ಹಳದಿ ಮೆಟ್ರೋಗೆ ಚಾಲನೆ ನೀಡಿದ ಮೋದಿ; ನಾಳೆಯಿಂದ ಸಾರ್ವಜನಿಕರ ಸಂಚಾರಕ್ಕೆ ಮುಕ್ತ! ಹತ್ತಾರು ವಿಶೇಷತೆಗಳು

Published : Aug 10, 2025, 12:27 PM IST
Narendra Modi Yellow Line Metro

ಸಾರಾಂಶ

ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಆರ್‌.ವಿ.ರಸ್ತೆ-ಬೊಮ್ಮಸಂದ್ರ ನಡುವಿನ 19.15 ಕಿ.ಮೀ. ಹಳದಿ ಮೆಟ್ರೋ ಮಾರ್ಗ ಸೋಮವಾರದಿಂದ ಕಾರ್ಯಾರಂಭ. ಆರಂಭದಲ್ಲಿ ಮೂರು ರೈಲುಗಳು 20-25 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ. 2026ರಲ್ಲಿ 15 ರೈಲುಗಳೊಂದಿಗೆ ದೈನಂದಿನ 3.5 ಲಕ್ಷ ಪ್ರಯಾಣಿಕರ ಸಂಚಾರ ನಿರೀಕ್ಷಿತ.

ಬೆಂಗಳೂರು (ಆ.10): ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಮೂರು ರೈಲುಗಳ ಮೂಲಕ ಈ ಮಾರ್ಗದಲ್ಲಿ ಮೆಟ್ರೋ ರೈಲು ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭಿಸಲಿದೆ.

ಮೂರು ವರ್ಷದ ವಿಳಂಬದ ಬಳಿಕ ಹಳದಿ ಮಾರ್ಗ ಆರಂಭ ಆಗುತ್ತಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ. ನಿತ್ಯ ಸುಮಾರು 25 ರಿಂದ 30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆಯಿದೆ. 2026ರ ಮಾರ್ಚ್‌ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್‌ಸಿಎಲ್‌ ಅಂದಾಜಿಸಿದೆ.

ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್‌ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ. ರಾಗಿಗುಡ್ಡದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್‌ ಡೆಕ್ಕರ್ (3.3 ಕಿ.ಮೀ.) ನಿರ್ಮಿಸಲಾಗಿದೆ. ಡಬ್ಬಲ್‌ ಡೆಕ್ಕರ್‌ ಫ್ಲೈಓವರ್‌ನ ಮೇಲ್ಭಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜತೆಗೆ ಈ ಮಾರ್ಗದ ಜಯದೇವ ಇಂಟರ್‌ ಚೇಂಜ್‌ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು ಐದು ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.

ರೈಲುಗಳ ಸೇರ್ಪಡೆ:

ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ. ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್‌ ಬೇಸ್ಡ್ ಟ್ರೈನ್‌ ಕಂಟ್ರೋಲ್‌) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ. ಅರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಹಳದಿ ಮಾರ್ಗದಲ್ಲಿ 3 ಇಂಟರ್‌ಚೇಂಜ್

  • ಆರ್‌.ವಿ. ರೋಡ್‌ ಹಸಿರು ಮಾರ್ ರೇಷ್ಮೆ ಸಂಸ್ಥೆ - ಮಾದಾವರ
  • ಜಯದೇವ ಆಸ್ಪತ್ರೆ ಗುಲಾಬಿ ಮಾರ್ಗ ನಾಗಾವರ - ಕಾಳೇನ ಅಗ್ರಹಾರ
  • ಸಿಲ್ಕ್‌ ಬೋರ್ಡ್‌ ನೀಲಿ ಮಾರ್ಗ (2ಎ) ಸಿಲ್ಕ್‌ಬೋರ್ಡ್‌ - ಕೆಆರ್‌ ಪುರಂ

ಹಳದಿ ಮಾರ್ಗದ ನಿಲ್ದಾಣಗಳು ಯಾವುವು?

ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೋಸಿಸ್‌ ಫೌಂಡೇಶನ್‌ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್‌ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲುಗೇಟ್‌, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌, ಬಿಟಿಎಂ ಲೇಔಟ್‌, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್‌.ವಿ.ರಸ್ತೆ ನಿಲ್ದಾಣ.

ಹಳದಿ ಮಾರ್ಗ ಮೆಟ್ರೋ ರೈಲು ವಿವರ

  • ಮಾರ್ಗ ಹಳದಿ
  • ಸಂಪರ್ಕ ಆರ್‌.ವಿ.ರಸ್ತೆ - ಬೊಮ್ಮಸಂದ್ರ
  • ಉದ್ದ 19.15 ಕಿಮೀ
  • ನಿಲ್ದಾಣ 16
  • ಇಂಟರ್‌ಚೇಂಜ್‌ 3
  • ಡಬ್ಬಲ್‌ ಡೆಕ್ಕರ್ ರಾಗಿಗುಡ್ಡ - ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ (3.3ಕಿಮೀ)
  • ಒಟ್ಟೂ ವೆಚ್ಚ ₹ 5,056.99 ಕೋಟಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ