
ರಾಮನಗರ (ಮಾ.14) : ತೀವ್ರ ವಿರೋಧದ ನಡುವೆಯೂ ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ.14ರ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಟೋಲ್ ವಸೂಲಿ ಆರಂಭವಾಗಲಿದೆ.
ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಭಾನುವಾರ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದ್ದರು. ಈ ಹಿಂದೆ ಮಾಚ್‌ರ್ 1ರಿಂದಲೇ ಟೋಲ… ಸಂಗ್ರಹಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(National Highways Authority of India) ಮುಂದಾಗಿತ್ತು. ಅದಕ್ಕೆ ಸಾಕಷ್ಟುವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹವನ್ನು ಮಾಚ್‌ರ್ 14ಕ್ಕೆ ಮುಂದೂಡಲಾಗಿತ್ತು. ಈ ಮಧ್ಯೆ, ಸೋಮವಾರ ಈ ಬಗ್ಗೆ ಆದೇಶ ಹೊರಡಿಸಿರುವ ಪ್ರಾಧಿಕಾರ, ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹ ಆರಂಭವಾಗಲಿರುವುದಾಗಿ ತಿಳಿಸಿದೆ.
ಬೆಂಗಳೂರಿನಿಂದ-ನಿಡಘಟ್ಟದವರೆಗೆ ಸುಮಾರು 56 ಕಿ.ಮೀ. ರಸ್ತೆಗೆ ನಾಳೆಯಿಂದ ಟೋಲ… ಸಂಗ್ರಹ ಆರಂಭವಾಗಲಿದ್ದು, ಟೋಲ… ದರ ಹೀಗಿದೆ.
ವಾಹನ ಮಾದರಿ ಏಕಮುಖ ಶುಲ್ಕ ದ್ವಿಮುಖ ಸಂಚಾರ ಸ್ಥಳೀಯ ವಾಹನಗಳಿಗೆ ತಿಂಗಳ ಪಾಸ್
ಕಾರು, ಜೀಪು, ವ್ಯಾನುಗಳಿಗೆ
ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್.
ಸ್ಥಳೀಯ ವಾಹನಗಳಿಗೆ 110 ರು., ಒಂದು ತಿಂಗಳ 50 ಏಕಮುಖ ಸಂಚಾರದ ಪಾಸ್‌ಗೆ 7,315 ರು.
ವಾಣಿಜ್ಯ ವಾಹನಗಳು (ಮೂರು ಆಕ್ಸೆಲ್)
ಭಾರಿ ನಿರ್ಮಾಣ ಯಂತ್ರ, ಭೂ ಅಗೆತ ಸಾಧನ,ಬಹು ಆಕ್ಸೆಲ… ವಾಹನ (6ರಿಂದ 8 ಆಕ್ಸೆಲ…)
- ಏಕಮುಖ ಸಂಚಾರಕ್ಕೆ 720 ರು.
- ಅದೇ ದಿನ ಮರು ಸಂಚಾರಕ್ಕೆ 1,080 ರು. ಸ್ಥಳೀಯ ವಾಹನಗಳಿಗೆ 360 ರು., ಒಂದು ತಿಂಗಳ 50 ಏಕಮುಖ ಸಂಚಾರದ ಪಾಸ್‌ಗೆ 24,030 ರು.
* ಅತಿ ಗಾತ್ರದ ವಾಹನಗಳು (7ರಿಂದ ಹೆಚ್ಚಿನ ಆಕ್ಸೆಲ…)
- ಏಕಮುಖ ಸಂಚಾರಕ್ಕೆ 880 ರು.
- ಅದೇ ದಿನ ಮರು ಸಂಚಾರಕ್ಕೆ 1,315ರು. ಸ್ಥಳೀಯ ವಾಹನಗಳಿಗೆ 440ರು. ಒಂದು ತಿಂಗಳ 50 ಏಕಮುಖ ಸಂಚಾರದ ಪಾಸ್‌ಗೆ 29,255 ರು.
ಕಾಂಗ್ರೆಸ್ ಪ್ರತಿಭಟನೆ:
ಈ ಮಧ್ಯೆ, ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಕೆ ನೀಡಿದೆ. ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಸಂಗ್ರಹ ಮಾಡಿದರೆ ಪ್ರತಿಭಟನೆ ಮಾಡುವುದಾಗಿ ಬಿಡದಿ ಬ್ಲಾಕ್ ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ