Kogilu layout eviction case: ಸರ್ಕಾರ ಮನೆ ಕೊಟ್ಟರೂ ಸ್ಥಳ ಬಿಡದ ಕೋಗಿಲು ನಿವಾಸಿಗಳು!ಅಧಿಕಾರಿಗಳಿಗೆ ಹೊಸ ತಲೆನೋವು

Kannadaprabha News   | Kannada Prabha
Published : Jun 11, 2026, 10:05 AM IST
bengaluru Kogilu Layout

ಸಾರಾಂಶ

ಬೆಂಗಳೂರಿನ ಕೋಗಿಲು ಬಡಾವಣೆಯ ಅಕ್ರಮ ಮನೆ ತೆರವು ಪ್ರಕರಣದಲ್ಲಿ, ಸಂತ್ರಸ್ತರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಿದರೂ ಅವರು ಸ್ಥಳಾಂತರಗೊಳ್ಳಲು ನಿರಾಕರಿಸುತ್ತಿದ್ದಾರೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಂಗಳೂರು (ಜೂ.11) : ಬೆಂಗಳೂರಿನ ಕೋಗಿಲು ಬಡಾವಣೆ(Kogilu layout)ಯಲ್ಲಿನ ಅಕ್ರಮ ಮನೆಗಳ ತೆರವು ‌ಪ್ರಕರಣದ‌ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿದ್ದರೂ ಅವರು ಸ್ಥಳವನ್ನು ಬಿಟ್ಟು ಬೇರಡೆ ಹೋಗಲು ಸಿದ್ಧರಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ

ಮನೆಗಳ ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂಬುದಾಗಿ ಘೋಷಿಸುವಂತೆ ಕೋರಿ ಕೋಗಿಲು ಬಡಾವಣೆ ನಿವಾಸಿಗಳಾದ ಜೈಬಾ ತಬಸ್ಸುಮ್, ರೆಹನಾ ಮತ್ತು ಆರೀಫ್ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ,ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

100 ಮಂದಿಯನ್ನು ಇಡಲು ಅವಕಾಶವಿಲ್ಲ

ಈ ವೇಳೆ ಅರ್ಜಿದಾರರ ಪರ ವಕೀಲರು, ಸರ್ಕಾರದ ಪುನರ್ವಸತಿ ಕೇಂದ್ರದಲ್ಲಿ 100 ಮಂದಿಯನ್ನು ಇಡಲು ಅವಕಾಶವಿಲ್ಲ. ಕೇಂದ್ರ ಕೋಗಿಲು ಲೇಔಟ್‌ ಸಮೀಪದಲ್ಲಿ ಇಲ್ಲ. ಅಲ್ಲಿ ಅಗತ್ಯವಾದಷ್ಟು ಶೌಚಾಲಯ ಮತ್ತು ಸೂಕ್ತ ಉಪಚಾರದ ವ್ಯವಸ್ಥೆಯಿಲ್ಲ‌ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅದಕ್ಕೆ ಒಪ್ಪದ ನ್ಯಾಯಪೀಠ, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿದ್ದರೂ ಅದನ್ನು ಅವರು ಬಳಕೆ ಮಾಡುತ್ತಿಲ್ಲ ಎಂಬುದು‌ ಸರ್ಕಾರ ಸಲ್ಲಿಸಿರುವ ಫೋಟೋಗಳಿಂದ ತಿಳಿಯಲಿದೆ. ಸಂತ್ರಸ್ತರಿಗೆ ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ನ್ಯಾಯಾಲಯ ನೇಮ‌ಕ‌ ಮಾಡಿರುವ ಅಮಿಕಸ್‌ ಕ್ಯೂರಿ (ಕೋರ್ಟಗ ಸಹಾಯಕರು) ಅವರ ಗಮನಕ್ಕೆ ತರಬಹುದು. ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.

ಆಗ ರಾಜ್ಯ ಸರ್ಕಾರ ಪರ ವಕೀಲರು, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಆದರೆ, ಅವರು ಸ್ಥಳವನ್ನು ಬಿಟ್ಟು ಕದಲು ಸಿದ್ಧರಿಲ್ಲ. ಪುನರ್ವಸತಿ ಕೇಂದ್ರಕ್ಕೆ ಹೋದರೆ ಕೋಗಿಲು ಬಡಾವಣೆಯಲ್ಲಿ ನಿವೇಶನಗಳು ಇಲ್ಲದಾಗುತ್ತವೆ ಎಂಬ ಆತಂಕ ಅವರದ್ದಾಗಿದೆ ಎಂದರು. ಅರ್ಜಿದಾರರ ಪರ ವಕೀಲರು, ಸಂತ್ರಸ್ತರಿಗೆ ಕರ್ನಾಟಕ ಭೂಕಂದಾಯ ಕಾಯ್ದೆಯಡಿ ನಿವೇಶನ ಹಂಚಿಕೆ ಮಾಡಲಾಗಿದೆ. ಅದಕ್ಕೆ ದಾಖಲೆ ಇದೆ ಎಂದು ತಿಳಿಸಿದರು. ಅಂತಿಮವಾಗಿ ಪೀಠ, ವಿಚಾರಣೆಯನ್ನು ಜುಲೈ 13ಕ್ಕೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ
Karnataka News Live: Kogilu layout eviction case - ಸರ್ಕಾರ ಮನೆ ಕೊಟ್ಟರೂ ಸ್ಥಳ ಬಿಡದ ಕೋಗಿಲು ನಿವಾಸಿಗಳು!ಅಧಿಕಾರಿಗಳಿಗೆ ಹೊಸ ತಲೆನೋವು