ಹ್ಯಾಂಡ್‌ ಬ್ರೇಕ್‌ ಹಾಕ್ದೆ ಡ್ರೈವರ್‌ ಯಡವಟ್ಟು, ಪ್ರಪಾತಕ್ಕೆ ಬಿದ್ದ ಕಾರು: ಕಾಶ್ಮೀರದಲ್ಲಿ ಬೆಂಗ್ಳೂರಿನ ಮೂವರ ಸಾವು..!

By Girish Goudar  |  First Published Jul 16, 2024, 9:09 PM IST

ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಎದುರಿಗಿದ್ದ ಕಾರೊಂದು ಕೆಟ್ಟು ನಿಂತಿತ್ತು, ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದನು. ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ, ಹೀಗಾಗಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 


ಬೆಂಗಳೂರು(ಜು.16):  ಪ್ರಪಾತಕ್ಕೆ ಕಾರು ಬಿದ್ದ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟು, ಒಬ್ಬರಿಗೆ ಗಾಯಗಳಾದ ಘಟನೆ ಜಮ್ಮು ಕಾಶ್ಮೀರದಲ್ಲಿ ಇಂದು(ಮಂಗಳವಾರ) ನಡೆದಿದೆ. 

ಜಮ್ಮು ಕಾಶ್ಮೀರ ಪ್ರವಾಸಕ್ಕೆಂದು ತೆರಳಿದ್ದ ಒಂದೇ ಕುಟುಂಬದ ತಂದ್ರ ದಾಸ್(67), ಮೊನಾಲಿಸಾ ದಾಸ್(41), ಮತ್ತೊಬ್ಬ ಪುರುಷ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಬಾಲಕಿ ಅದ್ರಿತಾ ಖಾನ್(9)ಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೃತರು ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದಾರೆ. 

Tap to resize

Latest Videos

ಬನ್ನೇರುಘಟ್ಟ ರಸ್ತೆಯಲ್ಲಿ ಆಟೋ, ಬೈಕ್‌ಗಳಿಗೆ ಗುದ್ದಿದ ಬಿಎಂಟಿಸಿ ಬಸ್; ಒಬ್ಬ ಸಾವು ಹಲವರ ಸ್ಥಿತಿ ಗಂಭೀರ

ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ದುರ್ಘಟನೆ ಸಂಭವಿಸಿದೆ. ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಎದುರಿಗಿದ್ದ ಕಾರೊಂದು ಕೆಟ್ಟು ನಿಂತಿತ್ತು, ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದನು. ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ, ಹೀಗಾಗಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನ ಸಿಆರ್ ಪಿಎಫ್ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಹೊರತೆಗೆದಿದ್ದಾರೆ. 

click me!