ರಾಜ್ಯದ ಮೊದಲ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಇಂದು ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

By Kannadaprabha NewsFirst Published Mar 12, 2023, 7:41 AM IST
Highlights

41 ವರ್ಷಗಳ ಬಳಿಕ ಪ್ರಧಾನಿಯೊಬ್ಬರು ಮಂಡ್ಯಕ್ಕೆ ಆಗಮಿಸುತ್ತಿರುವುದು ಇದೇ ಮೊದಲು. ಜೊತೆಗೆ, ಜತೆಗೆ ಅವರು ಮದ್ದೂರು ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ.

ಮಂಡ್ಯ (ಮಾ.12): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಮತ್ತೊಮ್ಮೆ ಬಿಜೆಪಿ ಪರ ಹವಾ ಸೃಷ್ಟಿಸಲು ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, 11,500 ಕೋಟಿ ರು. ವೆಚ್ಚದಲ್ಲಿ ಬೆಂಗಳೂರು- ಮೈಸೂರು ನಡುವೆ ನಿರ್ಮಾಣಗೊಂಡಿರುವ ರಾಜ್ಯದ ಮೊದಲ ಎಕ್ಸ್‌ಪ್ರೆಸ್‌ ವೇಯನ್ನು ಭಾನುವಾರ ಲೋಕಾರ್ಪಣೆ ಮಾಡಲಿದ್ದಾರೆ.

41 ವರ್ಷಗಳ ಬಳಿಕ ಪ್ರಧಾನಿಯೊಬ್ಬರು ಮಂಡ್ಯಕ್ಕೆ ಆಗಮಿಸುತ್ತಿರುವುದು ಇದೇ ಮೊದಲು. ಜೊತೆಗೆ, ಜತೆಗೆ ಅವರು ಮದ್ದೂರು ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿ. 2004ರ ವಿಧಾನಸಭಾ ಚುನಾವಣೆಯಲ್ಲಿ ಜಯವಾಣಿ-ಮಂಚೇಗೌಡರ ಪುತ್ರ ಡಾ.ಎಂ.ಮಹೇಶ್‌ಚಂದ್‌ ಅವರು ಮದ್ದೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಸಮಯದಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು ಮಹೇಶ್‌ಚಂದ್‌ ಪರ ಪ್ರಚಾರಕ್ಕೆ ಆಗಮಿಸಿದ್ದರು.

Latest Videos

ವಾಲ್ಮೀಕಿಗೆ ಗೌರವ ಸಿಗಬೇಕು ಅಂದ್ರೆ ಬಿಜೆಪಿ ಗೆಲ್ಲಿಸಿ: ನಳಿನ್‌ ಕುಮಾರ್ ಕಟೀಲ್

119 ಕಿ.ಮೀ. ಉದ್ದದ ಈ ಹೆದ್ದಾರಿಯಿಂದಾಗಿ ಬೆಂಗಳೂರಿನಿಂದ ಮೈಸೂರನ್ನು ಕೇವಲ 90 ನಿಮಿಷದಲ್ಲಿ ತಲುಪಬಹುದಾಗಿದೆ. ಈ ಹೆದ್ದಾರಿಯಲ್ಲಿ 19 ದೊಡ್ಡ ಸೇತುವೆ, 41 ಸಣ್ಣ ಸೇತುವೆ, 4 ರೈಲ್ವೆ ಮೇಲ್ಸೇತುವೆ, 50 ಅಂಡರ್‌ಪಾಸ್‌ಗಳನ್ನು ನಿರ್ಮಿಸಲಾಗಿದೆ. ಇದಕ್ಕೂ ಮೊದಲು, ಪ್ರವಾಸಿಮಂದಿರ ವೃತ್ತದಿಂದ ಎಸ್‌.ಡಿ.ಜಯರಾಂ ಸರ್ಕಲ್‌ವರೆಗೆ 1.8 ಕಿ.ಮೀ. ದೂರ ಮೋದಿ ಅವರು ಬೃಹತ್‌ ರೋಡ್‌ ಶೋ ನಡೆಸಲಿದ್ದು, 40 ಸಾವಿರ ಜನ ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಅದ್ದೂರಿ ಸ್ವಾಗತಕ್ಕೆ ಸಿದ್ಧತೆ: 2023ರಲ್ಲಿ ಮೋದಿ ರಾಜ್ಯಕ್ಕೆ ನೀಡುತ್ತಿರುವ 6ನೇ ಭೇಟಿ ಇದಾಗಿದ್ದು, ಮೋದಿಯನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಧಾರವಾಡದಲ್ಲಿ ಐತಿಹಾಸಿಕ ಹಿನ್ನೆಲೆಯುಳ್ಳ ಕಲಘಟಗಿಯ ತೊಟ್ಟಿಲನ್ನು ಮೋದಿಗೆ ಕೊಡುಗೆಯಾಗಿ ನೀಡಲಾಗುತ್ತಿದೆ. ಕಲಘಟಗಿ ಕಲಾವಿದ ಮಾರುತಿ ಬಡಿಗೇರ ಅವರು ನೈಸರ್ಗಿಕ ಬಣ್ಣಗಳಿಂದ 9 ಇಂಚು ಉದ್ದ ಹಾಗೂ ಆರು ಇಂಚು ಅಗಲದಲ್ಲಿ ತೊಟ್ಟಿಲಿನ ಮಾದರಿಯನ್ನು ಸಿದ್ಧಪಡಿಸಿದ್ದಾರೆ. 

ಇದರೊಂದಿಗೆ ಸಿದ್ಧಾರೂಢರ ಮೂರ್ತಿ, ಕಸೂತಿ ಶಾಲು, ಯಾಲಕ್ಕಿ ಹಾರ ಹಾಗೂ ಯಾಲಕ್ಕಿ ಪೇಟವನ್ನು ಸಹ ಉಡುಗೊರೆಯಾಗಿ ನೀಡಲಾಗುತ್ತಿದೆ. ಅಲ್ಲದೆ, 2023 ವಿಶ್ವ ಸಿರಿಧಾನ್ಯ ವರ್ಷಾಚರಣೆಯಾಗಿದ್ದು, ವೇದಿಕೆ ಎದುರು ಬೃಹತ್‌ ಗಾತ್ರದಲ್ಲಿ ಸಿರಿಧಾನ್ಯಗಳ ರಂಗೋಲಿ ಮೂಲಕ ಪ್ರಧಾನಿಗೆ ಸ್ವಾಗತ ನೀಡಲಾಗುತ್ತಿದೆ. ಜೊತೆಗೆ, ಸ್ಥಳೀಯ ಕಲಾವಿದರು ವಿವಿಧ ವೇಷಭೂಷಣದ ಮೂಲಕ ಅವರನ್ನು ಸಮಾರಂಭಕ್ಕೆ ಬರಮಾಡಿಕೊಳ್ಳಲಿದ್ದಾರೆ. ಈ ಸಮಾರಂಭಕ್ಕೆ 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆಯಿದೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಮಂಡ್ಯ ಹಾಗೂ ಧಾರವಾಡ ನಗರಗಳು ಸಂಪೂರ್ಣ ಕೇಸರಿಮಯವಾಗಿವೆ. ನಗರದ ಪ್ರಮುಖ ರಸ್ತೆ, ಹೆದ್ದಾರಿಗಳಲ್ಲಿ ಕೇಸರಿ ಬಣ್ಣದ ಬಾವುಟಗಳು, ಮೋದಿಗೆ ಸ್ವಾಗತ ಕೋರುವ ಪ್ಲೆಕ್ಸ್‌ಗಳು, ಬೃಹತ್‌ ಕಟೌಟ್‌ಗಳು ರಾರಾಜಿಸುತ್ತಿವೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರೋಡ್‌ ಶೋ ಸೇರಿದಂತೆ ಮೋದಿ ಪಾಲ್ಗೊಳ್ಳುವ ಎಲ್ಲಾ ಕಾರ್ಯಕ್ರಮಗಳ ಸ್ಥಳಗಳಲ್ಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ ಡ್ರೋನ್‌ ಕ್ಯಾಮರಾ ಬಳಕೆ ನಿಷೇಧಿಸಲಾಗಿದೆ. ಬೆಂ-ಮೈ ಹೆದ್ದಾರಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.

ಅಥಣಿ ಬಿಡಲ್ಲ: ರಮೇಶ್‌ ಜಾರಕಿಹೊಳಿಗೆ ಲಕ್ಷ್ಮಣ ಸವದಿ ಪುತ್ರ ತಿರುಗೇಟು

ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ: ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಹೆದ್ದಾರಿ ಉದ್ಘಾಟನೆಗೆ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ನಿಷೇಧಿಸಲಾಗಿದೆ. ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಗ್ಗೆ 9 ಗಂಟೆಯವರೆಗೆ ಸವೀರ್‍ಸ್‌ ರಸ್ತೆಯಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ ಬೆಳಗ್ಗೆ 9.30 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ.

click me!