ಬೆಂಗಳೂರು (ಆ.15): ರಾಜ್ಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿ 'ಕರ್ನಾಟಕ ಮಾದರಿ' ಮಾಡುತ್ತೇವೆ. ಆದರೆ, ಕರ್ನಾಟಕವು ಕೇಂದ್ರಕ್ಕೆ 4 ಲಕ್ಷ ಕೋಟಿ ರೂ. ತೆರಿಗೆ ಪಾವತಿಸಿದರೆ, ನಮಗೆ ಕೇವಲ 50 ಸಾವಿರ ಕೋಟಿ ರೂ. ಅನುದಾನ ಕೊಡುತ್ತಿದೆ. ಈ ತಾರತಮಯ್ಯದಿಂದಾಗಿ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದ ಅವರು, ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೆಯ ಸ್ಥಾನದಲ್ಲಿದೆ. ಸುಮಾರು 4 ಲಕ್ಷ ಕೋಟಿಗೂ ಹೆಚ್ಚಿನ ತೆರಿಗೆ, ಸುಂಕ, ಮೇಲ್ತೆರಿಗೆಗಳನ್ನು ಕೇಂದ್ರಕ್ಕೆ ಪಾವತಿಸುತ್ತಿದೆ. ಅದರೆ, ನಮಗೆ ವಾಪಸ್ಸು ಬರುತ್ತಿರುವುದು 50 ಸಾವಿರ ಕೋಟಿ ರೂ. ಮಾತ್ರ. ನಮಗೆ ನ್ಯಾಯಯುತವಾಗಿ ಬರಬೇಕಾದಷ್ಟು ಸಂಪನ್ಮೂಲಗಳು ಕೇಂದ್ರದಿಂದ ಮರಳಿ ಬಂದರೆ ರಾಜ್ಯವು ಅತ್ಯಂತ ಶ್ರೀಮಂತ ರಾಜ್ಯವಾಗುವುದು. ಇಷ್ಟರ ನಡುವೆಯೂ ನಾವು ಆರ್ಥಿಕ ಶಿಸ್ತನ್ನು ಸರಿಯಾಗಿ ಪಾಲಿಸುತ್ತಿದ್ದೇವೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ನೈಜ ದೇಶಪ್ರೇಮಿಗಳಿಗೆ ಇದು ಅರ್ಥವಾಗುತ್ತದೆ ಎಂದು ತಿಳಿಸಿದರು.
77ನೇ ಸ್ವಾತಂತ್ರ್ಯ ದಿನಾಚರಣೆಗೆ ರಾಜ್ಯಪಾಲರ ಸಂದೇಶ: 5 ಗ್ಯಾರಂಟಿ ಬಗ್ಗೆ ಶ್ಲಾಘನೆ
- ಸಿಎಂ ಸಿದ್ದರಾಮಯ್ಯ ಸ್ವತಂತ್ರ್ಯ ಭಾಷಣದ ಹೈಲೈಟ್ಸ್
- 20 ಪುಟಗಳ ಭಾಷಣ 35 ನಿಮಿಷ ರಾಜ್ಯದ ಜನರಿಗೆ ಸಂದೇಶ ನೀಡಿದ ಸಿಎಂ ಸಿದ್ದರಾಮಯ್ಯ.
- ತಮ್ಮ ಭಾಷಣದಲ್ಲಿ 5 ಗ್ಯಾರಂಟಿಗಳ ಬಗ್ಗೆ ಪ್ರಸ್ತಾಪ ಮಾಡಿದರು.
- ಕೇಂದ್ರದ ಅಸಹಕಾರದ ವಿರುದ್ದ ಬಹಿರಂಗ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ನೀಡುವ ತೆರಿಗೆ ತಾರತಮ್ಯದ ಬಗ್ಗೆ ಪ್ರಸ್ತಾಪ ಮಾಡಿದರು.
- ಇಂದಿರಾ ಕ್ಯಾಂಟಿನ್ ಮರು ಪ್ರಾರಂಭದ ಬಗ್ಗೆ ಪ್ರಸ್ತಾಪ ಮಾಡಿದರು.
- ಗೃಹಲಕ್ಷ್ಮಿ ಯೋಜನೆ ಆಗಸ್ಟ್ 27 ರಿಂದ ಜಾರಿ ಘೋಷಣೆ ಮಾಡಿದರು.
- ಗ್ಯಾರಂಟಿಗಳ ಜಾರಿ ಮೂಲಕ ಇಡೀ ದೇಶದಲ್ಲಿ ಕರ್ನಾಟಕ ಮಾದರಿ ವಿಷಯ ಚರ್ಚೆ ಎಂಬ ವಿಷಯ ಪ್ರಸ್ತಾಪ ಮಾಡಿದರು.
- ರಾಜ್ಯದಲ್ಲಿ ದುಷ್ಟರ ಆಟ ಬಹಳ ಕಾಲ ನಡೆಯೊಲ್ಲ ಎಂದು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ತಿಳಿಸಿದರು.
- ಬೆಂಗಳೂರು ಮೆಟ್ರೋ ವಿಸ್ತರಣೆ ಮಾಡಲಾಗುವುದು. ಜೊತೆಗೆ, ಬ್ರ್ಯಾಂಡ್ ಬೆಂಗಳೂರು ನಿರ್ಮಿಸಲಾಗುವುದು.
- ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಮಟ್ಟ ಹಾಕುವ ಶಪಥ ಮಾಡಿದ್ದೇವೆ.
- ಭ್ರಷ್ಟಾಚಾರ ಮುಕ್ತ ಆಡಳಿತ, ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ನೀಡುವ ಭರವಸೆ ನೀಡಿದರು.
- ಆರ್ಥಿಕ ಶಿಸ್ತು ಪಾಲಿಸಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿದ್ದೇವೆ ಎಂದರು.
- ಇದು ಎಲ್ಲರ ಭಾರತ , ವೈವಿಧ್ಯತೆಯಲ್ಲಿ ಏಕತೆ ಎಂಬುದು ನಮ್ಮ ಮೂಲಮಂತ್ರವಾಗಿದೆ.
- ಬಿಜೆಪಿ ಸರ್ಕಾರದ ಅವ್ಯವಹಾರಗಳ ಬಗ್ಗೆ ತನಿಖೆ ಕೊಟ್ಟಿರುವ ಬಗ್ಗೆಯೂ ಪ್ರಸ್ತಾಪ.
- ಬೆಂಗಳೂರು ಹೊರತುಪಡಿಸಿ ಬೇರೆ ಬೇರೆ ನಗರಳನ್ನ ಬೆಳಸಿ ಉಪನಗರ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದರು.