ಬೆಂಗಳೂರು ಕೆ.ಜಿ.ಹಳ್ಳಿ-ಡಿಜೆ.ಹಳ್ಳಿ ಗಲಭೆ: ತಪ್ಪೊಪ್ಪಿಕೊಂಡ ಮೂವರಿಗೆ ಎನ್ಐಎ ಕೋರ್ಟ್ 7 ವರ್ಷ ಜೈಲು ಶಿಕ್ಷೆ

Published : Jul 23, 2025, 06:59 PM IST
Bengaluru DJ Halli KG Halli Riots

ಸಾರಾಂಶ

2020ರ ಕೆ.ಜಿ.ಹಳ್ಳಿ ಮತ್ತು ಡಿಜೆ.ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ತಪ್ಪು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಎನ್ಐಎ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

ಬೆಂಗಳೂರು (ಜು.23): ಬೆಂಗಳೂರಿನ ಕೆ.ಜಿ.ಹಳ್ಳಿ ಮತ್ತು ಡಿಜೆ.ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿದ 2020ರ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯವು 7 ವರ್ಷಗಳ ಕಾಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದೆ.

ಶಿಕ್ಷೆಗೆ ಗುರಿಯಾದವರು ಯಾರು?

  • ತಪ್ಪು ಒಪ್ಪಿಕೊಂಡ 3 ಆರೋಪಿಗಳು:
  • ಎ14 - ಇಕ್ರಮುದ್ದೀನ್ ಸೈಯದ್ ನವೀದ್
  • ಎ16 - ಸೈಯದ್ ಆಸಿಫ್
  • ಎ18 - ಮೊಹಮ್ಮದ್ ಅತೀಫ್

ಈ ಮೂವರು ಆರೋಪಿಗಳು ಕೋರ್ಟ್ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ, ಎನ್ಐಎ ವಿಶೇಷ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಈ ಪ್ರಕರಣದ ವಿಚಾರಣೆಯಲ್ಲಿ ಎನ್ಐಎ ಪರವಾಗಿ ಹಿರಿಯ ಸರ್ಕಾರಿ ವಕೀಲರಾದ ಪ್ರಸನ್ನ ಕುಮಾರ್ ವಾದಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 138 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಇವರಲ್ಲಿ ಮೊದಲಿಗೆ ಈ 3 ಮಂದಿ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆ.

ಪ್ರಕರಣದ ಹಿನ್ನಲೆ:

2020ರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾದ ಎಂಬ ಕಾರಣ ನೀಡಿ ಹಲವಾರು ಜನರು ಕೆ.ಜಿ.ಹಳ್ಳಿ ಮತ್ತು ಡಿಜೆ.ಹಳ್ಳಿ ಪೊಲೀಸ್ ಠಾಣೆಗಳಿಗೆ ನುಗ್ಗಿ ಬೆಂಕಿ ಹಚ್ಚಿದ್ದರು. ಈ ವೇಳೆ ಸಾರ್ವಜನಿಕ ಆಸ್ತಿ, ವಾಹನಗಳು ಮತ್ತು ದಾಖಲೆಗಳಿಗೆ ಭಾರಿ ಹಾನಿಯುಂಟಾಗಿತ್ತು. ಈ ಪ್ರಕರಣವನ್ನು ನಿಭಾಯಿಸಲು ಕೇಂದ್ರ ಸರ್ಕಾರವು ಎನ್ಐಎಗೆ ಪ್ರಕರಣ ಹಸ್ತಾಂತರಿಸಿತ್ತು. ಇನ್ನೂ 135ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ವಿಚಾರಣೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತೀರ್ಪುಗಳು ಹೊರಬರುವ ನಿರೀಕ್ಷೆಯಲ್ಲಿವೆ. ತಪ್ಪು ಒಪ್ಪಿಕೊಂಡಿರುವ ಆರೋಪಿಗಳಿಗೆ ಈಗ ಶಿಕ್ಷೆ ವಿಧಿಸಿದ್ದು, ಇದರಲ್ಲಿ ಭಾಗಿಯಾದ ಆರೋಪಿಗಳಿಗೆ ಶಿಕ್ಷೆ ಖಚಿತ ಎಂಬ ಸಂದೇಶವನ್ನು ನ್ಯಾಯಾಲಯ ರವಾನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌