Bengaluru: ನಾಳೆಯಿಂದ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ಆರಂಭ: ಸಂಚಾರ ಮಾರ್ಗ, ವಾಹನ ನಿಲುಗಡೆಯಲ್ಲಿ ಬದಲಾವಣೆ

By Sathish Kumar KHFirst Published Aug 3, 2023, 3:23 PM IST
Highlights

ಬೆಂಗಳೂರಿನ ಲಾಲ್‌ಬಾಗ್‌ ಉದ್ಯಾನದಲ್ಲಿ ನಾಳೆಯಿಂದ (ಆ.4ರ ಶುಕ್ರವಾರ) ಆರಂಭವಾಗಲಿದ್ದು, ಇದರಿಂದಾಗಿ ವಾಹನ ಸಂಚಾರ ಮಾರ್ಗಗಳು ಹಾಗೂ ವಾಹನ ನಿಲುಗಡೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಬೆಂಗಳೂರು (ಆ.03) ರಾಜ್ಯದ ರಾಜಧಾನಿ ಬೆಂಗಳೂರಿನ ಲಾಲ್‌ಬಾಗ್‌ ಉದ್ಯಾನದಲ್ಲಿ ನಾಳೆಯಿಂದ (ಆ.4ರ ಶುಕ್ರವಾರ) ಆರಂಭವಾಗಲಿದ್ದು, ಇದರಿಂದಾಗಿ ವಾಹನ ಸಂಚಾರ ಮಾರ್ಗಗಳು ಹಾಗೂ ವಾಹನ ನಿಲುಗಡೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ ನೋಡಿ.. 

ರಾಜ್ಯ ರಾಜಧಾನಿಯಲ್ಲಿ ಟ್ರಾಫಿಕ್‌ ನಡುವೆ ಸಂಚಾರ ಮಾಡುವುದು ಕಷ್ಟಕಷ್ಟ. ಅದರಲ್ಲಿಯೂ ಯಾವುದಾದರೂ ಒಂದೆರಡು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದಲ್ಲಿ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ಮಾಡುವುದಕ್ಕೆ ಹರಸಾಹಸ ಮಾಡಬೇಕಾಗುತ್ತದೆ. ಆದ್ದರಿಂದ ವಾಹನ ಸವಾರರಿಗೆ ಸಮಸ್ಸಯೆ ಆಗಬಾರದು ಎನ್ನುವ ದೃಷ್ಟಿಕೋನದಿಂದ ಬೆಂಗಳೂರು ನಗರ ಸಂಚಾರಿ ಪೊಲೀಸರು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂದು ಮಾರ್ಗ ಬದಲಾವಣೆ ಮಾಡಿರುತ್ತಾರೆ. ಇನ್ನು ರಸ್ತೆ ಬದಿಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಿ ಕೆಲವು ಸ್ಥಳಗಳನ್ನು ಗುರುತಿಸಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುತ್ತಾರೆ. ಅದೇ ರೀತಿ, ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 4 ರಿಂದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. 

Latest Videos

ಬೆಂಗಳೂರು- ಹೊಸೂರು ಮೆಟ್ರೋ ಮಾರ್ಗಕ್ಕೆ ಕನ್ನಡಿಗರ ವಿರೋಧ: ತಮಿಳರ ಸಂಖ್ಯೆ ಜಾಸ್ತಿಯಾಗ್ತಿದೆ ಎಂದು ಕರವೇ ಆಕ್ರೋಶ

10 ಲಕ್ಷಕ್ಕೂ ಅಧಿಕ ಜನರು ಬರುವ ನಿರೀಕ್ಷೆ: ಫಲಪುಷ್ಪ ಪ್ರದರ್ಶನದ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರಿಂದ ವಿಶೇಷ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆ ವ್ಯವಸ್ಥೆ ಬಳಸಲು ಮನವಿ ಮಾಡಿದ್ದಾರೆ. ಪ್ರದರ್ಶನಕ್ಕೆ ಬರುವ ಪ್ರವಾಸಿಗರಿಗೆ ಪರ್ಯಾಯ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಆಗಸ್ಟ್ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಪ್ರದರ್ಶನ ವೀಕ್ಷಣೆಗೆ ಆಗಮಿಸಲಿರುವ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡಾ.ಮರೀಗೌಡ ರಸ್ತೆ, ಲಾಲ್‌ ಬಾಗ್ ರಸ್ತೆ, ಕೆ.ಹೆಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆಗಳಾದ ಬಿಎಂಟಿಸಿ ಬಸ್‌, ಮೆಟ್ರೋ ಹಾಗೂ ಕ್ಯಾಬ್‌ಗಳನ್ನು ಬಳಸಲು ಮನವಿ ಮಾಡಿದ್ದಾರೆ.

  • ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು 
  • 1. ಡಾ.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ
  • 2.ಕೆ.ಹೆಚ್.ರಸ್ತೆ,ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡ
  • 3.ಡಾ.ಮರಿಗೌಡ ರಸ್ತೆ- ಹಾಪ್ ಕಾಮ್ಸ್ ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ
  • 4. ಜೆ.ಸಿ. ರಸ್ತೆ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ

Bengaluru City Police: ಸೈಬರ್‌ ವಂಚಕನಿಂದ 3 ಲಕ್ಷಕ್ಕೆ ಕೈಯೊಡ್ಡಿ, ಕೇರಳ ಪೊಲೀಸರಿಗೆ ಸಿಕ್ಕಿಬಿದ್ದರು

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು 
1. ಡಾ. ಮರಿಗೌಡ ರಸ್ತೆ,ಲಾಲ್ ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ 
2. ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
3. ಲಾಲ್‌ ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ ಬಾಗ್ ಮುಖ್ಯದ್ವಾರದ ವರೆಗೆ
4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ
5. ಬಿ.ಎಂ.ಟಿ.ಸಿ ರಸ್ತೆಯಲ್ಲಿ, ರಸ್ತೆಯ ಎರಡೂ ಬದಿಗಳಲ್ಲಿ,
6.ಲಾಲ್ ಬಾಗ್ ವೆಸ್ಟಿಗೇಟ್‌ನಿಂದ ಆರ್.ವಿ. ಟೀಚರ್ ಕಾಲೇಜ್‌ವರೆಗೆ 
7.ಆರ್ ವಿ ಟೀಚರ್ ಕಾಲೇಜ್‌ನಿಂದ ಆಶೋಕ ಪಿಲ್ಲರ್ ವರೆಗೆ 
9.ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ ವರೆಗೆ

click me!