ಬೆಂಗಳೂರು: ಮನೆ, ಅಂಗಡಿ ಪಿಜಿಗಳಲ್ಲಿ ದಸರಾ ಹಬ್ಬದ ರಾಶಿ ರಾಶಿ ಕಸ.. ತ್ಯಾಜ್ಯ ಸಂಗ್ರಹಿಸಲು ವಾಹನವೇ ಬರುತ್ತಿಲ್ಲ..!

Kannadaprabha News   | Kannada Prabha
Published : Oct 22, 2026, 07:12 AM IST
no vehicle come to collect garbage

ಸಾರಾಂಶ

ಬೆಂಗಳೂರು ಉತ್ತರ ನಗರ ಪಾಲಿಕೆ ನಡೆಸಿದ ಎರಡನೇ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಸದ ಸಮಸ್ಯೆಗಳ ಬಗ್ಗೆ ಹತ್ತಕ್ಕೂ ಹೆಚ್ಚು ದೂರುಗಳು ಬಂದಿವೆ. ಈ ದೂರುಗಳನ್ನು 'ಸಹಾಯ 2.0' ವ್ಯವಸ್ಥೆಯಲ್ಲಿ ದಾಖಲಿಸಿ ಶೀಘ್ರವೇ ಇತ್ಯರ್ಥಪಡಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು (ಅ.22): ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕಸ ಸಂಗ್ರಹಣೆಗೆ ವಾಹನಗಳು ಆಗಮಿಸದಿರುವ, ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದು ಮತ್ತು ರಸ್ತೆ ಸ್ವಚ್ಛತೆ ಕೈಗೊಳ್ಳದಿರುವ ಕುರಿತು ಎರಡನೇ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ದೂರುಗಳು ಸ್ವೀಕೃತಗೊಂಡಿವೆ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆ ತಿಳಿಸಿದೆ.

ತ್ಯಾಜ್ಯ ಸಂಗ್ರಹಿಸಲು ವಾಹನ ಬರುತ್ತಿಲ್ಲ: 8 ದೂರು

ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್‌ಕುಮಾರ್‌ ಮಾರ್ಗದರ್ಶನದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಿಂದ ಅಹವಾಲು ಆಲಿಸಲಾಯಿತು. ಕಸ ಸಂಗ್ರಹಣಾ ವಾಹನ ಆಗಮಿಸದಿರುವ ಕುರಿತು ಎಂಟು ದೂರುಗಳು ಹಾಗೂ ಖಾಲಿ ನಿವೇಶನದಲ್ಲಿ ಕಸ ಸುರಿಯುವ ಮತ್ತು ರಸ್ತೆ ಕಸ ಗುಡಿಸಲು ಕಾರ್ಯ ಕೈಗೊಳ್ಳದಿರುವ ಬಗ್ಗೆ ತಲಾ ಒಂದೊಂದು ದೂರುಗಳು ಬಂದಿವೆ.

ಸಹಾಯ 2.0’ ವ್ಯವಸ್ಥೆಯಲ್ಲಿ ದಾಖಲಿಸಿ

ಸ್ವೀಕೃತ ಅಹವಾಲುಗಳನ್ನು ‘ಸಹಾಯ 2.0’ ವ್ಯವಸ್ಥೆಯಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುತ್ತಿದೆ. ಅಹವಾಲುಗಳ ವಿಲೇವಾರಿ ಪ್ರಗತಿ ಪರಿಶೀಲಿಸಿ, ಅವುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ 7 ವಿಭಾಗಗಳಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಲು ಬ್ಲಾಕ್‌ವಾರು ಮೈಕ್ರೋ ಪ್ಲಾನಿಂಗ್ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಜಂಟಿ ಆಯುಕ್ತರಾದ ಪಲ್ಲವಿ, ಮೊಹಮ್ಮದ್ ನಯೀಮ್ ಮೊಮಿನ್, ಉಪ ಆಯುಕ್ತ ಸೋಮಶೇಖರ, ಡಿಜಿಎಂ ರಶ್ಮಿ ಸೇರಿದಂತೆ ಇತರರಿದ್ದರು.

ದಸರಾ ಹಬ್ಬದ ಕಸ ನಿಗದಿತ ಸ್ಥಳದಲ್ಲಿ ಹಾಕಲು ಮನವಿ

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು, ರೈತರು, ನಾಗರಿಕರು ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ ನಿಗದಿತ ಸ್ಥಳದಲ್ಲಿ ತ್ಯಾಜ್ಯವನ್ನು ತಂದು ಹಾಕುವಂತೆ ಬೆಂಗಳೂರು ನಗರ ಕೇಂದ್ರ ಪಾಲಿಕೆ ಆಯುಕ್ತ ಜಿ.ಜಗದೀಶ್‌ ಮನವಿ ಮಾಡಿದ್ದಾರೆ.

ಕೆ.ಆರ್.ಮಾರುಕಟ್ಟೆ ಮತ್ತು ಸುತ್ತಲಿನ ಪ್ರದೇಶ, ಗಾಂಧಿಬಜಾರ್, ಆಟದ ಮೈದಾನಗಳ ಹತ್ತಿರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ರೈತರು, ವ್ಯಾಪಾರಸ್ಥರು ಬಾಳೆ ದಿಂಡು, ಕುಂಬಳಕಾಯಿ, ಹೂವು, ಹಣ್ಣು ಹಂಪಲು ಇತರೆ ತಳಿರು ತೋರಣಗಳ ವಸ್ತುಗಳನ್ನು, ಪೂಜಾ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿರುವ ರೈತರು, ವ್ಯಾಪಾರಸ್ಥರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ರಸ್ತೆ ಬದಿಯಲ್ಲಿ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಕುವುದರಿಂದ ನಗರ ಪಾಲಿಕೆಯ ಸ್ವಚ್ಛತಾ ಸಿಬ್ಬಂದಿಗಳಾದ ಪೌರಕಾರ್ಮಿಕರು ತ್ಯಾಜ್ಯವನ್ನು ತೆಗೆಯಲು ಹೆಚ್ಚಿನ ಶ್ರಮ ವಹಿಸಬೇಕಾಗುತ್ತದೆ. ಹಾಗಾಗಿ ವ್ಯಾಪಾರಸ್ಥರು ವ್ಯಾಪಾರ ಮುಗಿದ ಮೇಲೆ ಉಳಿಯುವ ತ್ಯಾಜ್ಯವನ್ನು ನಿಗದಿಪಡಿಸಿದ ಸ್ಥಳದಲ್ಲಿ ತಂದು ಹಾಕುವಂತೆ ಆಯುಕ್ತರು ವಿನಂತಿಸಿದ್ದಾರೆ.

ದಸರಾ ಹಬ್ಬದ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿಗಾಗಿ ಹಬ್ಬದ ತ್ಯಾಜ್ಯ ಉತ್ಪತ್ತಿಯಾಗುವ ಸ್ಥಳಗಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ಹಾಗೂ ಆಟೋ ಟಿಪ್ಪರ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಬೆಂಗಳೂರು - ಮನೆ, ಅಂಗಡಿ ಪಿಜಿಗಳಲ್ಲಿ ದಸರಾ ಹಬ್ಬದ ರಾಶಿ ರಾಶಿ ಕಸ.. ತ್ಯಾಜ್ಯ ಸಂಗ್ರಹಿಸಲು ವಾಹನವೇ ಬರುತ್ತಿಲ್ಲ..!
ಆಲಿಸು ಕಂದ: ಶ್ರವಣದೋಷವುಳ್ಳ ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್; ಆರೋಗ್ಯ ಇಲಾಖೆಯಿಂದ ಮಹತ್ವದ ಯೋಜನೆ ಜಾರಿ!