ಬೆಂಗಳೂರಿನಲ್ಲಿ ಇಂದಿನಿಂದ ಆ.23ರವರೆಗೆ (ಐದು ದಿನಗಳು) ಭಾರಿ ಮಳೆಯಾಗಲಿದೆ. ನಾಳೆ ಭರ್ಜರಿ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು (ಆ.19): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಆ.23ರವರೆಗೆ (ಐದು ದಿನಗಳು) ಭಾರಿ ಮಳೆಯಾಗಲಿದೆ. ನಾಳೆ ಭರ್ಜರಿ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಾದ್ಯಂತ ಇಂದು ಸಂಜೆಯಿಂದಲೇ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದ ವರೆಗೆ 1.5 ಮತ್ತು 1.8 ಕಿ.ಮೀ. ಟ್ರಫ್ ಇರಲಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಜೊತೆಗೆ ಬೆಂಗಳೂರಿನಲ್ಲಿಯೂ ಭಾರಿ ಮಳೆ ಮುನ್ಸೂಚನೆಯಿದೆ. ಮುಖ್ಯವಾಗಿ ಆ. 19 ಮತ್ತು ಆ.20 ರಂದು ಕರಾವಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
undefined
ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!
ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿಯೂ ಆಗಸ್ಟ್ 19 ರಿಂದ 23 ರ ವರೆಗೆ ಮಳೆ ಸಾಧ್ಯತೆ ಭಾರೀ ಮಳೆ ಸಾಧ್ಯತೆಯಿದೆ. ಈ ಉತ್ತರ ಒಳನಾಡಿದ ಜಿಲ್ಲೆಗಳಿಗೆ ಆಗಸ್ಟ್ 19ರಂದು ಸಂಜೆ ವೇಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಈ ಐದು ದಿನಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.