
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಸರಬರಾಜಾಗುತ್ತಿದೆ ಎಂದು ಮಾಂಸದ ವ್ಯಾಪಾರಿಗಳು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರೈಲಿನ ಮೂಲಕ ರಾಜಸ್ಥಾನದಿಂದ ನಗರಕ್ಕೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ಸಂಜೆ ನಡೆದಿತ್ತು. ಇನ್ನು ಆಹಾರ ಇಲಾಖೆಯ ಅಧಿಕಾರಿಗಳು ಈ ಮಾಂಸವು ನಾಯಿಯದ್ದೋ ಅಥವಾ ಕುರಿಯದ್ದೋ ಎಂದು ಪತ್ತೆ ಮಾಡಲು, ಮಾಂಸದ ಮಾದರಿಯನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ.
ಶುಕ್ರವಾರ ರಾಜಸ್ಥಾನದಿಂದ ಸುಮಾರು 90 ಬಾಕ್ಸ್‌ಗಳಲ್ಲಿ ಬೆಂಗಳೂರಿನ ರೈಲ್ವೆ ನಿಲ್ದಾಣಕ್ಕೆ ಮಾಂಸವು ಸರಬರಾಜಾಗಿತ್ತು. ಈ ಬಗ್ಗೆ ಅನುಮಾನಗೊಂಡ ಹಿಂದೂಪರ ಸಂಘಟನೆಗಳು ದಾಳಿ ನಡೆಸಿ, ಸರಬರಾಜಾಗಿರುವ ಮಾಂಸವು ಕುರಿಯದ್ದಲ್ಲ. ನಾಯಿ ಮಾಂಸ ಎಂದು ಅನುಮಾನ ವ್ಯಕ್ತಪಡಿಸಿದರು.
ಬೆಂಗಳೂರಲ್ಲಿ ಪ್ರತಿ ಕೆ.ಜಿ ಮಟನ್‌ಗೆ 750 ರೂ., ಆದರೆ ರಾಜಸ್ಥಾನದಿಂದ ತರಿಸಿಕೊಳ್ಳೋ 450 ರೂ. ಮಾಂಸ ಯಾವುದು?
ಇದೆಲ್ಲದರ ನಡುವೆ ಹಿಂದೂ ಮುಖಂಡ ಪುನೀತ್ ಕೆರೆ ಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಮಧ್ಯರಾತ್ರಿ 12 ಗಂಟೆಗೆ ಬಂಧಿಸಿದ್ದರು. ಬಿಎನ್ಎಸ್ 132 ಆ್ಯಕ್ಟ್ ( ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ, 351 (2) ಅಡಿಯಲ್ಲಿ ಪೊಲೀಸರು ಬಂಧನ ಮಾಡಿದ್ದರು. ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಕ್ಸ್ ಸಾಗಾಟಕ್ಕೆ ತಡೆ ನೀಡಿ, ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಬಂಧನವಾಗಿತ್ತು.
ಆದರೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡು, ಪ್ರಜ್ಙಾಹೀನ ಸ್ಥಿತಿಯಲ್ಲಿದ್ದರು. ಆದರೆ ಬೆಳಗ್ಗಿನ ಜಾವ 4.45 ಕ್ಕೆ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆ ಆತುರಾತುರದಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಗೆ ಅವರನ್ನು ಕರೆತಂದು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿಗೆ ಸರಬರಾಜು ಆಗುತ್ತಿದೆಯೇ ನಾಯಿ ಮಾಂಸ? ರಾಜಸ್ಥಾನದಿಂದ ಬಂದ 4000 ಕೆಜಿ ಉದ್ದಬಾಲದ ಮಾಂಸ ಯಾವುದು?
ಮಧ್ಯರಾತ್ರಿಯಿಂದ ತೀವ್ರವಾದ ಹೊಟ್ಟೆನೋವು ಬಾಧಿಸಿದ ಹಿನ್ನೆಲೆ ಎಂಆರ್ ಐ ಅಥವಾ ಸಿಟಿ ಸ್ಕ್ಯಾನ್ ಮಾಡುವ ಉದ್ದೇಶದಿಂದ ಪುನೀತ್ ಕೆರೆಹಳ್ಳಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಪಿ, ಶುಗರ್ ಎಲ್ಲವೂ ನಾರ್ಮಲ್ ಇದೆ ಎಂದು ಕೆಸಿ ಜನರಲ್ ಹಿರಿಯ ವೈದ್ಯರು ಮಾಹಿತಿ ನೀಡಿದ್ದಾರೆ.
ಕೆರೆಹಳ್ಳಿ ಬಂಧನ ಇತರರು: ನಾಯಿ ಮಾಂಸ ಸಾಗಾಟ ಆರೋಪ ಮಾಡಿದ ಹಿನ್ನೆಲೆ ಬಂಧಿತವಾಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಯಲ್ಲಿದ್ದು, ಇತರ ಸಂಗಡಿಗರನ್ನು ಬಿಡುಗಡೆ ಮಾಡಲಾಗಿದೆ. ಸ್ಟೇಷನ್ ಬೆಲ್ ಕೊಟ್ಟು ಪುನೀತ್ ಕೆರೆಹಳ್ಳಿ ಸಂಗಡಿಗರನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಠಾಣೆಗೆ ಕರೆದುಕೊಂಡು ಬಂದಾಗ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರ ವಿರುದ್ದ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ