Corona in bengaluru 2025 : 9 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆ; ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ!

Published : May 23, 2025, 12:55 AM ISTUpdated : May 23, 2025, 01:13 AM IST
Corona in bengaluru 2025 : 9 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆ; ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ!

ಸಾರಾಂಶ

ಕೊರೊನಾ ಮಹಾಮಾರಿಯ ಭೀತಿ ಮತ್ತೆ ಕಾಡತೊಡಗಿದೆ. ಬೆಂಗಳೂರಿನ ಹೊಸಕೋಟೆಯ 9 ತಿಂಗಳ ಮಗುವೊಂದಕ್ಕೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈ ಮಗುವನ್ನು ಹೊಸಕೋಟೆಯ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 22ರಂದು ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಮಗುವಿಗೆ ಸೋಂಕು ಇರುವುದು ಖಚಿತವಾಗಿದೆ. 

ಬೆಂಗಳೂರು (ಮೆ.23): ಕೊರೊನಾ ಮಹಾಮಾರಿಯ ಭೀತಿ ಮತ್ತೆ ಕಾಡತೊಡಗಿದೆ. ಬೆಂಗಳೂರಿನ ಹೊಸಕೋಟೆಯ 9 ತಿಂಗಳ ಮಗುವೊಂದಕ್ಕೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈ ಮಗುವನ್ನು ಹೊಸಕೋಟೆಯ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 22ರಂದು ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಮಗುವಿಗೆ ಸೋಂಕು ಇರುವುದು ಖಚಿತವಾಗಿದೆ. 

ಈ ಹಿನ್ನೆಲೆಯಲ್ಲಿ ವೈದ್ಯರ ಶಿಫಾರಸಿನಂತೆ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 22ರ ರಾತ್ರಿಯಿಂದ ಮಗುವಿಗೆ ಚಿಕಿತ್ಸೆ ಆರಂಭವಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೇರಳದಲ್ಲಿ 182 ಕೊರೊನಾ ಪ್ರಕರಣ; ರಾಜ್ಯದಲ್ಲಿ ಎಚ್ಚರ: 

ಇತ್ತೀಚಿನ ದಿನಗಳಲ್ಲಿ ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೊರೊನಾದ ರೂಪಾಂತರಿ ಒಮಿಕ್ರಾನ್ ಜೆಎನ್‌1 ಉಪ ತಳಿಗಳಾದ ಎನ್‌ಬಿ.1.8 ಮತ್ತು ಎಲ್‌ಎಫ್‌.7 ಕೇಸ್‌ಗಳು ಹೆಚ್ಚುತ್ತಿರುವ ವರದಿಗಳು ಬಂದಿವೆ. ಇದೇ ವೇಳೆ ಕೇರಳದಲ್ಲಿ ಮೇ ತಿಂಗಳಲ್ಲಿ 182 ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಸಂಖ್ಯೆಯ ಏರಿಕೆಯಿಂದಾಗಿ ಕೇರಳ ಸರಕಾರವು ಕೊಟ್ಟಾಯಂ, ಎರ್ನಾಕುಲಂ, ಮತ್ತು ತಿರುವನಂತಪುರ ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. 

ಬೆಂಗಳೂರಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌