ರಾಜ್ಯದ ಹೊಸ ಡಿಜಿ-ಐಜಿಪಿಯಾಗಿ ಡಾ ಎಂ ಸಲೀಂ ಆಯ್ಕೆ ಸಾಧ್ಯತೆ!

Published : May 17, 2025, 11:44 AM IST
ರಾಜ್ಯದ ಹೊಸ ಡಿಜಿ-ಐಜಿಪಿಯಾಗಿ ಡಾ ಎಂ ಸಲೀಂ ಆಯ್ಕೆ ಸಾಧ್ಯತೆ!

ಸಾರಾಂಶ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಮುಕ್ತಾಯಕ್ಕೆ ಐದು ದಿನಗಳಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಸಲೀಂ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಮುಕ್ತಾಯಕ್ಕೆ ಐದು ದಿನಗಳಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಸಲೀಂ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಸೇವಾ ಹಿರಿತನ ಆಧಾರದ ಮೇರೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್‌, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ್ ಮೊಹಂತಿ ಸೇರಿ ಎಂಟು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿದ್ದಾರೆ. ಆದರೆ ಹಿರಿತನದ ಮಾನದಂಡದಲ್ಲಿ ಡಿಜಿಪಿ ಹುದ್ದೆಗೆ ಸಲೀಂ ಹಾಗೂ ಪ್ರಶಾಂತ್ ಹೆಸರು ಮುಂಚೂಣಿಯಲ್ಲಿದೆ.

ಈಗಾಗಲೇ ನೂತನ ಡಿಜಿ-ಐಜಿಪಿ ಆಯ್ಕೆ ಸಂಬಂಧ ಎಂಟು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ ಸರ್ಕಾರ ಶಿಫಾರಸು ಮಾಡಿದೆ. ಆದರೆ ಯುಪಿಎಸ್‌ಸಿಯಿಂದ ಒಪ್ಪಿಗೆ ಸಿಗದ ಕಾರಣಕ್ಕೆ ಮೊದಲ ಮೂರು ತಿಂಗಳು ಪ್ರಭಾರ ಡಿಜಿಪಿ ನೇಮಕವಾಗಲಿದೆ. ಯುಪಿಎಸ್‌ಸಿಯಿಂದ ಸಮ್ಮತಿ ಸಿಕ್ಕ ಬಳಿಕ ಅಧಿಕೃತವಾಗಿ ಡಿಜಿಪಿ ನೇಮಕ ಆಗಲಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ NHM ವೈದ್ಯಕೀಯ ಸಿಬ್ಬಂದಿ ವೇತನ ಹೆಚ್ಚಳ: ಹಳೆ ವೈದ್ಯರ ಕಿವಿಗೆ ಹೂವು ಇಟ್ಟ ಸರ್ಕಾರ!

ಏ.30 ರಂದು ಅಲೋಕ್‌ ಮೋಹನ್‌ ಅವರು ನಿವೃತ್ತಿಯಾಗಬೇಕಿತ್ತು. ಆದರೆ ಮೇ 21 ವರೆಗೆ ಡಿಜಿಪಿ ಅವರ ಸೇವಾವಧಿ ವಿಸ್ತರಿಸಿದ್ದ ಸರ್ಕಾರ, ಮುಂದಿನ ಡಿಜಿಪಿ ಹುದ್ದೆಗೆ ಸಂಭವನೀಯ ಅಧಿಕಾರಿಗಳ ಹೆಸರಿನ ಪಟ್ಟಿಯನ್ನು ಯುಪಿಎಸ್‌ಸಿಗೆ ಕಳುಹಿಸಿತ್ತು. ಹೀಗಾಗಿ ಎರಡು ವರ್ಷಗಳ ಆಡಳಿತ ನಡೆಸಿದ ಹಾಲಿ ಡಿಜಿಪಿ ಅಲೋಕ್ ಮೋಹನ್‌ ಅವರ ಸೇವಾವಧಿ ಪೂರ್ವ ನಿಗದಿಯಂತೆ ಮೇ.21 ರಂದು ಮುಕ್ತಾಯವಾಗಲಿದ್ದು, ಅಂದು ಸಂಜೆ ಅರಕ್ಷಕ ಪಡೆಯ ಹೊಸ ದಂಡನಾಯಕ ಆಯ್ಕೆ ನಡೆಯಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್