ಲಾಲ್‌ಬಾಗ್‌ ಫ್ಲವರ್‌ ಶೋ ,ಗುಡ್ ನ್ಯೂಸ್ ನೀಡಿದ ನಮ್ಮ ಮೆಟ್ರೋ, ಪೇಪರ್ ಟಿಕೆಟ್ ಎಲ್ಲಿ ಸಿಗಲಿದೆ?

By Gowthami K  |  First Published Aug 12, 2024, 2:59 PM IST

ಗಣರಾಜ್ಯೋತ್ಸವದಂದು ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ರಿಟರ್ನ್‌ ಜರ್ನಿ ಪೇಪರ್ ಟಿಕೆಟ್ ಸೌಲಭ್ಯ ಜಾರಿಗೊಳಿಸಿದೆ.


ಬೆಂಗಳೂರು (ಆ.12): ಗಣರಾಜ್ಯೋತ್ಸವದಂದು ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ರಿಟರ್ನ್‌ ಜರ್ನಿ ಪೇಪರ್ ಟಿಕೆಟ್ ಸೌಲಭ್ಯ ಜಾರಿಗೊಳಿಸಿದೆ.

ನಮ್ಮ ಮೆಟ್ರೋದಲ್ಲಿ ಆಗಸ್ಟ್ 15, 17  18 ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಪೇಪರ್ ಟಿಕೆಟ್ ವಿತರಣೆ ಮಾಡಲಾಗುವುದು. ಪೇಪ‌ರ್ ಟಿಕೆಟನ್ನು ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೆ ನಗರದ ಎಲ್ಲ ನಿಲ್ದಾಣಗಳಲ್ಲಿ ಖರೀದಿಸಬಹುದು. ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ 8 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಿದೆ. ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ₹30 ಟಿಕೆಟ್ ದರ ನಿಗದಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

Latest Videos

undefined

ಲಾಲ್‌ಬಾಗ್ ನಿಲ್ದಾಣಕ್ಕೆ ಟೋಕನ್, ಸ್ಮಾರ್ಟ್‌ಕಾರ್ಡ್ ಸೇರಿ ಕ್ಯೂಆರ್ ಕೋಡ್ ಟಿಕೆಟ್‌ಗಳ ಮೂಲಕ ಪ್ರಯಾಣಿಸಬಹುದು. ನಂತ್ರ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್ ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್ ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಲು ವ್ಯವಸ್ಥೆ. ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್ಗಳನ್ನು ಖರೀದಿಸುವಂತೆ ವಿನಂತಿ ಮಾಡಲಾಗಿದೆ.

ಒಂದೇ ದಿನ ಫಲಪುಷ್ಪ ಪ್ರದರ್ಶನಕ್ಕೆ 68,148 ಜನ ಭೇಟಿ:
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ರಜಾ ದಿನವಾದ ಭಾನುವಾರ 68,148 ಜನ ಭೇಟಿ ನೀಡಿದ್ದಾರೆ.

ನಾಲ್ಕನೇ ದಿನವಾದ ಭಾನುವಾರ 60,726 ವಯಸ್ಕರು ಮತ್ತು 7422 ಮಕ್ಕಳು ಲಾಲ್‌ಬಾಗ್‌ಗೆ ಭೇಟಿ ನೀಡಿದ್ದು ಒಟ್ಟಾರೆ 42.32 ಲಕ್ಷ ರು. ಪ್ರವೇಶ ಶುಲ್ಕ ಸಂಗ್ರಹವಾಗಿದೆ. ಶಾಲಾ-ಕಾಲೇಜು, ಕಚೇರಿಗಳಿಗೆ ರಜಾ ಇದ್ದಿದ್ದರಿಂದ ಕುಟುಂಬ ಸಮೇತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಕೆಆರ್‌ಎಸ್‌ ತುಂಬಿ ನೂರಾರು ಟಿಎಂಸಿ ನೀರು ಹರಿದು ಹೋದರೂ ಮಂಡ್ಯದ ಕೆರೆಗ ...

‘ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನವನ್ನು ಈ ಬಾರಿ ಆಯೋಜಿಸಿದ್ದು ಗಾಜಿನ ಮನೆ, ಬಂಡೆ, ಕೆರೆ ಏರಿ, ಮಳಿಗೆಗಳು ಮತ್ತಿತರ ಸ್ಥಳಗಳಲ್ಲಿ ಕಿಕ್ಕಿರಿದ ಜನ ಸಂದಣಿ ಕಂಡುಬಂತು. ಜನತೆ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಟಿಕೆಟ್‌ ಪಡೆಯಲು ಹೆಚ್ಚಿನ ಸಮಯ ಸರದಿ ಸಾಲಿನಲ್ಲಿ ನಿಂತುಕೊಳ್ಳಬೇಕಾಯಿತು. ಬಂಡೆ, ಆಕರ್ಷಕ ಹೂವುಗಳ ಬಳಿ ಜನರು ಸೆಲ್ಫಿ ತೆಗೆದುಕೊಳ್ಳುವಲ್ಲಿ ಹೆಚ್ಚಾಗಿ ನಿರತರಾಗಿದ್ದು ಕಂಡುಬಂತು. ಗಾಜಿನ ಮನೆಯಲ್ಲಿನ ಆಕರ್ಷಕ ಹೂವುಗಳ ಚಿತ್ತಾರವನ್ನು ಮೊಬೈಲ್‌ನಲ್ಲಿ ಹೆಚ್ಚಾಗಿ ಜನರು ಸೆರೆ ಹಿಡಿಯುತ್ತಿದ್ದರಿಂದ ಜನಸಂದಣಿ ಹೆಚ್ಚಾಗಿದ್ದು ಕಂಡುಬಂತು.

ಲಾಲ್‌ಬಾಗ್‌ಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಈ ಭಾಗದಲ್ಲಿ ವಾಹನ ದಟ್ಟಣೆ ಉಂಟಾಗಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ಪೊಲೀಸರು ಹರಸಾಹಸಪಟ್ಟರು.

click me!