ಮೆಜೆಸ್ಟಿಕ್ ಹತ್ತಿರಕ್ಕೆ ಹೈಕೋರ್ಟ್ ಶಿಫ್ಟ್; ದೊಡ್ಡ ಜಾಗದಲ್ಲಿರುವ ರೇಸ್ ಕೋರ್ಸ್ ಹೊರವಲಯಕ್ಕೆ ಕಿಕ್ ಔಟ್!

Published : Oct 26, 2025, 04:42 PM IST
High Court Shift to Race Cource Court

ಸಾರಾಂಶ

ಹೈಕೋರ್ಟ್ ಸ್ಥಳಾಂತರಕ್ಕೆ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಬ್ಬನ್ ಪಾರ್ಕ್ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ, ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಘೋಷಿಸಿದರು.

ಬೆಂಗಳೂರು (ಅ.26): ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಕಾರ್ಯಕ್ರಮಕ್ಕೆ ಹೋದ ಸಂದರ್ಭದಲ್ಲಿ ಹೈಕೋರ್ಟ್ ಸ್ಥಳಾಂತರಕ್ಕೆ 15-20 ಎಕರೆ ಜಾಗ ನೀಡಿ ಎಂದು ವಕೀಲರು, ಮುಖ್ಯ ನ್ಯಾಯಮೂರ್ತಿಗಳು ಮನವಿ ಮಾಡಿದ್ದರು. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳಲು ತಿಳಿಸಿದರು. ಈ ಬಗ್ಗೆ ಸರ್ಕಾರದ ಮುಂದೆ ಚರ್ಚೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಬ್ಬನ್ ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಕಾರ್ಯಕ್ರಮಕ್ಕೆ ಹೋದ ಸಂದರ್ಭದಲ್ಲಿ ಹೈಕೋರ್ಟ್ ಸ್ಥಳಾಂತರಕ್ಕೆ 15-20 ಎಕರೆ ಜಾಗ ನೀಡಿ ಎಂದು ವಕೀಲರು, ಮುಖ್ಯ ನ್ಯಾಯಮೂರ್ತಿಗಳು ಮನವಿ ಮಾಡಿದ್ದರು. ಸರ್ಕಾರದ ಮುಂದೆಯೂ ಇದರ ಬಗ್ಗೆ ಚರ್ಚೆ ನಡೆಸಲಾಗುವುದು. ನ್ಯಾಯಾಲಯದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹತ್ತಿರದಲ್ಲಿ ಎಲ್ಲಿ ಸ್ಥಳಾವಕಾಶ ದೊರೆಯಬಹುದು ಎಂದು ಪರಿಶೀಲನೆ ಮಾಡಲಾಗುವುದು. ಹಳೆಯ ಐತಿಹಾಸಿಕ ಕಟ್ಟಡವಾದ ಕಾರಣಕ್ಕೆ ಅದನ್ನು ಏನೂ ಮಾಡಲು ಸಾಧ್ಯವಿಲ್ಲ. ಆದರೆ ಸ್ಥಳವಾಕಾಶ ಚಿಕ್ಕದಿದೆ ಎಂದರು.

ಹೈಕೋರ್ಟ್ ನಿರ್ಮಾಣಕ್ಕೆ ರೇಸ್‌ಕೋರ್ಸ್ ಬಳಸಿಕೊಳ್ಳಲು ಆಲೋಚನೆ:

ಆದರೆ, ಹೈಕೋರ್ಟ್ ಅನ್ನು ನಗರದ ಹೊರಗೆ ಸ್ಥಾಪಿಸಲು ಸಾಧ್ಯವಿಲ್ಲ. ಅದಕ್ಕೆ ಸೂಕ್ತ ಸ್ಥಳಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಕ್ಷಿದಾರರು, ಲಾಯರ್ ಗಳಿಗೆ ಅನುಕೂಲವಾಗುವಂತಹ ಸ್ಥಳ ನೋಡಬೇಕಿದೆ. ಒಂದಷ್ಟು ಜನ ವಕೀಲರು ಭೇಟಿ ಮಾಡಿ ರೇಸ್ ಕೋರ್ಸ್ ಜಾಗ ಬಳಸಿಕೊಳ್ಳುವ ಬಗ್ಗೆ ತಿಳಿಸಿದರು. ಒಂದಷ್ಟು ಕಾನೂನಾತ್ಮಕ ತೊಡಕುಗಳು ಇರುವ ಕಾರಣಕ್ಕೆ ಆನಂತರ ಅದರ ಬಗ್ಗೆ ಆಲೋಚನೆ ಮಾಡೋಣ ಎಂದು ತಿಳಿಸಿದ್ದೇನೆ ಎಂದರು.

ಕಬ್ಬನ್ ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಬ್ಬನ್ ಉದ್ಯಾನವನದ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಅವರ ಮನವಿಯಂತೆ ಮಿಕ್ಕ ಅನುದಾನವನ್ನು ತೋಟಗಾರಿಕೆ ಇಲಾಖೆಯಿಂದ ನೀಡುವಂತೆ ವ್ಯವಸ್ಥೆ ಮಾಡಲಾಗುವುದು. ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಈ ಉದ್ಯಾನದ ಆವರಣದಲ್ಲಿ ಯಾವುದೇ ರೀತಿಯ ನಿರ್ಮಾಣ ಕೆಲಸಗಳಿಗೆ ಸರ್ಕಾರ ಆಸ್ಪದ ನೀಡುವುದಿಲ್ಲ. ಇವುಗಳ ರಕ್ಷಣೆಗೆ ಏನು ಕೆಲಸ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.

ನನ್ ಹೆಂಡ್ತಿಯನ್ನು ಕಬ್ಬನ್ ಪಾರ್ಕ್‌ಗೆ ಕರ್ಕೊಂಡು ಬಂದಿದ್ದೆ:

ಉದ್ಯಾನದಲ್ಲಿ ಸರ್ಕಾರದ ವತಿಯಿಂದಲೇ ಒಂದಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಆಲೋಚನೆ ಮಾಡಲಾಗುವುದು. ನಾನು ನೋಡಿದಂತೆ ಕಬ್ಬನ್ ಪಾರ್ಕ್ ಅನ್ನು ಅತ್ಯುತ್ತಮವಾಗಿ ನಿರ್ವಹಣೆ ಮಾಡಲಾಗಿದೆ. ನಾನು ಮದುವೆಯಾದ ಹೊಸತರಲ್ಲಿ ನನ್ನ ಹೆಂಡತಿಯನ್ನ ಕಬ್ಬನ್‌ ಪಾರ್ಕ್ ತೋರಿಸಲು ಕರೆದುಕೊಂಡು ಬಂದಿದ್ದೆ. ವಿದ್ಯಾರ್ಥಿ ನಾಯಕನಾಗಿದ್ದಾಗಲೂ ಇಲ್ಲಿಗೆ ಬಂದು ಸಮಯ ಕಳೆಯುತ್ತಿದ್ದೆವು. ಅರಣ್ಯ ಇಲಾಖೆಯ ಜೊತೆ ಚರ್ಚೆ ಮಾಡಿ ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳಲ್ಲಿ ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ಮಾದರಿಯಲ್ಲಿ ಉದ್ಯಾನಗಳ ಅಭಿವೃದ್ಧಿ ಮಾಡಿ, 'ಟ್ರೀ ಪಾರ್ಕ್' ಸ್ಥಾಪಿಸುವ ನಿರ್ಧಾರ ಮಾಡಲಾಗಿದೆ. ಇಲ್ಲಿ ಯಾವುದೇ ಮರಗಳನ್ನು ಕಡಿಯುವುದಿಲ್ಲ. ಇದರಿಂದ ಕಾಡಿನ ಸಂರಕ್ಷಣೆಯೂ ಆದಂತೆ ಆಗುತ್ತದೆ. ಲಾಲ್ ಬಾಗ್ ಅಭಿವೃದ್ಧಿಗೆ ಈಗಾಗಲೇ 10 ಕೋಟಿ ರೂಪಾಯಿ ಘೋಷಣೆ ಮಾಡಿದ್ದೇನೆ ಎಂದರು.

ಕಬ್ಬನ್ ಪಾರ್ಕ್ ಒಳಗೆ ಹೈಟೆಕ್ ಪಾರ್ಕ್:

ಈ ಮೊದಲು ಎಲ್ಲಾ ಹೋರಾಟಗಳು, ಪ್ರತಿಭಟನೆಗಳು ಕಬ್ಬನ್ ಪಾರ್ಕ್ ಅಲ್ಲಿಯೇ ನಡೆಯುತ್ತಿತ್ತು. ಎಸ್.ಎಂ.ಕೃಷ್ಣ ಕಾಲದಲ್ಲಿ ಇದನ್ನು ಸ್ವಾತಂತ್ರ್ಯ ಉದ್ಯಾನಕ್ಕೆ ಸ್ಥಳಾಂತರ ಮಾಡಲಾಯಿತು. ನಗರದ ಶ್ವಾಸಕೋಶದಂತೆ ಇರುವ ಈ ಉದ್ಯಾನ ಉಳಿಸಿಕೊಳ್ಳಲು ಏನು ಮಾಡಬೇಕೊ ಅದನ್ನು ನಾನು ಮಾಡುತ್ತೇನೆ. ಎಷ್ಟು ಗಂಟೆಗೆ ಯಾರು ಒಳ ಬಂದರು ಹೊರ ಹೋದರು ಎಂಬುದನ್ನು ದಾಖಲು ಮಾಡಲು ಕಬ್ಬನ್ ಪಾರ್ಕ್ ನಲ್ಲಿ ಹೈಟೆಕ್ ಕ್ಯಾಮೆರಾ ಗಳನ್ನು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!