರಿ ಫ್ಲವರ್ ಶೋಗೆ 2 ಕೋಟಿ ಅಧಿಕ ವೆಚ್ಚ‌ ಸಾಧ್ಯತೆಯಿದೆ. ಈ ಬಾರಿ‌ 10 ರಿಂದ 12 ಲಕ್ಷ ಜನರು ಬರಲಿದ್ದಾರೆ ಎಂದು ಅಂದಾಜಿಸಲಾಗಿದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳನ್ನು ಸಾರುವ ಕಾರ್ಯಕ್ರಮವಾಗಿ ಆಯೋಜನೆ ಮಾಡಲಾಗುತ್ತಿದೆ. ಮಕ್ಕಳಿಗೆ, ಮಹಿಳೆಯರಿಗೆ ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಮಾಡುತ್ತಿದ್ದೇವೆ. ಲಾಲ್‌ಬಾಗ್‌ ಸಸ್ಯೋದ್ಯಾನದ ಒಟ್ಟು 4 ಗೇಟ್‌ಗಳಲ್ಲಿ ಜನರಿಗೆ ಎಂಟ್ರಿ ನೀಡಲಾಗುತ್ತದೆ. ವಯಸ್ಕರಿಗೆ 70 ರೂ. ಹಾಗೂ ಮಕ್ಕಳಿಗೆ 30 ರೂ. ದರವನ್ನು ನಿಗದಿಪಡಿಸಲಾಗುತ್ತದೆ. ಎಂದಿನಂತೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುತ್ತದೆ ಎಂದರು. 

ನಂದಿನಿ ಬ್ರ್ಯಾಂಡ್‌ ರಾಯಭಾರಿಯಾಗಿ ಶಿವ ರಾಜ್‌ಕುಮಾರ್‌ ಆಯ್ಕೆ: ರಾಜ್‌ಕುಮಾರ್‌, ಪುನೀತ್‌ ಬಳಿಕ ಶಿವಣ್ಣ

17 ಲಕ್ಷ ಹೂವುಗಳ ಬಳಕೆ: ಮತ್ತೊಂದೆಡೆ ಫಲಪುಷ್ಪ ಪ್ರದರ್ಶನ-2023ಕ್ಕೆ ಭದ್ರತೆ ದೃಷ್ಟಿಯಿಂದ 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗುತ್ತಿದೆ. ಜೊತೆಗೆ, 300-400 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಘುತ್ತಿದೆ. ಒಟ್ಟು ಫ್ಲವರ್‌ ಶೋ ನಡೆಯುವ 12 ದಿನ ಕಾಲ‌ವೂ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಹೆಲ್ತ್ ಕ್ಯಾಂಪ್ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಾರಿ ಕೊಲ್ಕತ್ತ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ಹೂವುಗಳನ್ನು ತರಲಾಗುತ್ತದೆ. ಒಟ್ಟು 15 ರಿಂದ 17 ಲಕ್ಷ ಹೂಗಳನ್ನ ಬಳಸಿ ಫ್ಲವರ್ ಶೋ ಗೆ ತಯಾರಿ ಮಾಡಲಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!