ಬೆಂಗಳೂರು ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್: ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಲಂಚ ಪಡೆಯುತ್ತಿದ್ದ ಖಾಕಿಪಡೆ!

Published : Mar 30, 2026, 03:53 PM IST
Bengaluru Traffic Police

ಸಾರಾಂಶ

ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಹೆಸರಿನಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಮತ್ತು ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಹೈಗ್ರೌಂಡ್ಸ್ ಸಂಚಾರಿ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಬೆಂಗಳೂರು (ಮಾ.30): ಸಿಲಿಕಾನ್ ಸಿಟಿಯಲ್ಲಿ ಸಂಚಾರಿ ನಿಯಮಗಳ ಹೆಸರಿನಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತ್ತುಗೊಳಿಸಲಾಗಿದೆ.

ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ (DCP Traffic West) ಅನೂಪ್ ಶೆಟ್ಟಿ ಈ ಅಮಾನತ್ತು ಆದೇಶ ಹೊರಡಿಸಿದ್ದಾರೆ. ಅಮಾನತ್ತಾದವರಲ್ಲಿ ಹೈಗ್ರೌಂಡ್ಸ್ ಸಂಚಾರಿ ಠಾಣೆಯ ಎಎಸ್‌ಐ (ASI) ಸುರೇಶ್, ಕಾನ್ಸ್‌ಟೇಬಲ್‌ಗಳಾದ ಪ್ರಶಾಂತ್ ಹಾಗೂ ಸಾದಿಕ್ ಸೇರಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರಿನ ಪ್ರಮುಖ ವೃತ್ತಗಳಲ್ಲಿ ಒಂದಾದ ಚಾಲುಕ್ಯ ಸರ್ಕಲ್ ಸುತ್ತಮುತ್ತ ಕರ್ತವ್ಯ ನಿರ್ವಹಿಸುವಾಗ ಈ ಸಿಬ್ಬಂದಿಗಳು ವಾಹನ ಸವಾರರಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದರು ಎಂಬ ದೂರುಗಳು ಕೇಳಿ ಬಂದಿದ್ದವು. ಮುಖ್ಯವಾಗಿ, ಸಂಚಾರಿ ಪೊಲೀಸರು ಕರ್ತವ್ಯದ ವೇಳೆ ಕಡ್ಡಾಯವಾಗಿ ಧರಿಸಬೇಕಾದ 'ಬಾಡಿವಾರ್ನ್ ಕ್ಯಾಮೆರಾ'ಗಳನ್ನು (Body-Worn Cameras) ಉದ್ದೇಶಪೂರ್ವಕವಾಗಿ ಆಫ್ ಮಾಡಿ, ನಿಯಮ ಉಲ್ಲಂಘಿಸಿದ ಸವಾರರಿಂದ ಲಂಚ ಪಡೆಯುತ್ತಿದ್ದರು ಎಂಬ ಗಂಭೀರ ಆರೋಪ ಎದುರಿಸುತ್ತಿದ್ದರು.

ಸಾರ್ವಜನಿಕರ ದೂರು ಮತ್ತು ಇಲಾಖಾ ತನಿಖೆ:

ವಾಹನಗಳನ್ನು ತಡೆದು ಹಣ ವಸೂಲಿ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆಯು ಆಂತರಿಕ ತನಿಖೆ ನಡೆಸಿತ್ತು. ತನಿಖೆಯ ವೇಳೆ ಈ ಮೂವರು ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿರುವುದು ಮತ್ತು ಲಂಚ ಪಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಶಿಸ್ತು ಕ್ರಮವಾಗಿ ಮೂವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಡಿಸಿಪಿ ಅನೂಪ್ ಶೆಟ್ಟಿ ಆದೇಶಿಸಿದ್ದಾರೆ.

ಹಳೆಯ ಚಾಳಿ ಮುಂದುವರಿಸಿದ ಕಾನ್ಸ್‌ಟೇಬಲ್ ಸಾದಿಕ್:

ಅಮಾನತ್ತಾದವರ ಪೈಕಿ ಕಾನ್ಸ್‌ಟೇಬಲ್ ಸಾದಿಕ್ ಎಂಬಾತ ಈ ಹಿಂದೆಯೂ ಇಂತಹದ್ದೇ ಪ್ರಕರಣದಲ್ಲಿ ಸಿಲುಕಿದ್ದ ಎನ್ನಲಾಗಿದೆ. ಈತ ಈ ಹಿಂದೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಸಸ್ಪೆಂಡ್ ಆಗಿದ್ದ. ಅಲ್ಲಿಂದ ಹೈಗ್ರೌಂಡ್ಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರೂ ತನ್ನ ಹಳೆಯ ಬುದ್ಧಿಯನ್ನು ಬಿಡದೆ ಲಂಚದ ಆಸೆಗೆ ಬಿದ್ದಿದ್ದ ಎಂದು ತಿಳಿದುಬಂದಿದೆ.

ಪೊಲೀಸ್ ಇಲಾಖೆಯ ಕಠಿಣ ಸಂದೇಶ:

ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆಯು ಪಾರದರ್ಶಕತೆಗಾಗಿ ಬಾಡಿವಾರ್ನ್ ಕ್ಯಾಮೆರಾಗಳನ್ನು ನೀಡಿದೆ. ಆದರೆ ಅದನ್ನು ಆಫ್ ಮಾಡಿ ಹಣ ವಸೂಲಿಗೆ ಇಳಿಯುವ ಭ್ರಷ್ಟ ಸಿಬ್ಬಂದಿಗಳಿಗೆ ಈ ಅಮಾನತ್ತು ಕ್ರಮವು ಒಂದು ಎಚ್ಚರಿಕೆಯ ಸಂದೇಶವಾಗಿದೆ. 'ಯಾವುದೇ ಸಿಬ್ಬಂದಿ ಲಂಚ ಅಥವಾ ಕಿರುಕುಳ ನೀಡುತ್ತಿದ್ದರೆ ಸಾರ್ವಜನಿಕರು ದೂರು ನೀಡಬಹುದು' ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸರ್ಕಾರಿ ಕೆಲಸ ಮುಗಿಸಿ ಮನೆಗೆ ಬಂದ ಮಗಳು ಹೆಣವಾದಳು: ಕೂಸಿನ ಹಾಲ್ದುಟಿ ಆರುವ ಮುನ್ನ ಅಮ್ಮನ ಪ್ರಾಣಪಕ್ಷಿ ಹಾರಿಹೋಯ್ತು!
ಬೋನಿಗೆ ಬಿದ್ದ ಹೆಣ್ಣು ಹುಲಿ ಜೊತೆ ಸೆಲ್ಫಿಗೆ ಮುಗಿಬಿದ್ದ ಗಂಡುಗಲಿಗಳು