
ಬೆಂಗಳೂರು (ಮೇ.12): ಕೆಲ ದಿನಗಳಿಂದ ಸುರಿದ ಮಳೆಯ ತಂಪಿನಲ್ಲಿ ಬೆಂಗಳೂರು ಜನರು ನಿಟ್ಟುಸಿರು ಬಿಟ್ಟಿದ್ದರ. ಬೇಸಿಗೆ ಆರಂಭದಿಂದ ಉರಿಬಿಸಿಲಿಗೆ ಹೈರಾಣಾಗಿದ್ದ ಜನರಿಗೆ ತಂಪಾಗಿತ್ತು. ಬೆಳಗ್ಗೆ ಗಾಳಿ, ಸಂಜೆ ತುಂತುರು ಮಳೆ… ಸಿಲಿಕಾನ್ ಸಿಟಿ ಜನರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿತ್ತು.
ಆದರೆ ಈಗ ನಗರದ ಚಿತ್ರಣವೇ ಬದಲಾಗಿದೆ. ಕಳೆದ ಹದಿನೈದು ದಿನಗಳಿಂದ ಸ್ವಲ್ಪ ಇಳಿಕೆಯಾಗಿದ್ದ ತಾಪಮಾನ ಮತ್ತೆ ಏರಿಕೆಯಾಗತೊಡಗಿದೆ. ಬೆಳಗ್ಗೆಯೇ ಉರಿ ಬಿಸಿಲು ಶುರುವಾಗುತ್ತಿದ್ದು, ಮಧ್ಯಾಹ್ನದ ಬಳಿಕ ರಸ್ತೆಗೆ ಇಳಿಯೋದಕ್ಕೂ ಜನ ಹಿಂದೇಟು ಹಾಕುವ ಸ್ಥಿತಿ ಬಂದಿದೆ.
ವಿಶೇಷವಾಗಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕುತ್ತಿರುವ ವಾಹನ ಸವಾರರ ಪರಿಸ್ಥಿತಿ ಹೇಳತೀರದು. ಸಿಗ್ನಲ್ ಬಳಿ ಕೆಲ ನಿಮಿಷ ನಿಂತರೂ ಬೆವರು ಸುರಿಯುವಷ್ಟು ಬಿಸಿ ಹೆಚ್ಚಾಗಿದೆ. ಬೈಕ್ ಸವಾರರು ಹೆಲ್ಮೆಟ್ ಧರಿಸಿ ಒಳಗೆ ಉಸಿರುಗಟ್ಟುವ ಅನುಭವವಾಗುತ್ತಿದೆ. ಹೆಲ್ಮೆಟ್ ತೆಗೆದರೆ ದಂಡದ ಭಯ, ಹಾಗೆ ಹಾಕಿಕೊಂಡರೆ ಬಿಸಿಲಿನ ಝಳಕ್ಕೆ ತಲೆಯೇ ಫ್ರೈ ಆದಂತ ಅನುಭವದ ಬಗ್ಗೆ ಸವಾರರು ಹೇಳುತ್ತಿರುವುದು ತಮಾಷೆಯಲ್ಲ.
ನಗರದಲ್ಲಿ ಸದ್ಯ ಯಾವುದೇ ರೀತಿಯ ಮಳೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಮುಂದಿನ ಎರಡು ದಿನಗಳು ಇದೇ ಬಿಸಿ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ 34.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 23.4 ಡಿಗ್ರಿ ಉಷ್ಣಾಂಶ ದಾಖಲಾಗಿದೆ.
ಇನ್ನೂ KIAL ಪ್ರದೇಶದಲ್ಲಿ ಗರಿಷ್ಠ 34.7 ಡಿಗ್ರಿ ಹಾಗೂ 22.7 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೆಚ್‌ಎಎಲ್ ಏರ್ಪೋರ್ಟ್ ಭಾಗದಲ್ಲಿ ಗರಿಷ್ಠ 34.9 ಡಿಗ್ರಿ ಹಾಗೂ 22 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ನಗರದಲ್ಲೇ ಹೆಚ್ಚು ಬಿಸಿಯ ಪ್ರದೇಶಗಳ ಪಟ್ಟಿಗೆ ಸೇರಿದೆ.
ಮುಂದಿನ 48 ಗಂಟೆಗಳ ಕಾಲ ಇದೇ ರೀತಿಯ ಬಿಸಿ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ