
ಬೆಂಗಳೂರು (ಜೂ.19): ನಗರದ ಪ್ರತಿಷ್ಠಿತ ಮಂತ್ರಿ ಮಾಲ್‌ನಲ್ಲಿ ದಿನವೂ ಸಾವಿರಾರು ಜನರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಸಾರ್ವಜನಿಕರ ಸುರಕ್ಷತೆ ಎಷ್ಟು ಗಂಭೀರ? ಮಲ್ಲೇಶ್ವರಂನ ಮಂತ್ರಿ ಮಾಲ್‌ನ ಲಿಫ್ಟ್‌ನಲ್ಲಿ ತಂದೆ-ಮಗಳು ಸಿಲುಕಿ ಪರದಾಡಿದ ಘಟನೆ ನಡೆದಿದೆ. ಈ ಆಘಾತಕಾರಿ ಘಟನೆ ಈ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.
ಆಗಿದ್ದೇನು?
ಮಾಲ್‌ಗೆ ಹೋಗಿದ್ದ ತಂದೆ ಮಗಳು ಲಿಫ್ಟ್ ಒಳಗೆ ಹೋಗಿದ್ದಾರೆ. ಈ ವೇಳೆ ಲಿಫ್ಟ್ ಅರ್ಧದಲ್ಲೇ ಕೈಕೊಟ್ಟಿದೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಅಪ್ಪ-ಮಗಳು ಲಿಫ್ಟ್‌ನಲ್ಲಿ ಲಾಕ್ ಆಗಿದ್ದು, ಆತಂಕಕ್ಕೆ ಒಳಗಾಗಿದ್ದಾರೆ. ಲಿಫ್ಟ್‌ನಲ್ಲಿರುವ ಎಮರ್ಜೆನ್ಸಿ ನಂಬರ್‌ಗಳಿಗೆ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಸೈರನ್ ಮೊಳಗಿಸಿದರೂ ಮಾಲ್‌ನ ಯಾವುದೇ ಸೆಕ್ಯೂರಿಟಿ ಸಿಬ್ಬಂದಿ ಸಹಾಯಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ. ಕೊನೆಗೆ, ಸಂತ್ರಸ್ತರು ತಮ್ಮ ಸ್ನೇಹಿತನಿಗೆ ಕರೆ ಮಾಡಿ ಸಹಾಯ ಕೇಳಿದ್ದಾರೆ. ಸ್ನೇಹಿತ ಮಾಲ್‌ಗೆ ಬಂದ ನಂತರವೇ ಮಾಲ್ ಸಿಬ್ಬಂದಿ ಲಿಫ್ಟ್‌ನ ಬಾಗಿಲು ತೆರೆಯಲು ಮುಂದಾದರು ಎಂದು ಆರೋಪಿಸಿದ್ದಾರೆ.
ಈ ಘಟನೆಯಿಂದ ಮಂತ್ರಿ ಮಾಲ್ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾವಿರಾರು ಜನರು ಭೇಟಿ ನೀಡುವ ಮಾಲ್‌ನಲ್ಲಿ ಇಂತಹ ಮೂಲಭೂತ ಸುರಕ್ಷತಾ ವ್ಯವಸ್ಥೆ ಇಲ್ಲದಿರುವುದು ಆತಂಕಕಾರಿ. ಲಿಫ್ಟ್‌ನ ಎಮರ್ಜೆನ್ಸಿ ವ್ಯವಸ್ಥೆ ಯಾಕೆ ಕೆಲಸ ಮಾಡಲಿಲ್ಲ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಇಷ್ಟೆಲ್ಲ ಆದ್ರೂ ಈ ಘಟನೆ ಕುರಿತು ಮಂತ್ರಿ ಮಾಲ್ ಆಡಳಿತ ಮಂಡಳಿಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಈಗಾಗಲೇ ತೆರಿಗೆ ಬಾಕಿ, ರೈತನಿಗೆ ಅವಮಾನ, ಮತ್ತು ಇತರ ವಿವಾದಗಳಿಂದ ಸುದ್ದಿಯಲ್ಲಿರುವ ಮಂತ್ರಿ ಮಾಲ್, ಈ ಘಟನೆಯಿಂದ ಮತ್ತಷ್ಟು ಟೀಕೆಗೆ ಗುರಿಯಾಗಿದೆ.
ಸಾರ್ವಜನಿಕರು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಮಾಲ್‌ನ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಕಾನೂನಾತ್ಮಕ ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ.
ಈ ಹಿಂದೆಯೂ ಮಂತ್ರಿ ಮಾಲ್‌ನಲ್ಲಿ ರೈತನಿಗೆ ಅವಮಾನ, ಫುಡ್ ಡೆಲಿವರಿ ಬಾಯ್‌ಗೆ ಲಿಫ್ಟ್‌ನಲ್ಲಿ ಪ್ರವೇಶ ನಿರಾಕರಣೆ ಮಾಡಿದ ಘಟನೆಗಳು ವಿವಾದಕ್ಕೆ ಕಾರಣವಾಗಿದ್ದವು. ಇದೀಗ ಈ ಲಿಫ್ಟ್ ಘಟನೆ ಮಾಲ್‌ನ ಸುರಕ್ಷತಾ ಕ್ರಮಗಳ ಕುರಿತು ಗಂಭೀರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ